ವಿಧಾನಪರಿಷತ್‌ ಚುನಾವಣೆ – ಕಾಂಗ್ರೆಸ್​​ನ ಜಗದೀಶ್​​ ಶೆಟ್ಟರ್​, ಬೋಸರಾಜು, ತಿಪ್ಪಣ್ಣ ಅವಿರೋಧ ಆಯ್ಕೆ

ವಿಧಾನಪರಿಷತ್‌ ಚುನಾವಣೆ – ಕಾಂಗ್ರೆಸ್​​ನ ಜಗದೀಶ್​​ ಶೆಟ್ಟರ್​, ಬೋಸರಾಜು, ತಿಪ್ಪಣ್ಣ ಅವಿರೋಧ ಆಯ್ಕೆ

ಬೆಂಗಳೂರು: ಕರ್ನಾಟಕ ವಿಧಾನಪರಿಷತ್​​ನ ತೆರವಾಗಿದ್ದ ಮೂರು ಸ್ಥಾನಗಳಿಗೆ ಕಾಂಗ್ರೆಸ್​​ ಪಕ್ಷದ ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರ್, ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಎನ್‌ಎಸ್ ಬೋಸರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆಗೆ ಜನರಿಂದ ಹಣ ಪಡೆದರೆ ಕಠಿಣ ಕ್ರಮ – ಡಿ.ಕೆ ಶಿವಕುಮಾರ್‌

ಲಕ್ಷ್ಮಣ ಸವದಿ, ಆರ್ ಶಂಕರ್ ಹಾಗೂ ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯಿಂದ ತೆರವಾದ ಈ ಮೂರು ಸ್ಥಾನಗಳಿಗೆ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿತ್ತು. ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 20 ಕೊನೆಯ ದಿನವಾಗಿತ್ತು ಮತ್ತು ನಾಮಪತ್ರ ವಾಪಸ್ ಪಡೆಯಲು ಇಂದು(ಜೂನ್ 23) ಕೊನೆಯ ದಿನವಾಗಿತ್ತು. ಕಣದಲ್ಲಿ ಮೂವರೇ ಇದ್ದ ಕಾರಣದಿಂದ ಈ ಮೂವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ.

ವಿಧಾನ ಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಮೂವರು ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ತಿಪ್ಪಣ್ಣ ಕಮಕನೂರು ಹಾಗೂ ಸಚಿವ ಬೋಸರಾಜು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿಶಾಲಾಕ್ಷಿ ಅವರು ಅಧಿಕೃತವಾಗಿ ಘೋಷಿಸಿದ್ದಾರೆ.

suddiyaana