ಬೆಂಗಳೂರಲ್ಲಿ ಸೈಟ್ ಪಡೆದು ಮನೆ ಕಟ್ಟದವರಿಗೆ ಡಿಕೆಶಿ ಶಾಕ್ – ನಿವೇಶನ ವಶ, ನಿಮ್ಮ ಹಣ ಬಡ್ಡಿ ಸಮೇತ ವಾಪಸ್

ಸರ್ಕಾರದಿಂದ ಸೈಟ್ ಪಡೆದು ಖಾಲಿ ಬಿಟ್ಟವರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಬೆಂಗಳೂರಿನಲ್ಲಿ ಟ್ ಖರೀದಿಸಿ ಖಾಲಿ ಬಿಟ್ಟವರಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಹತ್ವದ ಸೂಚನೆಯನ್ನು ನೀಡಿದ್ದಾರೆ. ನಿವೇಶನ ಖರೀದಿಸಿ, ಅದಕ್ಕೆ ಕಂಪೌಂಡೂ ಹಾಕದೇ, ಹಾಗೇ ಖಾಲಿ ಬಿಟ್ಟಿದ್ದರೆ, ಅದನ್ನು ಬಿಡಿಎ ವಾಪಸ್ ಪಡೆದುಕೊಳ್ಳಲಿದೆ ಎಂದು ಹೇಳಿದ್ದಾರೆ.
ಹೆಬ್ಬಾಳ ಜಂಕ್ಷನ್‌ನ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಬಳಿ “ಜಸ್ಟ್ ಕ್ಲೀನ್ ಬೆಂಗಳೂರು” ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಕೇರಳಂನಲ್ಲಿ ಮಳೆರಾಯನ ಆರ್ಭಟ- ಮನೆಗಳು ಜಲಾವೃತ, ಭೂಕುಸಿತಕ್ಕೆ ಮೂವರು ಬಲಿ!
“ನಾವು ನಿವೇಶನ ನೀಡುವುದು ಮನೆ ಕಟ್ಟಿಕೊಳ್ಳಲು. ಆದರೆ ಕೆಲವರು 20, 30, 40 ವರ್ಷಗಳಾದರೂ ಮನೆ ಕಟ್ಟಿಲ್ಲ. ಅಗತ್ಯವಿದ್ದರೆ ಅವರು ಪಾವತಿಸಿದ ಹಣವನ್ನು ಬಡ್ಡಿ ಸಮೇತ ಹಿಂದಿರುಗಿಸಿ ನಿವೇಶನವನ್ನು ವಾಪಸ್ ಪಡೆಯಬೇಕಾಗುತ್ತದೆ,” ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ಅಲ್ಲದೆ, ಖಾಲಿ ನಿವೇಶನಗಳಿಗೆ ಕಾಂಪೌಂಡ್ ಕೂಡ ಹಾಕದೆ ಕಸ ಹಾಕಲು ಅವಕಾಶ ನೀಡುವುದು ಸರಿಯಲ್ಲ. ಜಾಗದ ಮಾಲೀಕರು ತಮ್ಮ ಆಸ್ತಿಯನ್ನು ರಕ್ಷಿಸುವ ಜವಾಬ್ದಾರಿಯೂ ಹೊಂದಿರಬೇಕು ಎಂದು ಅವರು ಸ್ಪಷ್ಟಪಡಿಸಿದರು.
ನಿವೇಶನ ಪಡೆದ 5 ವರ್ಷದೊಳಗೆ ಅಲ್ಲಿ ಮನೆ ನಿರ್ಮಾಣ ಮಾಡಬೇಕು. ಕಟ್ಟದಿದ್ದರೆ, ಅದಕ್ಕೆ ದುಪ್ಪಟ್ಟು ತೆರಿಗೆ ಅಥವಾ ನಿವೇಶನ ಹಿಂಪಡೆಯಲಾಗುವುದು. ಮನೆ ಕಟ್ಟದೇ ಖಾಲಿ ಇಟ್ಟುಕೊಂಡರೆ ಅಲ್ಲಿ ಕಸದ ಸಮಸ್ಯೆ ಎದುರಾಗುತ್ತದೆ. ಹೀಗಾಗಿ ಈ ತೀರ್ಮಾನ ಮಾಡಲಾಗಿದೆ. ಬೀದಿವ್ಯಾಪಾರದವರಿಗೆ ಬೇರೆ ಜಾಗಗಳಲ್ಲಿ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಲಾಗುವುದು. ಬೀದಿ ವ್ಯಾಪಾರಿಗಳು ಪಾದಚಾರಿಗಳು ಹಾಗೂ ವಾಹನ ಸಂಚಾರಕ್ಕೆ ತೊಂದರೆ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದರು.

ನೋಡಿರಿ

