ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ ಬಾಂಬರ್ ಯಾರೆಂಬುದು ಗೊತ್ತಾಗಿದೆ -ಗೃಹಸಚಿವ ಪರಮೇಶ್ವರ್
ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ತನಿಖೆ ಚುರುಕುಗೊಂಡಿದೆ. ರಾಜ್ಯ, ಹೊರ ರಾಜ್ಯಗಳಲ್ಲಿ ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಹಲವು ಆಯಾಮಗಳಲ್ಲಿ ಅಧಿಕಾರಿಗಳ ತಂಡ ತನಿಖೆ ನಡೆಸುತ್ತಿದೆ. ಇದೀಗ ಈ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದ ಬಾಂಬರ್ ಯಾರೆಂಬುದು ಒಂದು ಹಂತಕ್ಕೆ ಪತ್ತೆ ಆಗಿದೆ ಎಂದು ಗೃಹಸಚಿವ ಜಿ ಪರಮೇಶ್ವರ್ ಹೇಳಿದರು.
ಇದನ್ನೂ ಓದಿ: ಮೈಸೂರು – ಕೊಡಗು ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರಾ ಒಡೆಯರ್..? ಕುತೂಹಲ ಮೂಡಿಸಿದ ಯದುವೀರ್ ಶಾರದಾಂಬೆ ದರ್ಶನ
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹಸಚಿವ, ಬಾಂಬರ್ ಯಾರೆಂಬುದು ಬಹುತೇಕ ಪತ್ತೆಯಾಗಿದೆ. ಅದನ್ನು ದೃಢಪಡಿಸಿಕೊಳ್ಳುವುದೊಂದೇ ಬಾಕಿ ಇದೆ. ಅದನ್ನು ಸಿಸಿಬಿ, ಎನ್ಐಎ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಮತ್ತೊಂದೆಡೆ ಶಂಕಿತ ಬಳಸಿದ ಮೊಬೈಲ್ ನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಆತ ಕಲಬುರಗಿಯಲ್ಲಿ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣ ಮಾಡಿರುವುದು ಕೂಡಾ ಪತ್ತೆಯಾಗಿದೆ. ನಂತರ ಶಂಕಿತ ಹೈದ್ರಾಬಾದ್ಗೆ ತೆರಳಿರುವ ಮಾಹಿತಿಯೂ ಲಭ್ಯವಾಗಿದೆ.
ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಗೊಂಡಿತ್ತು. 10 ಸೆಕೆಂಡ್ಗಳ ಅಂತರದಲ್ಲಿ ಎರಡು ಬಾಂಬ್ ಸ್ಪೋಟಗೊಂಡಿತ್ತು. ಈ ಸ್ಫೋಟದಲ್ಲಿ 9 ಮಂದಿ ಗಾಯಗೊಂಡಿದ್ದರು. ಇದೀಗ ಈ ಪ್ರಕರಣದ ತನಿಖೆಯನ್ನು ಎನ್ಐಎ ಅಧಿಕಾರಿಗಳು ನಡೆಸುತ್ತಿದ್ದು, ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ.