ಅಲರ್ಟ್.. ಅಲರ್ಟ್.. ಬೆಂಗಳೂರು ಸೇರಿ 8 ಜಿಲ್ಲೆಗಳಲ್ಲಿ 7ದಿನ ಭಾರೀ ಮಳೆ..!

ಚಂಡಮಾರುತ ಪ್ರಸರಣದ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ನೈರುತ್ಯ ಮಾನ್ಸೂನ್ ಕೇರಳಕ್ಕೆ ಪ್ರವೇಶಿಸುವುದಕ್ಕೆ ದಿನಗಣನೆ ಪ್ರಾರಂಭವಾಗಿದೆ. ಇನ್ನು ಕೆಲವೇ ದಿನಗಳಲ್ಲಿ ನೈರುತ್ಯ ಮಾನ್ಸೂನ್ ಕರ್ನಾಟಕ ಪ್ರವೇಶ ಮಾಡಲಿದೆ. ಈ ನಡುವೆ ಚಂಡಮಾರುತದ ಪ್ರಭಾವದಿಂದಾಗಿ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ (ಉತ್ತರ) ಪ್ರದೇಶ ಸೇರಿದಂತೆ ವಿವಿಧ ಭಾಗಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಆಗ್ನೇಯ ಅರೇಬಿಯನ್ ಸಮುದ್ರ, ಕೊಮೊರಿನ್ ಪ್ರದೇಶ, ನೈಋತ್ಯ ಮತ್ತು ಆಗ್ನೇಯ ಬಂಗಾಳಕೊಲ್ಲಿಯ ಕೆಲವು ಭಾಗಗಳು – ಅಂಡಮಾನ್ ಸಮುದ್ರದ ಉಳಿದ ಭಾಗಗಳು ಮತ್ತು ಪೂರ್ವ ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳಿಗೆ ನೈಋತ್ಯ ಮಾನ್ಸೂನ್ ಪ್ರಭಾವವು ಅನುಕೂಲಕರವಾಗಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮೇ 26ರ ವರೆಗೆ ಮಳೆ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: CSKಗೆ ಇಂದು ಮಾಡು ಇಲ್ಲವೇ ಮಡಿ – ಚೆನ್ನೈ ಗೆಲುವಿಗಾಗಿ ಕಾದು ಕುಳಿತ RCB
ಬೆಂಗಳೂರು ಸೇರಿದಂತೆ ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಏಳು ದಿನಗಳ ಅವಧಿಗೆ ಕರಾವಳಿ ಜಿಲ್ಲೆಗಳು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ ಇರಲಿದೆ ಎಂದು ಹೇಳಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ. ಈ ಜಿಲ್ಲೆಗಳಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ. ಇನ್ನು ಕರ್ನಾಟಕ ಉತ್ತರ ಒಳನಾಡಿನ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲೂ ಮಳೆ ಇರಲಿದೆ. ಮುಂದುವರಿದು ಧಾರವಾಡ, ಹಾವೇರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲೂ ಮಳೆ ಆಗಲಿದೆ. ಗಾಳಿಯ ವೇಗವು ಪ್ರತಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.
ಬೆಂಗಳೂರಿಗೆ ಬಿಗ್ ಅಲರ್ಟ್- ರಾಜಧಾನಿ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳ ಕಾಲ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ನಗರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ತಗ್ಗು ಪ್ರದೇಶದ ನಿವಾಸಿಗಳು ಮತ್ತು ಕಚೇರಿಗೆ ತೆರಳುವವರು ಮುನ್ನೆಚ್ಚರಿಕೆ ವಹಿಸುವುದು ಕಡ್ಡಾಯ. ನಗರದಲ್ಲಿ ಟ್ರಾಫಿಕ್ ಸಮಸ್ಯೆ ಮತ್ತು ಜಲಾವೃತವಾಗುವ ಭೀತಿ ಎದುರಾಗಿದೆ.

ನೋಡಿರಿ

