ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಥಳದಲ್ಲೇ ಪರಿಹಾರ – DK ಸರ್ಕಾರದ ಪ್ರಜಾಸೇವಾ ಯೋಜನೆಯಿಂದ ಏನೆಲ್ಲಾ ಲಾಭ?

ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಥಳದಲ್ಲೇ ಪರಿಹಾರ – DK ಸರ್ಕಾರದ ಪ್ರಜಾಸೇವಾ ಯೋಜನೆಯಿಂದ ಏನೆಲ್ಲಾ ಲಾಭ?

ಸಾರ್ವಜನಿಕರು ತಮ್ಮ ಕುಂದುಕೊರತೆಗಳು ಹಾಗೂ ಯೋಜನೆಗಳ ಫಲಾನುಭವಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಪ್ರಜಾಸೇವಾ ಅಭಿಯಾನ ಎಂಬ ವಿನೂತನ ಯೋಜನೆ ಜಾರಿಗೆ ತರುತ್ತಿದೆ. ಪ್ರಜಾಸೇವಾ ಇಲಾಖೆಯಡಿ ಜಾರಿಯಾಗುತ್ತಿರುವ ಈ ಅಭಿಯಾನ ಸೆಪ್ಟೆಂಬರ್ 5 ರಿಂದ ವಿಜಯನಗರ  ಜಿಲ್ಲೆಯ ಕೂಡ್ಲಿಗಿಯಿಂದ ಪ್ರಾರಂಭವಾಗಲಿದೆ.

ಈ ಮೂಲಕ ಕ್ಷಣಾರ್ಧದಲ್ಲಿ ಯಾವುದೇ ರೀತಿಯ ಕುಂದುಕೊರತೆಗಳನ್ನು ಸರ್ಕಾರದ ಬಳಿ ಹೇಳಿಕೊಳ್ಳಬಹುದು. ಪ್ರತಿ ಶನಿವಾರ ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಜಂಟಿ ಸಭೆಗಳು ನಡೆಯಲಿದ್ದು, ಸ್ಥಳದಲ್ಲೇ ತ್ವರಿತ ಪರಿಹಾರ ಸಿಗಲಿದೆ.

ಇದನ್ನೂ ಓದಿ:ಗೃಹಜ್ಯೋತಿಗೆ 30 ದಿನ ಗಡುವು – FREEಗೆ ಏನೆಲ್ಲಾ ದಾಖಲೆ ಬೇಕು?

ಸರ್ಕಾರದ ಕ್ಯಾಲೆಂಡರ್ ಆಫ್ ಈವೆಂಟ್ಸ್ ಪ್ರಕಾರ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ 2ನೇ ಮತ್ತು 4ನೇ ಶನಿವಾರ ಶಾಸಕರ ಅಧ್ಯಕ್ಷತೆಯಲ್ಲಿ ಸಭೆಗಳು ನಡೆಯಲಿವೆ. ಸಭೆಯ ಬಗ್ಗೆ ಸಾರ್ವಜನಿಕರಿಗೆ 15 ದಿನ ಮುಂಚಿತವಾಗಿ ಕರಪತ್ರಗಳನ್ನು ತಲುಪಿಸಲಾಗುತ್ತದೆ. ಅಲ್ಲದೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಆಧಾರಿತ ಕಾಲ್ ಸೆಂಟರ್ ಮೂಲಕ ಸಾರ್ವಜನಿಕರಿಗೆ ಆಡಿಯೋ ಕರೆ ಮಾಡಿ ಮಾಹಿತಿ ನೀಡಲಾಗುತ್ತದೆ. ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ.

ಸಭೆಗಳಲ್ಲಿ ಸ್ವೀಕೃತವಾಗುವ ಎಲ್ಲಾ ಅರ್ಜಿಗಳನ್ನು ಪ್ರತಿ ಬುಧವಾರ ಮೂರು ಹಂತಗಳಲ್ಲಿ ಪರಿಶೀಲಿಸಲಾಗುತ್ತದೆ. ಬೆಳಿಗ್ಗೆ 9 ರಿಂದ 11 ರವರೆಗೆ ತಾಲ್ಲೂಕು ಮಟ್ಟದಲ್ಲಿ, 11 ರಿಂದ 1 ಗಂಟೆಯವರೆಗೆ ಉಪವಿಭಾಗ ಮಟ್ಟದಲ್ಲಿ ಹಾಗೂ ಮಧ್ಯಾಹ್ನ 3 ರಿಂದ 5 ರವರೆಗೆ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಪರಿಶೀಲನೆ ನಡೆಯಲಿದೆ. ಕಾಲಮಿತಿಯಲ್ಲಿ ಪರಿಹಾರ ಸಿಗದ ಅರ್ಜಿಗಳು ಸ್ವಯಂಚಾಲಿತವಾಗಿ ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರಿಗೆ ವರ್ಗಾವಣೆಯಾಗುತ್ತವೆ. ಕುಂದುಕೊರತೆಗಳಿಗಾಗಿ ಸಾರ್ವಜನಿಕರು 1902 ಸಹಾಯವಾಣಿ ಅಥವಾ ವೆಬ್‌ಸೈಟ್ ಬಳಸಬಹುದಾಗಿದೆ.

Kishor KV

Leave a Reply

Your email address will not be published. Required fields are marked *