ರಾಜ್ಯದಲ್ಲಿ ವರುಣನ ಆರ್ಭಟ – ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸಾಧ್ಯತೆ

ರಾಜ್ಯದಲ್ಲಿ ವರುಣನ ಆರ್ಭಟ – ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಮಳೆಯ ಆರ್ಭಟ ಜೋರಾಗಿದೆ. ಒಂದೇ ವಾರದಲ್ಲಿ ರಾಜ್ಯದ ಹಲವೆಡೆ ಸಾಕಷ್ಟು ಅವಾಂತರ ಸೃಷ್ಠಿಯಾಗಿದೆ. ಇದೀಗ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಇದನ್ನೂ ಓದಿ: ಸೈನಿಕನಾಗಲು ಹೊರಟಿದ್ದೇಕೆ ಜಿತೇಶ್ – 4% ಮಾರ್ಕ್‌ಗಾಗಿ ಕ್ರಿಕೆಟ್‌ಗೆ ಎಂಟ್ರಿ

ಕಳೆದ ಒಂದು ವಾರದಿಂದ ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿದೆ. ಇದೀಗ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎಂದು IMD ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಯೆ ರೆಡ್ ಅಲರ್ಟ್​ ನೀಡಲಾಗಿದೆ. ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​, ದಾವಣಗೆರೆ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಇಡೀ ದೇಶದ ಹವಾಮಾನ ಹೇಗಿದೆ?

ಪಶ್ಚಿಮ ಬಂಗಾಳ, ಹಿಮಾಚಲಪ್ರದೇಶ, ಉತ್ತರಾಖಂಡ, ಲಕ್ಷದ್ವೀಪ, ಅಂಡಮಾನ್, ನಿಕೋಬಾರ್, ಒಡಿಶಾ, ಜಾರ್ಖಂಡ್​, ಮಧ್ಯ ಮಹಾರಾಷ್ಟ್ರ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ತ್ರಿಪುರಾ, ಅಸ್ಸಾಂ, ಮೇಘಾಲಯ, ಛತ್ತೀಸ್​ಗಢ, ಉತ್ತರ ಪ್ರದೇಶ, ಬಿಹಾರ, ಕರ್ನಾಟಕ, ತಮಿಳುನಾಡು,ಆಂಧ್ರಪ್ರದೇಶ, ಪುದುಚೇರಿ, ಕಾರೈಕಲ್​ನಲ್ಲಿ ಇಂದು ಭಾರಿ ಮಳೆಯಾಗಲಿದೆ.

Shwetha M