ರಾಜ್ಯದಲ್ಲಿ ಕೊರೊನಾ ಕರಿನೆರಳು – ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ

ರಾಜ್ಯದಲ್ಲಿ ಕೊರೊನಾ ಕರಿನೆರಳು – ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ

ರಾಜ್ಯದಲ್ಲಿ ಮಳೆ ನಡುವೆ ಕೊರೊನಾ ಅಬ್ಬರ ಜೋರಾಗುತ್ತಿದೆ. ರಾಜಧಾನಿ ಬೆಂಗಳೂರಲ್ಲಿ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇದರ ಜೊತೆ ದೇಶದ ಹಲವು ರಾಜ್ಯದಲ್ಲೂ ಸೋಂಕಿನ ಸಂಖ್ಯೆ ಹೆಚ್ಚು ಆಗುತ್ತಿರುವುದು ತಲೆ ನೋವಾಗಿ ಪರಿಣಮಿಸಿದೆ. ರಾಜ್ಯದ ಒಟ್ಟು ಆಕ್ಟೀವ್ ಕೇಸ್ 234 ಇದ್ದು, ಅದರಲ್ಲಿ ಬೆಂಗಳೂರು ಒಂದರಲ್ಲೇ ಬರೋಬ್ಬರಿ 150ಕ್ಕೂ ಹೆಚ್ಚು ಆಕ್ಟೀವ್ ಕೇಸ್‌ಗಳು ದಾಖಲಾಗಿದೆ. ಬೆಂಗಳೂರು ಮತ್ತೆ ಕೊರೊನಾ ಹಾಟ್‌ಸ್ಪಾಟ್ ಆಗುತ್ತಿದೆ. ಕೋವಿಡ್ ನಿಯಂತ್ರಣ ಜೊತೆಗೆ ಡೆಂಗ್ಯೂ ಕಾಪಾಡಿಕೊಳ್ಳೋದು ಸವಾಲಾಗಿದೆ. ಇದೀಗ ರಾಜ್ಯ ಆರೋಗ್ಯ ಇಲಾಖೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಇದನ್ನೂ ಓದಿ: MIಗೆ ಮ್ಯಾಚ್ ದಾನ ಮಾಡಿದ GT.. ಕ್ಯಾಚ್ ಮಿಸ್.. ಗಿಲ್ ಫೇಲ್.. ಕಾಸ್ಟ್ಲಿ ರನ್ಸ್! – ಫೈನಲ್ ಟಿಕೆಟ್ ಮುಂಬೈಗೆ ಬುಕ್ ಆಯ್ತಾ?

ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಇತ್ತೀಚೆಗೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಆರೋಗ್ಯ ಇಲಾಖೆ ಸರ್ಕಾರಿ ಹಾಗೂ ಖಾಸಗಿ  ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ವಿದ್ಯಾರ್ಥಿಗಳಲ್ಲಿ ಕೋವಿಡ್​ ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಅವರ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. ಅಲ್ಲದೇ ⁠ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತ ಕ್ರಮ ಪಾಲಿಸಬೇಕು. ಹಾಗೇ ⁠ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ಶಾಲೆಗಳಿಗೆ ಸೂಚನೆ ನೀಡಲಾಗಿದೆ.

ಆರೋಗ್ಯ ಇಲಾಖೆಯ ಗೈಡ್​ಲೈನ್ಸ್​

  • ಮಕ್ಕಳಲ್ಲಿ ಜ್ವರ , ಕೆಮ್ಮು, ನೆಗಡಿ ಗುಣಲಕ್ಷಣಗಳು ಬಂದರೆ ಶಾಲೆಗೆ ಕಳುಹಿಸಬಾರದು.
  •  ⁠ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗಳಿಗೆ ಕಳುಹಿಸಬೇಕು.
  •  ⁠ಗುಣಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದರೆ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು.
  •  ⁠ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತ ಕ್ರಮ ಪಾಲಿಸಬೇಕು.
  •  ⁠ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು.
  • ಬೆಂಗಳೂರು ಕೊರೊನಾ ಹಾಟ್​ ಸ್ಟಾಟ್

Shwetha M