ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಾಂಬ್ ಬೆದರಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮನೆ ಸ್ಪೋಟಿಸುವುದಾಗಿ ಈಮೇಲ್ ಬೆದರಿಕೆ ಸಂದೇಶ ಬಂದಿದೆ. ಹುಸಿ ಬಾಂಬ್ ಬೆದರಿಕೆ ಪ್ರಕರಣ ಹೆಚ್ಚಳ ಹಿನ್ನೆಲೆ ಬುಧವಾರವಷ್ಟೇ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿತ್ತು. ಅದರ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮನೆಗೇ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ಇದನ್ನೂ ಓದಿ:ಪಾಕ್ Vs ಅಫ್ಘಾನ್ ನಡುವೆ 48 ಗಂಟೆಗಳ ಕದನ ವಿರಾಮಕ್ಕೆ ಒಪ್ಪಿಗೆ
ಆರು ಆರ್‌ಡಿಎಕ್ಸ್ ಫಿಕ್ಸ್ ಮಾಡಿದ್ದೇವೆ ಎಂದು dkshivakumar1 ಜಿಮೇಲ್‌ಗೆ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ತಕ್ಷಣ ಬಾಂಬ್ ಸ್ಕ್ವಾಡ್ ಸಿಎಂ ಹಾಗೂ ಡಿಸಿಎಂ ನಿವಾಸಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. aarna.ashwinshekher@outlook.com ಎಂಬ ಜಿಮೇಲ್ ಐಡಿಯಿಂದ ಈ ಬೆದರಿಕೆ ಸಂದೇಶ ಬಂದಿದೆ. ಇದು ಹುಸಿ ಬಾಂಬ್ ಕರೆ ಎಂದು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ. ಅಶ್ವಥ್ ನಾರಾಯಣಸ್ವಾಮಿ ಎಂಬವರ ದೂರು ಆಧರಿಸಿ ಕೇಸ್ ದಾಖಲಾಗಿದೆ. ತಮಿಳುನಾಡಿನ ವ್ಯಕ್ತಿಯೋರ್ವನಿಂದ ಬೆದರಿಕೆ ಸಂದೇಶ ಕಳುಹಿಸಿರುವ ಅನುಮಾನಗಳು ವ್ಯಕ್ತವಾಗಿದ್ದು, ಆತನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಈ ಮೊದಲು ಹೈಕೋರ್ಟ್‌ಗೂ ಇಂಥ ಬಾಂಬ್ ಬೆದರಿಕೆ ಕರೆ ಬಂದಿತ್ತು. ಬೆಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟ್‌ಗೆ, ಖಾಸಗಿ ಶಾಲೆಗಳಿಗೆ ಇಂಥ ಬೆದರಿಕೆ ಬರುವುದು ಮಾಮೂಲಾಗಿದೆ. ಇದೀಗ ಸಿಎಂ, ಡಿಸಿಎಂ ಮನೆಗಳನೂ ಕಿಡಿಗೇಡಿಗಳು ಟಾರ್ಗೆಟ್ ಮಾಡಿದ್ದಾರೆ.

ನೋಡಿರಿ

