ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ – 5 ಕೋಟಿ ಆರ್ಥಿಕ ಸಹಾಯ ಘೋಷಣೆ ಮಾಡಿದ ಕರ್ನಾಟಕ ಸರ್ಕಾರ!

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ – 5 ಕೋಟಿ ಆರ್ಥಿಕ ಸಹಾಯ ಘೋಷಣೆ ಮಾಡಿದ ಕರ್ನಾಟಕ ಸರ್ಕಾರ!

ಹಿಮಾಚಲ ಪ್ರದೇಶದಲ್ಲಿ ಇತ್ತೀಚೆಗೆ ಉಂಟಾದ ಭಾರಿ ಮಳೆಯಿಂದಾಗಿ ಭಾರಿ ಪ್ರವಾಹ, ಭೂಕುಸಿತ ಉಂಟಾಗಿತ್ತು.  ಸಾವಿರಾರು ಮನೆಗಳು ಕೊಚ್ಚಿಹೋಗಿವೆ, ಮೂಲಸೌಕರ್ಯಗಳು ನಾಶವಾಗಿವೆ. ಈ ದುರಂತದಲ್ಲಿ 380 ಜನರು ಸಾವನ್ನಪ್ಪಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಉಂಟಾದ ನೈಸರ್ಗಿಕ ದುರಂತಕ್ಕೆ  ಸಹಾಯ ಮಾಡಲು ಕರ್ನಾಟಕ ಸರ್ಕಾರ 5 ಕೋಟಿ ರೂ. ಹಣ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

ಇದನ್ನೂ ಓದಿ:ಹಾಸನ ಗಣೇಶ ಮೆರವಣಿಗೆ ದುರಂತಕ್ಕೆ 9 ಬಲಿ – ಮೋದಿ ಸಂತಾಪ , 2 ಲಕ್ಷ ಪರಿಹಾರ

ಸಿಎಂ ಸಿದ್ದರಾಮಯ್ಯ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಪತ್ರ ಬರೆದಿದ್ದು, ಪ್ರಕೃತಿ ನಮ್ಮ ಮೇಲೆ ಮುನಿಸಿಕೊಂಡಾಗ, ಇಂತಹ ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ಒಗ್ಗಟ್ಟಾಗಿ ಅದನ್ನು ಎದುರಿಸಬೇಕು. ಹೀಗಾಗಿ, ಕರ್ನಾಟಕ ಹಿಮಾಚಲ ಪ್ರದೇಶದ ಜನರ ಜೊತೆ ಹೆಗಲಿಗೆ ಹೆಗಲಾಗಿ ನಿಲ್ಲುತ್ತದೆ. ನಿಮ್ಮ ಕಷ್ಟಕಾಲದಲ್ಲಿ ನಾವು ನಿಮ್ಮೊಂದಿದ್ದೇವೆ. ಹಾಗೇ, ವಿಪತ್ತಿಗೀಡಾದ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಸರ್ಕಾರದಿಂದ 5 ಕೋಟಿ ರೂ. ಹಣವನ್ನು ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ‘ನಾವು ನೀಡುವ ಈ ಹಣದಿಂದ ನಿಮ್ಮ ರಾಜ್ಯಕ್ಕಾದ ನಷ್ಟವನ್ನು, ಬಲಿಯಾ ಜೀವಗಳನ್ನು ವಾಪಾಸ್ ತಂದುಕೊಡಲು ಸಾಧ್ಯವಿಲ್ಲ ಎಂಬುದು ನಮಗೆ ತಿಳಿದಿದೆ. ಆದರೆ, ಈ ದುರಂತದಿಂದ ಸಂಕಷ್ಟಕ್ಕೀಡಾದ ಕುಟುಂಬಗಳಿಗೆ ಈ ಹಣದಿಂದ ತುರ್ತು ಸೌಲಭ್ಯ ಕಲ್ಪಿಸಲು ಸಹಾಯವಾಗಲಿ ಎಂಬ ಉದ್ದೇಶ ನಮ್ಮದು  ಎಂದು ಸಿಎಂ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪ್ರವಾಹಪೀಡಿತ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿ, ವೈಮಾನಿಕ ಸಮೀಕ್ಷೆಯನ್ನು ನಡೆಸಿದ್ದರು. ಈ ವೇಳೆ 1,500 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ್ದರು. ಈ ಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರವು ಹಿಮಾಚಲ ಪ್ರದೇಶ ಸರ್ಕಾರಕ್ಕೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದರು. ಪ್ರವಾಹದಿಂದ ಮೃತರಾದವರ ಹತ್ತಿರದ ಸಂಬಂಧಿಕರಿಗೆ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದರು. ಹಾಗೇ, ರಕ್ಷಣಾ ಪಡೆಗಳು ಜೊತೆ, ಸಂತ್ರಸ್ತರ ಜೊತೆ ಪ್ರಧಾನಿ ಮೋದಿ ಸಂವಾದ ನಡೆಸಿದ್ದರು.

Shwetha M