ದೆಹಲಿ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ – ಆಕ್ರೋಶದ ಬೆನ್ನಲೇ ಸಿಕ್ತು ಅನುಮತಿ

ದೆಹಲಿ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ – ಆಕ್ರೋಶದ ಬೆನ್ನಲೇ ಸಿಕ್ತು ಅನುಮತಿ

ನವದೆಹಲಿ: ಜನವರಿ 26ರಂದು ದೆಹಲಿಯ ರಾಜಪಥ್‍ನಲ್ಲಿ ನಡೆಯುವ ಗಣರಾಜ್ಯೋತ್ಸವ ದಿನಾಚರಣೆಯ ಪರೇಡ್‍ನಲ್ಲಿಈ ವರ್ಷ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಿಸಲಾಗಿತ್ತು. ಕೇಂದ್ರದ ಈ ನಡೆಗೆ ರಾಜ್ಯದೆಲ್ಲೆಡೆ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಕೊನೆ ಕ್ಷಣದಲ್ಲಿರಾಜ್ಯದ  ಸ್ತಬ್ಧಚಿತ್ರ ಪರೇಡ್ ನಲ್ಲಿ ಭಾಗವಹಿಸಲು ಅನುಮತಿ ದೊರಕಿದೆ.

ಇದನ್ನೂ ಓದಿ: ಪಾಸ್ ಪೋರ್ಟ್ ರ‍್ಯಾಂಕಿಂಗ್ ಬಿಡುಗಡೆ- ಎಲ್ಲಿದೆ ಭಾರತದ ಸ್ಥಾನ?

14 ನೇ ಬಾರಿಗೆ ಕರ್ನಾಟಕದ ಸ್ತಬ್ಧಚಿತ್ರ ಪರೇಡ್ ನಲ್ಲಿ ಭಾಗವಹಿಸಲಿದೆ.  ಈ ಬಾರಿ ಪದ್ಮಶ್ರೀ ಪುರಸ್ಕೃತ ಮಹಿಳಾ ಸಾಧಕರ ಸಾಧನೆ ಅನಾವರಣಗೊಳಿಸಲು ರಾಜ್ಯ “ನಾರಿ ಶಕ್ತಿ” ಕಲ್ಪನೆಯಲ್ಲಿ ಸಿದ್ಧತೆ ಮಾಡಿಕೊಂಡಿದೆ. ರಾಜ್ಯದ ಮೂವರು ಮಹಿಳಾ ಸಾಧಕಿಯರ ಬಗ್ಗೆ ಸ್ತಬ್ಧಚಿತ್ರ ತಯಾರಾಗಿದ್ದು, ಸಾಲುಮರದ ತಿಮ್ಮಕ್ಕ, ಸೂಲಗಿತ್ತಿ ನರಸಮ್ಮ, ತುಳಿಸಿಗೌಡ ಇವರ ಸಾಧನೆ ಅನಾವರಣಗೊಳ್ಳಲಿದೆ.

74ನೇ ಗಣರಾಜ್ಯೋತ್ಸವ ದಿನಾಚರಣೆಯ ಪರೇಡ್‍ನಲ್ಲಿ ಸ್ತಬ್ದಚಿತ್ರ ಪ್ರದರ್ಶನಕ್ಕೆ ಕೇರಳ, ತಮಿಳುನಾಡು ಸೇರಿದಂತೆ ಒಟ್ಟು 13 ರಾಜ್ಯಗಳನ್ನು ಕೇಂದ್ರ ಆಯ್ಕೆ ಮಾಡಿದೆ.

ಕಳೆದ ವರ್ಷ ದೆಹಲಿಯ ರಾಜಪಥ್‍ನಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆಯ ಪರೇಡ್‍ನಲ್ಲಿ ಭಾಗವಹಿಸಿದ್ದ ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳಗಳ ತೊಟ್ಟಿಲು ವಿಷಯಧಾರಿತ ರಾಜ್ಯದ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ ಸಿಕ್ಕಿತ್ತು. ಸತತ 13 ವರ್ಷಗಳಿಂದ ಪ್ರದರ್ಶನಗೊಳ್ಳುತ್ತ ಬಂದಿದ್ದ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಈ ವರ್ಷವೂ ಅವಕಾಶ ಸಿಕ್ಕಿದ್ದು ಸತತ 14ನೇ ಬಾರಿ ರಾಜ್ಯದ ಸ್ಥಬ್ದ ಚಿತ್ರ ಪ್ರದರ್ಶನಗೊಳ್ಳಲಿದೆ.

suddiyaana