ರಾಜ್ಯದ ಮಹಿಳಾ ನೌಕರರಿಗೆ ಶಾಕ್!‌ – ಮುಟ್ಟಿನ ರಜೆಗೆ ಹೈಕೋರ್ಟ್ ತಡೆ

ರಾಜ್ಯದ ಮಹಿಳಾ ನೌಕರರಿಗೆ ಶಾಕ್!‌ – ಮುಟ್ಟಿನ ರಜೆಗೆ ಹೈಕೋರ್ಟ್ ತಡೆ

ರಾಜ್ಯದ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. ಇದೀಗ ರಾಜ್ಯ ಸರ್ಕಾರ ಮಹತ್ವದ ಅಧಿಸೂಚನೆಗೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಇದನ್ನೂ ಓದಿ: ಗಿಲ್ಲಿ ಬೆನ್ನಿಗೆ ಚೂರಿ ಹಾಕಿದ್ರಾ ಕಾವ್ಯ? – ಕಾವು ನಿರ್ಧಾರಕ್ಕೆ ರಣರಂಗವಾಯ್ತು ಬಿಗ್‌ಬಾಸ್‌ ಮನೆ!  

ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯು 2025ರ ನವೆಂಬರ್ 20ರಂದು ಈ ಕುರಿತು ಅಧಿಸೂಚನೆ ಹೊರಡಿಸಿ, ಮುಟ್ಟಿನ ರಜೆಯನ್ನು ಜಾರಿಗೊಳಿಸಲು ಮುಂದಾಗಿತ್ತು. ಆದರೆ, ಈ ಆದೇಶದಿಂದ ಹೋಟೆಲ್‌ ಉದ್ಯಮಕ್ಕೆ ತೀವ್ರ ಸಮಸ್ಯೆ ಉಂಟಾಗುತ್ತದೆ ಎಂದು ಬೆಂಗಳೂರು ಹೋಟೆಲುಗಳ ಸಂಘವು (ರಿ) ಹೈಕೋರ್ಟ್‌ ಮೊರೆ ಹೋಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ನ್ಯಾಯಪೀಠವು, ಸರ್ಕಾರದ ಅಧಿಸೂಚನೆಗೆ ತಡೆ ನೀಡಿ ಮುಂದಿನ ವಿಚಾರಣೆಯನ್ನು ಮುಂದೂಡಿದೆ.

ಹೋಟೆಲ್ ಮಾಲೀಕರ ಸಂಘದ ಪರ ವಕೀಲರಾದ ಪ್ರಶಾಂತ್ ಬಿ.ಕೆ, ಕಾಯ್ದೆಯಲ್ಲಿಲ್ಲದ ನಿಯಮವನ್ನು ಸರ್ಕಾರಿ ಆದೇಶದ ಮೂಲಕ ಜಾರಿಗೊಳಿಸಿದೆ. ಸರ್ಕಾರದ ಏಕಪಕ್ಷೀಯ ಆದೇಶದಿಂದ ಹೋಟೆಲ್​ಗಳಿಗೆ ಸಮಸ್ಯೆ ಎಂದು ವಾದ ಮಂಡಿಸಿದ್ದಾರೆ. ಆದೇಶಕ್ಕೆ ಮುನ್ನ ಸಂಘಟನೆಗಳ ಅಭಿಪ್ರಾಯ ಪಡೆಯಲಾಗಿತ್ತೆ ಎಂದು ಪ್ರಶ್ನೆ ಹಾಕಿದ ನ್ಯಾಯಮೂರ್ತಿಯವರಿಗೆ ಇಲ್ಲ ಎಂದು ಹೋಟೆಲ್ ಮಾಲೀಕರ ಸಂಘದ ಪರ ವಕೀಲರ ಉತ್ತರ ನೀಡಿದ್ದಾರೆ. ಈ ಹಿನ್ನೆಲೆ ಮುಂದಿನ ವಿಚಾರಣೆವರೆಗೆ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ. ಮಧ್ಯಂತರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸಲು ಸರ್ಕಾರ ಸ್ವತಂತ್ರವೆಂದು ಹೈಕೋರ್ಟ್ ಏಕಸದಸ್ಯ ಪೀಠ ಅಭಿಪ್ರಾಯ ಪಟ್ಟಿದೆ. ಜೊತೆಗೆ, ಅರ್ಜಿ ಸಂಬಂಧ ರಾಜ್ಯ ಕಾರ್ಮಿಕ ಇಲಾಖೆಗೆ ನೋಟಿಸ್ ಜಾರಿಗೊಳಿಸಿದ್ದು, ಆಕ್ಷೇಪ ಸಲ್ಲಿಸಲು ಸೂಚಿಸಿದ ನ್ಯಾಯಪೀಠ, ಚಳಿಗಾಲದ ರಜೆಯ ಬಳಿಕ ಅರ್ಜಿ ವಿಚಾರಣೆ ಮುಂದೂಡಿತು.

Shwetha M