ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರದಿಂದ ಶಾಕ್ – 3.63 ಲಕ್ಷ ಕಾರ್ಡ್ ರದ್ದು ಮಾಡಿದ ರಾಜ್ಯ ಸರ್ಕಾರ!
ನಿಯಮ ಉಲ್ಲಂಘಿಸಿ ಬಿಪಿಎಲ್ ಕಾರ್ಡ್ ಪಡೆದಿದ್ದವರಿಗೆ ಸರ್ಕಾರ ಶಾಕ್ ನೀಡಿದೆ. ಇದೀಗ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರಾಜ್ಯದಲ್ಲಿ ಸುಮಾರು 13 ಲಕ್ಷಕ್ಕೂ ಹೆಚ್ಚು ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿದೆ.
ಇದನ್ನೂ ಓದಿ: ಚನ್ನಪಟ್ಟಣ ದೋಸ್ತಿ ಖತಂ! – ಸಿಪಿವೈ ಜೊತೆ ಡಿಕೆಶಿ ಡೀಲ್?
ಈ ಬಗ್ಗೆ ಸಚಿವ ಕೆಎಚ್ ಮುನಿಯಪ್ಪ ಮಾಹಿತಿ ನೀಡಿದ್ದು, ಅಧಿಕಾರಿಗಳು ಈಗಾಗಲೇ 13.87 ಲಕ್ಷ ಅನರ್ಹ ಕಾರ್ಡ್‌ಗಳನ್ನು ಗುರುತಿಸಿದ್ದು, ಅವುಗಳಲ್ಲಿ 3.64 ಲಕ್ಷ ರದ್ದುಗೊಳಿಸಲಾಗಿದೆ. ಇದರಲ್ಲಿ ಸರ್ಕಾರಿ ನೌಕರರ 2,964 ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ. ರಾಜ್ಯದಲ್ಲಿ 4.35 ಕೋಟಿ ಫಲಾನುಭವಿಗಳು 1.51 ಕೋಟಿ ಪಡಿತರ ಕಾರ್ಡ್ ಮೂಲಕ ಸರ್ಕಾರದ ಸವಲತ್ತುಗಳನ್ನು ಪಡೆಯುತ್ತಿದ್ದಾರೆ ಎಂದು ಮುನಿಯಪ್ಪ ತಿಳಿಸಿದ್ದಾರೆ.
6 ತಿಂಗಳವರೆಗೆ ಪಡಿತರ ಪಡೆಯದಿರುವವರು, ಒಂದು ವರ್ಷದವರೆಗೆ ನೇರ ನಗದು ವರ್ಗಾವಣೆ ಸೌಲಭ್ಯ ಪಡೆಯದಿರುವವರು ಮತ್ತು ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ವಾರ್ಷಿಕ ಆದಾಯ ಹೊಂದಿರುವವರನ್ನು ಅನರ್ಹರೆಂದು ಪರಿಗಣಿಸಲಾಗುತ್ತಿದೆ. ಅನರ್ಹ ಪಡಿತರ ಚೀಟಿಗಳ ಸಂಖ್ಯೆ 20 ಲಕ್ಷಕ್ಕಿಂತ ಹೆಚ್ಚಿರಬಹುದು ಎಂದು ಸಚಿವರು ಅಂದಾಜಿಸಿದ್ದಾರೆ. ಅರ್ಹ ಫಲಾನುಭವಿಗಳು ಸೌಲಭ್ಯ ಪಡೆಯದೇ ಕಾರ್ಡ್ ರದ್ದಾದಲ್ಲಿ ಮುಂದಿನ ದಿನಗಳಲ್ಲಿ ಹೊಸ ಕಾರ್ಡ್‌ಗಳನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.