ಕರಾವಳಿ ಜಿಲ್ಲೆಗಳಲ್ಲಿ ಇನ್ನೂ 1 ವಾರ ಮಳೆ ಆರ್ಭಟ – ಎಲ್ಲೆಲ್ಲಿ ಎಲ್ಲೋ ಅಲರ್ಟ್?

ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗ್ತಿದೆ. ಇದೀಗ ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ಇನ್ನೂ ಒಂದು ವಾರಗಳ ಕಾಲ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ಮರಣದಂಡನೆಯಿಂದ ನಿಮಿಷಾ ಪ್ರಿಯಾಗೆ ಸಂಪೂರ್ಣ ಮುಕ್ತಿ – ಭಾರತೀಯ ಗ್ರ್ಯಾಂಡ್ ಮುಫ್ತಿ ಕಚೇರಿ ಅಧಿಕೃತ ಹೇಳಿಕೆ
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮಲೆನಾಡಿನಲ್ಲೂ ಮಳೆ ಕಡಿಮೆಯಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಬಿರುಸು ಕಡಿಮೆಯಾಗಿದೆ. ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ನಡುವೆ, ಸೋಮವಾರ ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಹಲವು ಮತ್ತು ಉತ್ತರ ಒಳನಾಡಿನ ಕೆಲ ಸ್ಥಳಗಳಲ್ಲಿ ಮಳೆಯಾಗಿದೆ. ಪ್ರಮುಖವಾಗಿ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ಆಗುಂಬೆ 6, ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ರಾಕ್ 5, ಉಡುಪಿ ಜಿಲ್ಲೆಯ ಸಿದ್ದಾಪುರ, ಉತ್ತರ ಕನ್ನಡ ಜಿಲ್ಲೆಯ ಗೇರುಸೊಪ್ಪದಲ್ಲಿ ತಲಾ 4 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾರಣವಿದ್ದು, ಸಾಧಾರಣ ಮಳೆಯಾಗಲಿದೆ. ಹಾಸನ, ಕೊಡಗು, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಇಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೋಡಿರಿ

