ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್ ವಾದಿಸಲು ವಿಶೇಷ ಅಭಿಯೋಜಕರನ್ನು ನೇಮಿಸಿದ ಸರ್ಕಾರ – ಈಶ್ವರಪ್ಪ ಪುತ್ರನಿಗೂ ಅಶ್ಲೀಲ ಸಿಡಿ ಭೀತಿ

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್ ವಾದಿಸಲು ವಿಶೇಷ ಅಭಿಯೋಜಕರನ್ನು ನೇಮಿಸಿದ ಸರ್ಕಾರ – ಈಶ್ವರಪ್ಪ ಪುತ್ರನಿಗೂ ಅಶ್ಲೀಲ ಸಿಡಿ ಭೀತಿ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶದೆಲ್ಲೆಡೆ ಭಾರಿ ಸದ್ದು ಮಾಡುತ್ತಿದೆ. ಕ್ಷಣ ಕ್ಷಣಕ್ಕೂ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ವಿಡಿಯೋ ರಿಲೀಸ್‌ ಮಾಡಿದ್ದು ಯಾರು? ಯಾವಾಗಿನ ವಿಡಿಯೋ ಹೀಗೆ ಹತ್ತು ಹಲವು ಪ್ರಶ್ನೆಗಳು ಕಾಡುತ್ತಿವೆ. ಈ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ಈಗಾಗಲೇ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಇದೀಗ ರಾಜ್ಯ ಸರ್ಕಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ಅಭಿಯೋಜಕರನ್ನು ನೇಮಿಸಿದೆ.

ಇದನ್ನೂ ಓದಿ:  ಮುಂಬೈ ವಿರುದ್ಧ ಗೆದ್ದು ಬೀಗಿದ ಲಕ್ನೋ ಸೂಪರ್​ ಜೈಂಟ್ಸ್ – ಮೂರನೇ ಸ್ಥಾನಕ್ಕೆ ಜಿಗಿದ ಲಕ್ನೋ

ಹೌದು, ಈ ಪ್ರಕರಣವನ್ನು ಎಸ್‌ಐಟಿ ಅಧಿಕಾರಿಗಳು ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಕೆಲ ಸಂತ್ರಸ್ತೆಯರನ್ನು ಪತ್ತೆ ಮಾಡಿ ಕೆಲ ಮಹತ್ವದ ದಾಖಲೆಯನ್ನು ಕಲೆಹಾಕಿದ್ದಾರೆ. ಅಲ್ಲದೇ ಈ ಸಂಬಂಧ ಎ1 ಆರೋಪಿ ರೇವಣ್ಣ ಅವರರಿಗೆ ನೋಟಿಸ್ ನೀಡಿ ವಿಚಾರಣೆಗೊಳಪಡಿಸಲು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.ಇದೀಗ ಈ ಪ್ರಕರಣದಲ್ಲಿ ವಾದಿಸಲು ವಿಶೇಷ ಅಭಿಯೋಜಕರನ್ನಾಗಿ(ಎಸ್​ಪಿಪಿ) ಎನ್.ಜಗದೀಶ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಇಂದು (ಏಪ್ರಿಲ್ 30) ಆದೇಶ ಹೊರಡಿಸಿದೆ.

ಈಶ್ವರಪ್ಪ ಪುತ್ರನಿಗೂ ಅಶ್ಲೀಲ ಸಿಡಿ ಭೀತಿ

ಇನ್ನು ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್​ಗೂ ಸಹ ಅಶ್ಲೀಲ ಸಿಡಿ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಕಾಂತೇಶ್, ಮಾಧ್ಯಮಗಳಿಗೆ ನಿರ್ಬಂಧ ಕೋರಿ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ್ದು, ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ನಿರ್ಬಂಧಕಾಜ್ಞೆ ಹೊರಡಿಸಿದೆ.

Shwetha M

Leave a Reply

Your email address will not be published. Required fields are marked *