2nd PUC ವಿದ್ಯಾರ್ಥಿಗಳಿಗೆ ಶಾಕ್! – ಇನ್ಮುಂದೆ ಸ್ಟಡಿ ಹಾಲಿಡೇ ಇರಲ್ಲ!

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಕಿಂಗ್ ಸುದ್ದಿಯೊಂದಿದೆ. ಇನ್ಮುಂದೆ 2nd ಪಿಯುಸಿ ವಿದ್ಯಾರ್ಥಿಗಳಿಗೆ ಸ್ಟಡಿ ಹಾಲಿಡೇ ಇರೋದಿಲ್ಲ. ರಾಜ್ಯ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಸ್ಟಡಿ ಹಾಲಿಡೇಗೆ ಬ್ರೇಕ್ ಹಾಕಿದೆ.
ಇದನ್ನೂ ಓದಿ: ಕ್ಷಣ ಕ್ಷಣಕ್ಕೂ ರಿವೀಲ್ ಆಗುತ್ತಿದೆ ಲಕ್ಕುಂಡಿ ರಹಸ್ಯ! – ಮನೆಯೊಳಗೆ ಪತ್ತೆಯಾಯ್ತು ಶಿವನ ದೇಗುಲ!
ಈವರೆಗೆ ಪೂರ್ವಸಿದ್ಧತಾ ಪರೀಕ್ಷೆ ಮುಗಿದ ಬಳಿಕ ಸುಮಾರು ಒಂದು ತಿಂಗಳ ಕಾಲ ವಿದ್ಯಾರ್ಥಿಗಳಿಗೆ ಸ್ಟಡಿ ಹಾಲಿಡೇ ನೀಡಲಾಗುತ್ತಿತ್ತು. ಆದ್ರೀಗ ಶಿಕ್ಷಣ ಇಲಾಖೆ ಸ್ಪಡಿ ಹಾಲಿಡೇಗೆ ಬ್ರೇಕ್ ಹಾಕಿದೆ. ಇನ್ನು ಮುಂದೆ ಪರೀಕ್ಷೆ ಮುಗಿಯುವವರೆಗೂ ಪಿಯು ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕು. ದ್ವಿತೀಯ ಪಿಯು ಫಲಿತಾಂಶ ಸುಧಾರಣೆ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಂಡಿರುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.
ಪೂರ್ವ ಸಿದ್ದತಾ ಪರೀಕ್ಷೆ ಮುಗಿದ ಬಳಿಕ ವಿದ್ಯಾರ್ಥಿಗಳಿಗೆ ಸ್ಟಡಿ ಹಾಲಿಡೇ ನೀಡಲಾಗುತ್ತಿತ್ತು. ಆದ್ರೆ ಈ ವ್ಯವಸ್ಥೆಯಿಂದ ನಿರೀಕ್ಷಿತ ಫಲಿತಾಂಶ ಸಿಗುತ್ತಿಲ್ಲ ಎಂಬ ಮಾತು ಕೇಳಿಬಂದಿದೆ. ಹೀಗಾಗಿ ಪಿಯುಸಿ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ರಾಜ್ಯ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ. ಫೆಬ್ರವರಿ 26ರವರೆಗೆ ಕಾಲೇಜುಗಳನ್ನು ನಡೆಸಲು ಇಲಾಖೆ ನಿರ್ಧರಿಸಿದ್ದು, ವಿದ್ಯಾರ್ಥಿಗಳನ್ನು ಕಾಲೇಜಿನಲ್ಲಿ ಉಪಾನ್ಯಾಸಕರ ನೇತೃತ್ವದಲ್ಲಿಯೇ ಮುಖ್ಯ ಪರೀಕ್ಷೆಗೆ ಸಿದ್ಧಪಡಿಸುವಂತೆ ಸೂಚನೆ ನೀಡಲಾಗಿದೆ.
ಉಪನ್ಯಾಸಕರ ನೇತೃತ್ವದಲ್ಲಿ ಗ್ರೂಪ್ ಸ್ಟಡಿ ವ್ಯವಸ್ಥೆ ಜಾರಿಗೊಳಿಸಲು ಇಲಾಖೆ ಮುಂದಾಗಿದೆ. ಪಠ್ಯ ಪುನರವಲೋಕನ, ಅನುಮಾನ ನಿವಾರಣೆ, ಪ್ರಶ್ನೋತ್ತರ ಚರ್ಚೆಗಳ ಮೂಲಕ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸಬೇಕು ಎಂದು ಕಾಲೇಜುಗಳಿಗೆ ಸೂಚಿಸಲಾಗಿದೆ. ಜೊತೆಗೆ ಉಪನ್ಯಾಸಕರು ಕೂಡ ಪರೀಕ್ಷೆ ಮುಗಿಯುವವರೆಗೂ ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕು ಎಂದು ಆದೇಶಿಸಲಾಗಿದೆ. ಈ ಹೊಸ ಕ್ರಮದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಾಗಲಿದೆ ಹಾಗೂ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸುಧಾರಣೆ ಕಾಣಬಹುದು ಎಂಬ ವಿಶ್ವಾಸವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ವ್ಯಕ್ತಪಡಿಸಿದೆ.

ನೋಡಿರಿ

