ನಾಳೆಯಿಂದ ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿ ಪ್ರತಿಭಟನೆ – ಯಾವೆಲ್ಲಾ ಕಚೇರಿಗಳು ಬಂದ್..?

ನಾಳೆಯಿಂದ ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿ ಪ್ರತಿಭಟನೆ – ಯಾವೆಲ್ಲಾ ಕಚೇರಿಗಳು ಬಂದ್..?

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ (ಮಾರ್ಚ್ 1)ರಿಂದ ರಾಜ್ಯ ಸರ್ಕಾರಿ ನೌಕರರು ರಾಜ್ಯಾದ್ಯಂತ ಕರ್ತವ್ಯಕ್ಕೆ ಹಾಜರಾಗದೆ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲಿದ್ದಾರೆ. 7ನೇ ವೇತನ ಆಯೋಗ ಜಾರಿ ಮಾಡಬೇಕು ಹಾಗೂ ನೂತನ ರಾಷ್ಟ್ರೀಯ ಪಿಂಚಣಿ ಯೋಜನೆ (NPS) ರದ್ದುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ರಾಜ್ಯಾದ್ಯಂತ 10 ಲಕ್ಷ ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗದೆ ಅನಿರ್ಧಿಷ್ಟಾವಧಿ ಪ್ರತಿಭಟನೆ ಮಾಡಲಿದ್ದಾರೆ. ಪಂಜಾಬ್‌, ರಾಜಸ್ಥಾನ, ಛತ್ತಿಸ್​ಗಢ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳ ಮಾದರಿಯಲ್ಲಿ NPS ರದ್ದುಗೊಳಿಸಿ OPS ಜಾರಿ ಮಾಡಲು ನೌಕರರು ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಸರ್ಕಾರಿ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : ತೃಣಮೂಲ ಕಾಂಗ್ರೆಸ್ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್

ನಾಳೆ ಈ ಕಚೇರಿಗಳು ಬಂದ್

ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆ ವಿಧಾನಸೌಧದ ಎಲ್ಲಾ ಕಚೇರಿಗಳು, ಸಚಿವಾಲಯದ ಕಚೇರಿಗಳು, ಬಿಬಿಎಂಪಿ ಕಚೇರಿ, ಬೆಸ್ಕಾಂ, BWSSB, ತಾಲೂಕು ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ, ಪುರಸಭೆ ಕಚೇರಿ, ಗ್ರಾಮ ಪಂಚಾಯಿತಿ, ಸರ್ಕಾರಿ ಶಾಲೆಗಳು, ಸರ್ಕಾರಿ ಆಸ್ಪತ್ರೆ (ಐಸಿಯು, ಎಂಐಸಿಯು ಹೊರತುಪಡಿಸಿ), ಕಂದಾಯ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಪುರಸಭೆ, ಸರ್ಕಾರಿ ಹಾಸ್ಟೆಲ್​ಗಳು, ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಜಲಮಂಡಳಿ, ಬಿಬಿಎಂಪಿ ಆಸ್ಪತ್ರೆಗಳು, ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಬಂದ್​ ಆಗಲಿವೆ.

ವರದಿ ಸಲ್ಲಿಕೆ ಬಳಿಕ ಕ್ರಮ – ಬೊಮ್ಮಾಯಿ

ಗುರುವಾರ ನಡೆದ ಅಧಿವೇಶನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 7 ನೇ ವೇತನ ಆಯೋಗದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ ವೇತನ ಆಯೋಗದ ಮಧ್ಯಂತರ ವರದಿಯನ್ನು ಕೇಳಿದ್ದೇನೆ. ಈ ವರದಿ ಸಲ್ಲಿಕೆಯಾದ ಬಳಿಕ ಅದರ ಆಧಾರದ ಮೇಲೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಿದ್ದೇವೆ ಎಂದು ಹೇಳಿದ್ದರು.

ಪ್ರತಿಭಟನೆ ಮಾಡದಂತೆ ಸಿಎಂ ಮನವಿ

ರಾಜ್ಯ ಸರ್ಕಾರಿ ನೌಕರರು ಪ್ರತಿಭಟನೆಗೆ ಮುಂದಾಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ. ಭಾನುವಾರ ಕಲಬುರಗಿಯಲ್ಲಿ ಮಾತನಾಡಿದ್ದ ಅವರು ರಾಜ್ಯ ಸರ್ಕಾರ ಶೀಘ್ರವೇ ಗುಡ್ ನ್ಯೂಸ್ ನೀಡಲಿದೆ. ಏಳನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದರು. ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಯಾವುದೇ ಸರ್ಕಾರಿ ನೌಕರರು ಮುಷ್ಕರಕ್ಕೆ ಮುಂದಾಗಬಾರದು. ರಾಜ್ಯದ ಜನತೆಯ ಹಿತದೃಷ್ಟಿಯಿಂದ ಮುಷ್ಕರದ ನಿರ್ಧಾರವನ್ನ ಹಿಂತೆಗೆದುಕೊಳ್ಳಿ. 7ನೇ ವೇತನ ಆಯೋಗ ಶಿಫಾರಸ್ಸು ಜಾರಿಗೆ ಅಗತ್ಯವಿರುವ ಹಣವನ್ನು ಬಿಡುಗಡೆಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದರು.

suddiyaana