ಕೇರಳದಲ್ಲಿ ಹೆಚ್ಚಾದ ಮೆದಳು ತಿನ್ನುವ ಅಮೀಬಾ ಸೋಂಕು – ಅಯ್ಯಪ್ಪ ಭಕ್ತರಿಗೆ ಕರ್ನಾಟಕ ಸರ್ಕಾರದ ಎಚ್ಚರಿಕೆ

ಶಬರಿಮಲೆ ಯಾತ್ರೆ ಆರಂಭವಾಗಿದೆ. ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಪ್ರಕರಣಗಳು ಪತ್ತೆಯಾಗಿವೆ. ದೇವರ ದರ್ಶನಕ್ಕೆಂದು ಕೇರಳಕ್ಕೆ ತೆರಳುವ ಭಕ್ತರಿಗೆ ಕರ್ನಾಟಕ ಆರೋಗ್ಯ ಇಲಾಖೆ ಮಹತ್ವದ ಮಾರ್ಗಸೂಚಿಯನ್ನು ನೀಡಿದೆ. ಹಾಗಿದ್ರೆ ಸರ್ಕಾರ ಭಕ್ತರಿಗೆ ಏನೆಲ್ಲಾ ಎಚ್ಚರಿಕೆಯನ್ನ ನೀಡಿದೆ ನೋಡೋಣ.
ಇದನ್ನೂ ಓದಿ: ಪೋಕ್ಸೋ ಕೇಸ್ನಲ್ಲಿ ಬಿಎಸ್ ಯಡಿಯೂರಪ್ಪ ಮತ್ತೆ ಹಿನ್ನಡೆ- ವಿಚಾರಣೆಗೆ ಹಾಜರಾಗುವಂತೆ ಕೋರ್ಟ್‌ನಿಂದ ಸಮನ್ಸ್!
ಕೇರಳ ಹೋಗುವ ಅಯ್ಯಪ್ಪ ಭಕ್ತರಿಗೆ ಕರ್ನಾಟಕ ಸರ್ಕಾರದ ಮಾರ್ಗಸೂಚಿ
* ನೇಗೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಉದಾಹರಣೆಗೆ ನಿಂತ ನೀರು, ಕೊಳ/ಈಜು ಕೊಳಗಳು ಹಾಗೂ ಕೆರೆ.
* ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ
*ನೆಗ್ರೇರಿಯಾ ಫೌಲೆರಿ ಅತ್ಯಂತ ವಿಷಕಾರಿ ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಎನ್ನುವ ಅಪರೂಪದ ಗಂಭೀರ/ಮಾರಣಾಂತಿಕ ಖಾಯಿಲೆಯನ್ನು ಉಂಟುಮಾಡುತ್ತದೆ.
*ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್ ಗಳನ್ನು ಬಳಸಿ ಅಥವಾ ನಿಮ್ಮ ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿದು ಮುನ್ನೆಚ್ಚರಿಕೆ ವಹಿಸಿ.
* ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ ತೀವು ತಲೆನೋವು, ವಾಕರಿಕೆ/ ವಾಂತಿ, ಕುತ್ತಿಗೆ ಬಿಗಿತ, ಗೊಂದಲ/ ಮಾನಸಿಕ ಸ್ಥಿತಿಗಳಲ್ಲಿ ಬದಲಾವಣೆಗಳು ಹಾಗೂ ವ್ಯಕ್ತಿಯ ವರ್ತನೆಯಲ್ಲಿ ಅಸ್ವಸ್ಥತೆ ಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡದೇ ತುರ್ತು ಆರೈಕೆಯನ್ನು ಪಡೆಯಲು ಹತ್ತಿರದ ಸರ್ಕಾರಿ ಆಸ್ಪತ್ರೆ/ ವೈದ್ಯರನ್ನು ಸಂಪರ್ಕಿಸಿ.
ಶಬರಿಮಲೆ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ, ಸುರಕ್ಷತಾ ಕ್ರಮಗಳನ್ನು ಪಾಲಿಸುವ ಕುರಿತು ಸಲಹೆಗಳನ್ನು ನೀಡಲಾಗಿದೆ. ಭಕ್ತರು ದಯವಿಟ್ಟು ಈ ಆರೋಗ್ಯ ಸಲಹೆಗಳನ್ನ ಪಾಲಿಸಿ, ನಿಮ್ಮ ಆರೋಗ್ಯವನ್ನ ಕಾಪಾಡಿಕೊಳ್ಳಿ.

ನೋಡಿರಿ

