ಶಿವಮೊಗ್ಗದಲ್ಲಿ 10ನೇ ತರಗತಿ ಬಾಲಕನ ಹ*ತ್ಯೆ ಕೇಸ್! - ಸರ್ಕಾರದಿಂದ 15 ಲಕ್ಷ ರೂ ಪರಿಹಾರ ಘೋಷಣೆ

ಗೆಳೆಯನ ರಕ್ಷಣೆಗೆ ಹೋದ ಎಸ್ಎಸ್ಎಲ್ಸಿ ವಿದ್ಯಾರ್ಥಿಯನ್ನು ಅನ್ಯಕೋಮಿನ ಬಾಲಕರು ಅಮಾನುಷವಾಗಿ ಹಲ್ಲೆ ನಡೆಸಿ ಕೊಲೆಯಾಗಿದೆ. ಸಂಕೇತ್ ಕೊಲೆ ಬಳಿಕ ಶಿವಮೊಗ್ಗದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಇದೀಗ ಸಂಕೇತ್ ಸಾವಿಗೆ ಸರ್ಕಾರ ಪರಿಹಾರ ಘೋಷಿಸಿದೆ.
ಇದನ್ನೂ ಓದಿ: ಏರ್ ಅಂಬ್ಯುಲೆನ್ಸ್ ಪತನದಿಂದ 7 ಮಂದಿ ಸಾವು – ಆ 20 ನಿಮಿಷದಲ್ಲಿ ಏನಾಯ್ತು?
ಶಿವಮೊಗ್ಗದಲ್ಲಿ ಕೊಲೆಯಾದ ಬಾಲಕ ಸಂಕೇತ್ ಕುಟುಂಬದವರಿಗೆ ರಾಜ್ಯ ಸರ್ಕಾರ 15 ಲಕ್ಷ ರೂ. ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ಪರಿಹಾರ ನೀಡುವಂತೆ ಸೂಚನೆ ನೀಡಿದ್ದು, ಅದರಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮೂಲಕ ಈ ಘೋಷಣೆ ಮಾಡಿಸಿದ್ದಾರೆ. ಪರಿಹಾರ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಅಪ್ರಾಪ್ತ ಬಾಲಕನ ಸಾವಿಗೆ ಸರ್ಕಾರದಿಂದ ಒಟ್ಟು 15 ಲಕ್ಷ ರೂ. ಪರಿಹಾರ ಮಂಜೂರು ಮಾಡಲಾಗಿದೆ. ಇದರಲ್ಲಿ 10 ಲಕ್ಷ ರೂ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹಾಗೂ 5 ಲಕ್ಷ ರೂ. ಶಿಕ್ಷಣ ಇಲಾಖೆಯಿಂದ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಮಂದಿ ಆರೋಪಿಗಳನ್ನು ಬಂಧಿಸಿಲಾಗಿದೆ. ಅಟ್ರಾಸಿಟಿ ಕೇಸ್ ಕೂಡ ದಾಖಲಾಗಿದೆ. ಮೃತ ಸಂಕೇತ ಜೊತೆಗೆ ಗಾಯಾಳು ಆಗಿರುವ ಗಿರೀಶ್ ಗೆ ಪರಿಹಾರ ನೀಡಲಾಗುವುದು. ಮಾದಕ ವಸ್ತುಗಳ ಬಗ್ಗೆ ಜಿಲ್ಲಾಡಳಿತದಿಂದ ಸಾಕಷ್ಟು ಜಾಗೃತಿ ಕಾರ್ಯಕ್ರಮ ನಡೆಸುತ್ತಿದೆ. ಈ ಭಾಗದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಒದಗಿಸಲಾಗುವುದು. ಬಡಾವಣೆಯಲ್ಲಿ ಉಪ ಪೊಲೀಸ್ ಠಾಣೆ ತೆರೆಯುವ ಬಗ್ಗೆ ಸ್ಥಳೀಯರು ಒತ್ತಾಯಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಕಟ್ಟಿ ಹೇಳಿದ್ದಾರೆ.
ಇನ್ನು ಶಿವಮೊಗ್ಗದ ಬಿ.ಹೆಚ್ ರಸ್ತೆ ಮೂಲಕ ಬಸ್ ಸ್ಟ್ಯಾಂಡ್ ಸೇರಿದಂತೆ ಹಲವು ರಸ್ತೆಗಳಲ್ಲಿ ಮೃತದೇಹದ ಮೆರವಣಿಗೆ ಮಾಡಲಾಗಿದೆ. ನೂರಾರು ಬೈಕ್ ಗಳ ಜೊತೆಗೆ ಪಾರ್ಥೀವ ಶರೀರದ ಮೆರವಣಿಗೆ ಮಾಡಲಾಗಿದೆ. ಕೊಲೆಯ ವಿರುದ್ಧ ಹಿಂದೂ ಪರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಬಸ್ ಸ್ಟ್ಯಾಂಡ್ ನಲ್ಲಿ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹತ್ಯೆಯಾದ ಸಂಕೇತ್ ಮನೆಯಲ್ಲಿ ತಂದೆ, ತಾಯಿ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಗನನ್ನು ನೆನೆದು ಸಂಕೇತ್ ತಾಯಿ ಗೋಳಾಡುತ್ತಿದ್ದಾರೆ. ಮೊನ್ನೆಯಷ್ಟೇ ಸಂಕೇತ್ ಮನೆಯಲ್ಲಿ ತನ್ನ ತಾಯಿಯ ಹುಟ್ಟುಹಬ್ಬ ಆಚರಿಸಿದ್ದ. ಮಗನನ್ನು ನೆನೆದು ತಾಯಿ ಕಣ್ಣೀರು ಸುರಿಸುತ್ತಿದ್ದಾರೆ. ಸಂಕೇತ್ ಮನೆಯ ಮುಂಭಾಗ ಅವರ ಓರ್ವ ಸಂಬಂಧಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾದವರನ್ನು ಕೂಡಲೇ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸಂಕೇತ್ ಹತ್ಯೆಯ ಬಗ್ಗೆ ಶಿವಮೊಗ್ಗ ಎಸ್.ಪಿ. ನಿಖಿಲ್ ಪ್ರತಿಕ್ರಿಯಿಸಿದ್ದಾರೆ. ಕ್ರಿಕೆಟ್ ಮ್ಯಾಚ್ ವಾಗ್ವಾದದಿಂದ ಕೊಲೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರನ್ನು ವಶಕ್ಕೆ ಪಡೆದಿದ್ದೇವೆ. ಇದಕ್ಕೆ ಒಂದು ವಿಶೇಷ ತನಿಖಾ ತಂಡ ರಚಿಸಿದ್ದೇವೆ. ಎರಡು ದಿನದ ಹಿಂದೆ ಕ್ರಿಕೆಟ್ ಮ್ಯಾಚ್ ನಡೆದಿತ್ತು. ಗಾಂಜಾ ಹಾವಳಿ ಬಗ್ಗೆಯೂ ತನಿಖೆ ಮಾಡುತ್ತೇವೆ . ಇಲ್ಲಿ ಒಂದು ಪೊಲಿಸ್ ಉಪ ಠಾಣೆಯನ್ನು ತೆರೆಯಲು ಕ್ರಮ ಕೈಗೊಳ್ಳುತ್ತೇವೆ. ಆರೋಪಿಗಳನ್ನು ಗಾಂಜಾ ಟೆಸ್ಟ್ ಗೆ ಒಳಪಡಿಸುತ್ತೇವೆ ಎಂದು ಎಸ್ಪಿ ನಿಖಿಲ್ ಹೇಳಿದ್ದಾರೆ.

ನೋಡಿರಿ

