ಕರ್ನಾಟಕದ ಎಲ್ಲ ಶಾಲೆಗಳ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು – ಹೈಕೋರ್ಟ್​

ಕರ್ನಾಟಕದ ಎಲ್ಲ ಶಾಲೆಗಳ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು – ಹೈಕೋರ್ಟ್​

5, 8, 9 ಮತ್ತು 11ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡಲು ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದು ಮಾಡಿದೆ. ಸರ್ಕಾರದ ಆದೇಶ ಪ್ರಶ್ನಿಸಿ ಕಾನೂನು ಸಮರ ಸಾರಿದ್ದ ಖಾಸಗಿ ಶಾಲೆಯ ಸಂಘಟನೆಯ ಹೋರಾಟಕ್ಕೆ ಜಯ ಸಿಕ್ಕಿದೆ.

ಇದನ್ನೂ ಓದಿ: ಕ್ಯಾಪ್ಟನ್ ಆಗಿ ಚೆನ್ನೈ ಸೂಪರ್ ಕಿಂಗ್ಸ್‌ ತಂಡವನ್ನು ಲೀಡ್ ಮಾಡೋದಿಲ್ವಾ ಧೋನಿ? – ಸಂಚಲನ ಮೂಡಿಸಿದ ಮಹಿ ಪೋಸ್ಟ್

ರಾಜ್ಯ ಸರ್ಕಾರ 5,8,9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಿಗದಿಪಡಿಸಿತ್ತು. ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ ರೂಪ್ಸಾ ಅನುದಾನಿತ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ  ಅವರು ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಪೀಠ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿದೆ. ಬೋರ್ಡ್​ ಪರೀಕ್ಷೆಗಳಿಂದ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್ ಸಿಕ್ಕಿದ್ರೆ, ಪೋಷಕರು, ರುಪ್ಸಾ ಸಂಘಟನೆಯ ಸದಸ್ಯರು ಸಂತಸ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಲಿ ಎಂದು ಕರ್ನಾಟಕ ಸರ್ಕಾರವು ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಬೋರ್ಡ್ ಪರೀಕ್ಷೆಗಳನ್ನು ನಡೆಸುವುದಾಗಿ ಘೋಷಿಸಿತ್ತು. ಉತ್ತಮ ಫಲಿತಾಂಶಗಳನ್ನು ಅಂಕ ಪಟ್ಟಿಗೆ ಪರಿಗಣಿಸಲಾಗುತ್ತದೆ ಎಂದು ಹೇಳಿದೆ. ಆದರೆ ಇದಕ್ಕೆ ಪರ-ವಿರೋಧ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

Shwetha M