ಸುಪ್ರೀಂ ಕೋರ್ಟ್ ಅಂಗಳಕ್ಕೆ ಬಿದ್ದ ಕರ್ನಾಟಕ ಹನಿ ಟ್ರ್ಯಾಪ್ ಕೇಸ್ – ನ್ಯಾಯಮೂರ್ತಿ ಎದುರು ಅರ್ಜಿದಾರರ ಮನವಿ

ಸುಪ್ರೀಂ ಕೋರ್ಟ್ ಅಂಗಳಕ್ಕೆ ಬಿದ್ದ ಕರ್ನಾಟಕ ಹನಿ ಟ್ರ್ಯಾಪ್ ಕೇಸ್ – ನ್ಯಾಯಮೂರ್ತಿ ಎದುರು ಅರ್ಜಿದಾರರ ಮನವಿ

ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಹನಿ ಟ್ರ್ಯಾಪಿಂಗ್ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಎದುರು ಅರ್ಜಿದಾರರು ಮನವಿ ಮಾಡಿದ್ದಾರೆ. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್​ ಒಪ್ಪಿದೆ. ಹಾಗೆಯೇ ಈ ಪ್ರಕರಣದಲ್ಲಿ ನ್ಯಾಯಮೂರ್ತಿ ಹೆಸರೂ ಕೂಡ ಇರುವುದನ್ನು ಅರ್ಜಿದಾರರು ವಿಚಾರಣೆ ಸಂದರ್ಭದಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕದಲ್ಲಿ ನಡೆದ ಹನಿ-ಟ್ರ್ಯಾಪ್ ಹಗರಣಕ್ಕೆ ಸಂಬಂಧಿಸಿದಂತೆ ಹಿರಿಯ ಸಚಿವರು ಮತ್ತು ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಮೂರ್ತಿಗಳು ಸೇರಿದಂತೆ 48 ಜನರನ್ನು ಸಿಲುಕಿಸಿರುವ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠದೆದುರು ತರಲಾಗಿದೆ. ವಿಷಯವನ್ನು ಇಂದು ಅಥವಾ ನಾಳೆ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಜೆಐ ತಿಳಿಸಿದ್ದಾರೆ.

ಕರ್ನಾಟಕ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ವಿಧಾನಸಭೆ ಅಧಿವೇಶನದಲ್ಲಿ ಹನಿಟ್ರ್ಯಾಪ್​ನಲ್ಲಿ ತಮ್ಮನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಬಹಿರಂಗಪಡಿಸಿದ ನಂತರ ವಿವಾದ ಭುಗಿಲೆದ್ದಿತ್ತು. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಸೇರಿದಂತೆ ರಾಜಕೀಯ ಪಕ್ಷಗಳಲ್ಲಿ 48 ನಾಯಕರು ಇದೇ ರೀತಿಯ ಟ್ರ್ಯಾಪ್​ಗೆ ಬಲಿಯಾಗಿದ್ದಾರೆ ಎಂದು ಅವರು ಆರೋಪಿಸಿದರು.

 

Kishor KV

Leave a Reply

Your email address will not be published. Required fields are marked *