ಸಿಎಂಗೆ ಕಂಟಕವಾಯ್ತು ಮುಡಾ ಹಗರಣ – ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ

ಸಿಎಂಗೆ ಕಂಟಕವಾಯ್ತು ಮುಡಾ ಹಗರಣ – ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ

ಮುಡಾ ಹಗರಭ ಸಿಎಂ ಸಿದ್ಧರಾಮಯ್ಯಗೆ ದಿನೇ ದಿನೇ ಕಂಟಕವಾಗಿ ಪರಿಣಮಿಸುತ್ತಿದೆ. ಇದೀಗ ಈ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಗವರ್ನರ್ ಅನುಮತಿ ನೀಡಿದ್ದಾರೆ.

ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಹೆಸರು ಕೇಳಿಬಂದಿತ್ತು. ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಈ ಕುರಿತಾಗಿ ಗವರ್ನರ್​ಗೆ ದೂರು ಸಲ್ಲಿಸಿದ್ದರು.

ಇದನ್ನೂ ಓದಿ: ಮೂವರು ಪ್ಲೇಯರ್ಸ್ ಗೆ IPL ಬಾಗಿಲು ಬಂದ್ ಆಗುತ್ತಾ? – ಸೀನಿಯರ್ಸ್‌ಗೆ ಅನ್‌ಸೋಲ್ಡ್‌ ಭಯ?

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಹೆಸರು ಕೇಳಿಬಂದಿತ್ತು. ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಈ ಕುರಿತಾಗಿ ಗವರ್ನರ್​ಗೆ ದೂರು ಸಲ್ಲಿಸಿದ್ದರು. ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕೊನೆಗೂ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಸದ್ಯ ಸಿದ್ದರಾಮಯ್ಯನವರು ಕಾನೂನು ಹೋರಾಟಕ್ಕೆ ನಿರ್ಧರಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ರಾತ್ರಿ ಕಾನೂನು ಸಲಹೆಗಾರ ಪೊನ್ನಣ್ಣ ಜೊತೆ ಸುಧೀರ್ಘ ಸಮಾಲೋಚನೆ ನಡೆಸಿದ್ದರು. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಚರ್ಚಿಸಿದ್ದರು. ಮುಂದಿನ ಕಾನೂನು ಹೋರಾಟದ ಕುರಿತು ಪೊನ್ನಣ್ಣ ಜೊತೆ ಮಾತನಾಡಿದ್ದರು. ರಾಜ್ಯಪಾಲರ ಕಚೇರಿಯಿಂದ ಅಬ್ರಹಾಂಗೆ ಕರೆ ಬಂದಿದ್ದು, ಶನಿವಾರ ಮಧ್ಯಾಹ್ನ 3 ಗಂಟೆಗೆ ಅಬ್ರಹಾಂ ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗುತ್ತಿದೆ.

Shwetha M

Leave a Reply

Your email address will not be published. Required fields are marked *