ಭ್ರಷ್ಟ್ರ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ – ರಾಜ್ಯದ 7 ಅಧಿಕಾರಿಗಳ ಮನೆಗಳ ಮೇಲೆ ದಾಳಿ

ಭ್ರಷ್ಟ್ರ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ – ರಾಜ್ಯದ 7 ಅಧಿಕಾರಿಗಳ ಮನೆಗಳ ಮೇಲೆ ದಾಳಿ

ರಾಜ್ಯದಲ್ಲಿ ಭ್ರಷ್ಟ್ರ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರೆದಿದೆ. ಅಕ್ರಮ ಆಸ್ತಿ ಗಳಿಕೆ ದೂರು ಬಂದ ಹಿನ್ನೆಲೆ  ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 150ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳಿಂದ ಏಕಕಾಲಕ್ಕೆ 7 ನಗರದಲ್ಲಿ 40 ಕಡೆಗಳಲ್ಲಿ ರೇಡ್ ಮಾಡಿದ್ದಾರೆ.

ಇದನ್ನೂ ಓದಿ: ಮಣಿಪುರದಲ್ಲಿ ಸೇನೆಯ ಬಿಗ್‌ ಆಪರೇಷನ್‌ – 10 ಉಗ್ರರ ಎನ್‌ಕೌಂಟರ್‌

ತುಮಕೂರು, ಮಂಗಳೂರು, ವಿಜಯಪುರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಯಾದಗಿರಿಯ ಶಹಾಪುರದಲ್ಲಿನ ಭ್ರಷ್ಟ ಅಧಿಕಾರಿಗಳ ನಿವಾಸ ಹಾಗೂ ಕಚೇರಿ ಮೇಲೆ ರೇಡ್ ಮಾಡಲಾಗಿದೆ. ಬೆಂಗಳೂರಿನ 12 ಕಡೆ, ಬೆಂಗಳೂರು ಗ್ರಾಮಾಂತರ 8, ಯಾದಗಿರಿ 5, ವಿಜಯಪುರ 4, ಮಂಗಳೂರಿನ 4 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿದ್ದು ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಯಾರ ಮೇಲೆ ದಾಳಿ?

ರಾಜಶೇಖರ್: ಯೋಜನಾ ನಿರ್ದೇಶಕರು ನಿರ್ಮಿತಿ ಕೇಂದ್ರ ತುಮಕೂರು.

ಮಂಜುನಾಥ್: ಸರ್ವೆ ಸೂಪರ್ವೈಸರ್, ಮಂಗಳೂರು.

ಶ್ರೀಮತಿ ರೇಣುಕಾ: ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧಿಕಾರಿ ವಿಜಯಪುರ.

ಮುರಳಿ ಟಿವಿ: ಹೆಚ್ಚುವರಿ ನಿರ್ದೇಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯ, ಬೆಂಗಳೂರು.

ಹೆಚ್​ಆರ್ ನಟರಾಜ್: ಇನ್ಸ್‌ಪೆಕ್ಟರ್, ಕಾನೂನು ಮಾಪನಶಾಸ್ತ್ರ ಬೆಂಗಳೂರು.

ಅನಂತ್ ಕುಮಾರ್: SDA, ಹೊಸಕೋಟೆ ತಾಲೂಕು ಕಛೇರಿ ಬೆಂಗಳೂರು ಗ್ರಾಮಾಂತರ.

ಉಮಾಕಾಂತ್: ಶಹಾಪುರ ತಾಲೂಕು ಕಚೇರಿ ಯಾದಗಿರಿ.

Shwetha M

Leave a Reply

Your email address will not be published. Required fields are marked *