ರಾಜ್ಯದಲ್ಲಿ ವರುಣನ ಆರ್ಭಟ – ಕರಾವಳಿ ಸೇರಿ 23 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ!

ರಾಜ್ಯದಲ್ಲಿ ವರುಣನ ಆರ್ಭಟ – ಕರಾವಳಿ ಸೇರಿ 23 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ!

ರಾಜ್ಯದಲ್ಲಿ ಮಳೆ ಆರ್ಭಟ ಜೋರಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ನಿನ್ನೆ ರಾತ್ರಿ ಭಾರಿ ಮಳೆ ಸುರಿದಿದ್ದು ಹಲವು ಕಡೆ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಇದೀಗ ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಸೇರಿ 23 ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ರೈತರ ಹಿತಾಸಕ್ತಿ ಕಾಪಾಡಲು ಭಾರತ ಬೆಲೆ ತೆರಲು ಸಿದ್ಧ – ಟ್ರಂಪ್ ದುಪ್ಪಟ್ಟು ತೆರಿಗೆಗೆ ಮೋದಿ ಕೌಂಟರ್

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕೂಡ ಕಳೆದ ನಾಲ್ಕು ದಿನಗಳಿಂದ ಅಬ್ಬರದ ಮಳೆಯಲ್ಲದಿದ್ದರೂ ಸಾಧಾರಣ ಮಳೆಯಾಗುತ್ತಿದೆ. ಆಗಸ್ಟ್​ 10ರವರೆಗೂ ರಾಜ್ಯದಲ್ಲಿ ಮಳೆ ಮುಂದವರೆಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ಕೋಲಾರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​ಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಾರ ಪೂರ್ತಿ ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಹೀಗಾಗಿ ನಗರದಲ್ಲಿ ಮುಂದಿನ ಕೆಲವು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯುವ ನಿರೀಕ್ಷೆಯಿದೆ.

Shwetha M