ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ ಮುಗಿಯುತ್ತಿದ್ದಂತೆ ಡಿನ್ನರ್ ಪಾಲಿಟಿಕ್ಸ್ – ಡಿಕೆಶಿ ಆಪ್ತರ ಡಿನ್ನರ್‌ ಮೀಟಿಂಗ್‌ನಲ್ಲಿ ಏನೆಲ್ಲಾ ಚರ್ಚೆ ಆಯ್ತು ಗೊತ್ತಾ?

ಬ್ರೇಕ್ ಫಾಸ್ಟ್ ಪಾಲಿಟಿಕ್ಸ್  ಮುಗಿಯುತ್ತಿದ್ದಂತೆ ಡಿನ್ನರ್ ಪಾಲಿಟಿಕ್ಸ್ – ಡಿಕೆಶಿ ಆಪ್ತರ ಡಿನ್ನರ್‌ ಮೀಟಿಂಗ್‌ನಲ್ಲಿ ಏನೆಲ್ಲಾ ಚರ್ಚೆ ಆಯ್ತು ಗೊತ್ತಾ?

ಸಿಎಂ ಕುರ್ಚಿ ಕಾದಾಟ ರಾಜ್ಯ ಕಾಂಗ್ರೆಸ್‌ನಲ್ಲಿ ನಿಂತಂತೆ ಕಾಣುತ್ತಿಲ್ಲ. ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ ಮುಗಿಯುತ್ತಿದ್ದಂತೆ, ಡಿನ್ನರ್ ಪಾಲಿಟಿಕ್ಸ್‌  ಜೋರಾಗಿದೆ. ನಿನ್ನೆ ರಾತ್ರಿ ತಮ್ಮ ಆಪ್ತ ಗಣಿ ಉದ್ಯಮಿ ದೊಡ್ಡಣ್ಣವರ್ ಅವರ ಫಾರ್ಮ್‌ ಹೌಸ್‌ನಲ್ಲಿ ಆಪ್ತ ಸಚಿವರು, ಶಾಸಕರ ಜೊತೆ ಡಿಸಿಎಂ ಡಿಕೆ ಶಿವಕುಮಾರ್‌  ಸಭೆ ನಡೆಸಿದ್ದಾರೆ. ಬುಧವಾರ ರಾತ್ರಿ ಸಿಎಂ ಸಿದ್ದರಾಮಯ್ಯ ಅಹಿಂದ ನಾಯಕರ ಜೊತೆ ಸಭೆ ನಡೆಸಿದ್ದರು. ಅದರ ಬೆನ್ನಲ್ಲೇ ಇದು ನಡೆದಿದೆ. ಡಿಕೆಶಿ ಸಹೋದರ ಡಿಕೆ ಸುರೇಶ್‌ ಅವರು ಶಾಸಕರಿಗೆ ಈ ಡಿನ್ನರ್‌ ವ್ಯವಸ್ಥೆ ಮಾಡಿದ್ದರು. ಈ ಡಿನ್ನರ್‌ ಸಭೆಯಲ್ಲಿ ಐದಕ್ಕೂ ಹೆಚ್ಚು ಸಚಿವರು, 40ಕ್ಕೂ ಹೆಚ್ಚು ಶಾಸಕರು ಸೇರಿದಂತೆ ಆಪ್ತರು ಭಾಗಿಯಾಗಿದ್ದರು. ಸಿಎಂ ಬಣದವರಿಗೆ ಆಹ್ವಾನ ನೀಡದೇ ಡಿಕೆಶಿ ಆಪ್ತರು ಮಾತ್ರ ಈ ಡಿನ್ನರ್‌ನಲ್ಲಿ  ಭಾಗಿಯಾಗಿದ್ರು.

ಸಿಎಂ ಸ್ಥಾನದ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಪದೇ ಪದೆ ಹೇಳಿಕೆ ಬಗ್ಗೆಯೇ ಡಿಕೆಶಿ ಕರೆದಿದ್ದ ಡಿನ್ನರ್ ಮೀಟಿಂಗ್‌ನಲ್ಲಿ ಹೆಚ್ಚು ಚರ್ಚೆಯಾಗಿದೆ ಎನ್ನಲಾಗಿದೆ. ಯತೀಂದ್ರರಿಗೆ ನೋಟೀಸ್ ಕೊಡಿ ಎಂದು ಕೆಲ ಶಾಸಕರು ಡಿಕೆಶಿಗೆ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಮುಂದಿನ ವಾರ ಡಿಕೆಶಿ ಅವರನ್ನು ದೆಹಲಿಗೆ ಕರೆದಿರುವ ಬಗ್ಗೆ ಕೂಡ ಚರ್ಚೆಯಾಗಿದೆ.

ಇದನ್ನೂ ಓದಿ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಹೀನಾಯ ಸೋಲು – 51 ರನ್‌ಗಳಿಂದ ಗೆದ್ದ ಹರಿಣ ಪಡೆ

ಎಂ.ಸಿ ಸುಧಾಕರ್, ಮಂಕಾಳ ವೈದ್ಯ, ಕೆ.ಎಚ್. ಮುನಿಯಪ್ಪ, ಶರಣಪ್ರಕಾಶ್ ಪಾಟೀಲ್, ಡಿ.ಕೆ.ಸುರೇಶ್, ಎಂಎಲ್‌ಸಿ ಚೆನ್ನರಾಜ್ ಹಟ್ಟಿಹೊಳಿ, ಶಾಸಕ ಬಾಬಾಸಾಹೇಬ್ ಪಾಟೀಲ್, ಶಿವರಾಂ ಹೆಬ್ಬಾರ್, ಸಿ.ಪಿ ಯೋಗೇಶ್ವರ್, ಶ್ರೀನಿವಾಸ್ ಮಾನೆ, ಎನ್‌ಎ ಹ್ಯಾರೀಸ್, ಇಕ್ಬಾಲ್ ಹುಸೇನ್, ಗಣೇಶ್ ಹುಕ್ಕೇರಿ, ಎಸ್ ಟಿ ಸೋಮಶೇಖರ್, ಎಂಎಲ್‌ಸಿ ರವಿ, ಸೇರಿ 40ಕ್ಕೂ ಹೆಚ್ಚು ಶಾಸಕರು, ಸಚಿವರು ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.

ಇನ್ನು ಬುಧವಾರ ರಾತ್ರಿ ಮಾಜಿ ಶಾಸಕ ಫಿರೋಜ್ ಸೇಠ್ ಅವರ ನಿವಾಸದಲ್ಲಿ ನಡೆದ ಭೋಜನ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ವಲಯದ ಸಚಿವರು ಮತ್ತು ಶಾಸಕರು ಭಾಗವಹಿಸಿದ್ದರು. ಆದರೆ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಅವರ ಬಣದ ಯಾವೊಬ್ಬ ಶಾಸಕರೂ ಭಾಗವಹಿಸಿರಲಿಲ್ಲ. ಇದೀಗ ಡಿಸಿಎಂ ಬಣ ಪ್ರತ್ಯೇಕ ಡಿನ್ನರ್ ಮೀಟಿಂಗ್ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

Kishor KV