ಮಳಲಿ ಮಸೀದಿ ವಿವಾದ: ಮಧ್ಯಂತರ ಅರ್ಜಿಗಳು ವಜಾ

ಮಳಲಿ ಮಸೀದಿ ವಿವಾದ: ಮಧ್ಯಂತರ ಅರ್ಜಿಗಳು ವಜಾ

ಮಂಗಳೂರು: ಇಲ್ಲಿನ ಮಳಲಿಪೇಟೆ ಜುಮ್ಮಾ ಮಸೀದಿ ನವೀಕರಣ ಕಾಮಗಾರಿ ವೇಳೆ ದೇವಾಲಯ ಮಾದರಿ ರಚನೆ ಪತ್ತೆಯಾಗಿದೆ ಎನ್ನಲಾದ ವಿವಾದ ಪ್ರಕರಣಕ್ಕೆ ಸಂಬಂಧಿಸಿ ಮಸೀದಿಯ ಆಡಳಿತ ಮಂಡಳಿಯವರು ಸಲ್ಲಿಸಿದ್ದ ಎರಡು ಮಧ್ಯಂತರ ಅರ್ಜಿಗಳನ್ನು ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್  ನ್ಯಾಯಾಲಯದ ನ್ಯಾಯಾಧೀಶರಾದ ನಿಖಿತಾ ಅಕ್ಕಿ ಅವರು ಬುಧವಾರ ತಿರಸ್ಕರಿಸಿದ್ದಾರೆ.

ಇದನ್ನೂ ಓದಿ: ದೇಶದ 50ನೇ ಸಿಜೆಐ ಆಗಿ ಡಿವೈ ಚಂದ್ರಚೂಡ್ ಪ್ರಮಾಣ ವಚನ ಸ್ವೀಕಾರ

ಕಾಮಗಾರಿ ವೇಳೆ ದೇವಾಲಯ ಮಾದರಿ ರಚನೆ ಪತ್ತೆಯಾಗಿದೆ ಎನ್ನಲಾಗಿದ್ದು, ಆ ರಚನೆಯನ್ನು ಕೆಡವದಂತೆ ನಿರ್ಬಂಧ ವಿಧಿಸಬೇಕು ಎಂದು ಕೋರಿ ವಿಶ್ವ ಹಿಂದೂ ಪರಿಷತ್ ಪರ ವಕೀಲರು ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ, ದೇವಾಲಯ ಮಾದರಿ ರಚನೆ ತೆರವುಗೊಳಿಸದಂತೆ ಪ್ರತಿಬಂಧಕಾಜ್ಞೆಯನ್ನು ಹೊರಡಿಸಿತ್ತು.

ಈ ಬಗ್ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದ ಮಸೀದಿಯ ಆಡಳಿತ ಮಂಡಳಿ, ವಿವಾದಿತ ಸ್ಥಳವು ವರ್ಕ್ಫ್ ಮಂಡಳಿಯ ಆಸ್ತಿಯಾಗಿದೆ. ಆದ್ದರಿಂದ ಈ ಅಸಲು ದಾವೆ ಸಾರ್ವಜನಿಕ ಪೂಜಾಸ್ಥಳ  ಕಾಯ್ದೆಯ ಸೆಕ್ಷನ್ 4(1) ಮತ್ತು (2)ರ ಅಡಿಯಲ್ಲಿ ವಿಚಾರಣಾ ಮಾನ್ಯತೆ ಹೊಂದಿಲ್ಲ. ಹಾಗಾಗಿ ಈ ದಾವೆಯನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿತ್ತು.

ಮಸೀದಿಯ ಆಡಳಿತವು ಸಲ್ಲಿಸಿದ್ದ ಮಧ್ಯಂತರ ಅರ್ಜಿಗಳನ್ನು ತಿರಸ್ಕರಿಸಿರುವ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಮುಂದೂಡಿದ್ದಾರೆ. ವಿಶ್ವ ಹಿಂದೂ ಪರಿಷತ್ ಪರವಾಗಿ ವಕೀಲ ಚಿದಾನಂದ ಕೆದಿಲಾಯ ವಾದಿಸಿದ್ದರು.

suddiyaana