ಬಿಸಿಲ ಧಗೆಯಿಂದ ಕಂಗೆಟ್ಟಿದ್ದ ಜನತೆಗೆ ಗುಡ್ ನ್ಯೂಸ್ – ರಾಜ್ಯದಲ್ಲಿ 5 ದಿನ ಭಾರಿ ಮಳೆ ಸಾಧ್ಯತೆ

ಬಿಸಿಲ ಧಗೆಯಿಂದ ಕಂಗೆಟ್ಟಿದ್ದ ಜನತೆಗೆ ಗುಡ್ ನ್ಯೂಸ್ – ರಾಜ್ಯದಲ್ಲಿ 5 ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಖುಷಿ ಸುದ್ದಿಯಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ನಂದಿ ಗಿರಿಧಾಮ ಪ್ರವೇಶ ಸಮಯದಲ್ಲಿ ಬದಲಾವಣೆ – ಹೊಸ ವೇಳಾಪಟ್ಟಿಯಲ್ಲಿ ಏನೇನಿದೆ?

ಬೆಂಗಳೂರಿನಲ್ಲಿ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡು, ಕರಾವಳಿಯಲ್ಲಿ ಮಳೆ ಆಗಲಿದೆ. ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಕೊಡಗು, ಚಾಮರಾಜನಗರ, ಮೈಸೂರು, ರಾಮನಗರ, ಮಂಡ್ಯ ವಿಜಯನಗರ, ಶಿವಮೊಗ್ಗ, ಹಾಸನ ತುಮಕೂರು, ಚಿಕ್ಕಮಗಳೂರು, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಕೋಲಾರ, ಚಿಕ್ಕಬಳ್ಳಾಪು ಸೇರಿದಂತೆ 15 ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಒಳನಾಡಿನ 8 ಜಿಲ್ಲೆಗಳಲ್ಲಿ 3 ದಿನ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ 2 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

suddiyaana