ಜಗದೀಶ್‌ ಶೆಟ್ಟರ್‌ ಬಿಜೆಪಿ ತೊರೆದು ಕಾಂಗ್ರೆಸ್‌ ಗೆ ಸೇರ್ಪಡೆ

ಜಗದೀಶ್‌ ಶೆಟ್ಟರ್‌ ಬಿಜೆಪಿ ತೊರೆದು ಕಾಂಗ್ರೆಸ್‌ ಗೆ ಸೇರ್ಪಡೆ

ಬೆಂಗಳೂರು: ಬಿಜೆಪಿಗೆ ಗುಡ್ ಬೈ ಹೇಳಿರುವ ಹೇಳಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಖರ್ಗೆ ಅವರು ಶೆಟ್ಟರ್‌ ಅವರಿಗೆ ಕಾಂಗ್ರೆಸ್‌ ಪಕ್ಷದ ಶಾಲು ಹೊದಿಸಿ, ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ‘ಕನ್ನಡವೇ ಮೊದಲು, ಶಿಕ್ಷಣವೇ ಆಧುನಿಕ ಶಕ್ತಿ’ – ಚುನಾವಣೆಗೆ ಜೆಡಿಎಸ್ ನಿಂದ 12 ಭರವಸೆ

ಪಕ್ಷ ಸೇರ್ಪಡೆಯಾದ ಬಳಿಕ ಮಾತನಾಡಿದ ಜಗದೀಶ್‌ ಶೆಟ್ಟರ್‌,  ನಾನು ಬಿಜೆಪಿಯನ್ನು ಕಟ್ಟಿ ಬೆಳೆಸಿದ ವ್ಯಕ್ತಿ. ನಾನು ಬಿಜೆಪಿ ಬಿಟ್ಟು, ಕಾಂಗ್ರೆಸ್‌ ಸೇರಿರುವುದು ಬಹಳ ಜನಕ್ಕೆ ಅಚ್ಚರಿಯಾಗಿದೆ.  ಬಿಜೆಪಿ ನನಗೆ ಎಲ್ಲ ರೀತಿಯ ಗೌರವವನ್ನು ಕೊಟ್ಟಿದೆ. ಅದಕ್ಕೆ ಪ್ರತಿಯಾಗಿ ಪಕ್ಷ ಕೊಟ್ಟ ಜವಾಬ್ದಾರಿಯನ್ನು ನಾನು ನಿಭಾಯಿಸಿದ್ದೇನೆ. ಹಿರಿಯ ನಾಯಕನನ್ನು ಪಕ್ಷ ನಡೆಸಿಕೊಂಡ ರೀತಿಯಿಂದ ನೋವಾಗಿದೆ. ಜನರ ಆರ್ಶೀವಾದದಿಂದ ನಿರಂತರವಾಗಿ ಗೆಲ್ಲುತ್ತಾ ಬಂದಿದ್ದೇನೆ. ಈ ಬಾರಿ ಟಿಕೆಟ್‌ ಸಿಗುವ ವಿಶ್ವಾಸವಿತ್ತು. ಆದರೆ ಟಿಕೆಟ್‌ ಇಲ್ಲ ಎಂದಾಗ ತುಂಬಾ ಬೇಸರವಾಯಿತು ಎಂದು ಹೇಳಿದ್ದಾರೆ.

ಮೊದಲೇ ಟಿಕೆಟ್‌ ಇಲ್ಲ ಎಂದಿದ್ದರೆ, ಬೇಜಾರ್‌ ಆಗುತ್ತಿರಲಿಲ್ಲ. ಹಿರಿಯ ನಾಯಕನನ್ನು ಪಕ್ಷ ನಡೆಸಿಕೊಂಡ ರೀತಿಯಿಂದ ಬೇಸರವಾಗಿದೆ. ಬಿಜೆಪಿ ಪಕ್ಷ ಕಟ್ಟಿದ ನಾಯಕನಿಗೆ ಬೆಲೆ ಸಿಗಲಿಲ್ಲ. ಕಳೆದ 6 ತಿಂಗಳಿನಿಂದ ಪಕ್ಷ ನನ್ನನು ಕಡೆಗಣನೆ ಮಾಡಿದೆ. ಪಕ್ಷ ನನ್ನನು ಒತ್ತಾಯಪೂರ್ವಕವಾಗಿ ಹೊರ ಹಾಕಿದೆ. ಹಾಗಾಗಿ ನಾನು ಕಾಂಗ್ರೆಸ್‌ ನ ತತ್ವ ಸಿದ್ದಾಂತವನ್ನು ಒಪ್ಪಿ, ಕಾಂಗ್ರೆಸ್‌ ಸೇರ್ಪಡೆಯಾಗಿದ್ದೇನೆ ಅಂತಾ ಹೇಳಿದ್ದಾರೆ.

ನಾನು ಮೋದಿ, ಅಮಿತ್‌ ಶಾ, ಜೆ.ಪಿ. ನಡ್ಡಾ ವಿರುದ್ದ ಟೀಕೆ ಮಾಡುತ್ತಿಲ್ಲ. ಇದೆಲ್ಲ ದೆಹಲಿ ನಾಯಕರ ಗಮನಕ್ಕೆ ಬರುತ್ತಿಲ್ಲ,ಇಲ್ಲಿ ಕೆಲವರು ತಮ್ಮ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದ್ದಾರೆ. ಪಕ್ಷದಿಂದ ಹೊರ ಹಾಕುವ ಷಡ್ಯಂತ್ರ ಮಾಡಿದರು ಎಂದು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದರು.

suddiyaana