ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಅಧಿಕಾರಿ ಆತ್ಮಹತ್ಯೆ ಪ್ರಕರಣ-  ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ

ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಅಧಿಕಾರಿ ಆತ್ಮಹತ್ಯೆ ಪ್ರಕರಣ-  ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ

ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರ ಹೆಸರು ಕೇಳಿಬಂದಿದೆ. ಬಿ. ನಾಗೇಂದ್ರ ಅವರು ರಾಜಿನಾಮೆ ನೀಡಬೇಕೆಂದು ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿತ್ತು. ಸರ್ಕಾರದ ಮೇಲೆ ಒತ್ತಡ ಸೃಷ್ಠಿಯಾದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ ರಾಜಿನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಹಾಸನದ ಹೊಳೆನರಸೀಪುರದಲ್ಲೂ ಇಲ್ಲ, ಇತ್ತ ಮೈಸೂರಲ್ಲೂ ಇಲ್ಲ! – ಭವಾನಿ ರೇವಣ್ಣ ಎಲ್ಲಿದ್ದಾ?

ಹಗರಣ ಸಂಬಂಧ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಭೆ ನಡೆಸಿದ್ದರು. ಸಭೆಯಲ್ಲಿ ಸರ್ಕಾರಕ್ಕೆ ಮುಖಭಂಗವಾಬಾರದು ಹೀಗಾಗಿ ಬಿ.ನಾಗೇಂದ್ರ ರಾಜಿನಾಮೆ ನೀಡುವುದು ಒಳಿತು ಅನ್ನೋ  ತೀರ್ಮಾನ ಕೈಗೊಂಡರು.

ಏನಿದು ಪ್ರಕರಣ?

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದೆ. ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್​ನೋಟ್​ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ ನಮೂದಿಸಿದ್ದರು. ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ. ಇತ್ತ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು ಸಿಬಿಐ ಪ್ರಾದೇಶಿಕ ಕಚೇರಿಗೆ ದೂರು ನೀಡಿದ್ದಾರೆ.

Shwetha M