SSLC ಪರೀಕ್ಷೆ ಕೌಂಟ್ಡೌನ್! – ವಿದ್ಯಾರ್ಥಿಗಳೇ ಪರೀಕ್ಷೆ ದಿನ ಮಾರ್ಗಸೂಚಿಯನ್ನು ತಪ್ಪದೇ ಪಾಲಿಸಿ!

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್ಎಸ್ಎಲ್ಸಿ ಅಂತಿಮ (10ನೇ ತರಗತಿ) ಬೋರ್ಡ್ ಪರೀಕ್ಷೆಗಳು ಮಾರ್ಚ್ 18, 2026ರಿಂದ ಆರಂಭವಾಗಲಿವೆ. ರಾಜ್ಯದಾದ್ಯಂತ ಲಕ್ಷಾಂತರ ಮಂದಿ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಲಿದ್ದಾರೆ. ಇದೀಗ ಪರೀಕ್ಷೆ ಸಮಯ, ಡ್ರೆಸ್ ಕೋಡ್, ಮಾರ್ಗಸೂಚಿಗಳ ಬಗ್ಗೆ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಚಿನ್ನಸ್ವಾಮಿಯಲ್ಲೇ ನಡೆಯಲಿದೆ 2026ರ IPL ಫೈನಲ್! – ಬೆಂಗಳೂರಿನಲ್ಲಿ RCB ಎಷ್ಟು ಪಂದ್ಯಗಳನ್ನು ಆಡಲಿದೆ?
ಕರ್ನಾಟಕ ಎಸ್ಎಸ್ಎಲ್ಸಿ ವೇಳಾಪಟ್ಟಿ 2026 ಪ್ರಕಾರ, 10ನೇ ತರಗತಿ ಬೋರ್ಡ್ ಪರೀಕ್ಷೆಗಳು ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿವೆ. ಈ ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುತ್ತಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಗಮನಿಸಬೇಕಾದ ಪ್ರಮುಖ ಅಂಶಗಳು ಇಲ್ಲಿವೆ.
ವಿದ್ಯಾರ್ಥಿಗಳು ಗಮನಿಸಬೇಕಾದ ಪ್ರಮುಖ ಅಂಶಗಳು
- ಎಸ್ಎಸ್ಎಲ್ಸಿ ಪರೀಕ್ಷೆ ಬೆಳಿಗ್ಗೆ 10:15 ರಿಂದ ಮಧ್ಯಾಹ್ನ 1:30 ಗಂಟೆವರೆಗೆ ಇರಲಿದ್ದು, ಒಟ್ಟು ಪರೀಕ್ಷಾ ಅವಧಿ 3 ಗಂಟೆ 15 ನಿಮಿಷಗಳು.
- ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆ ಓದಲು 15 ನಿಮಿಷಗಳ ಸಮಯ ನೀಡಲಾಗುತ್ತದೆ. ಪ್ರಶ್ನೆಪತ್ರಿಕೆಯನ್ನು ಬೆಳಿಗ್ಗೆ 10 ಗಂಟೆಗೆ ನೀಡಲಾಗುತ್ತದೆ. ನಂತರ ವಿದ್ಯಾರ್ಥಿಗಳು 10:15ರಿಂದ ಉತ್ತರ ಬರೆಯಲು ಆರಂಭಿಸಬಹುದು.
- ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯದೊಳಗೆ ಅಂದರೆ, ಬೆಳಿಗ್ಗೆ 9:45ರಿಂದ 10 ಗಂಟೆಯೊಳಗೆ ತಲುಪಲು ಸೂಚಿಸಲಾಗಿದೆ.
- ಹಾಲ್ ಟಿಕೆಟ್ (ಪ್ರವೇಶ ಪತ್ರ) ಮತ್ತು ಅಗತ್ಯ ದಾಖಲೆಗಳನ್ನು ಜೊತೆಯಲ್ಲಿ ತರಬೇಕು ಎಂದು ಮಂಡಳಿ ಸೂಚಿಸಿದೆ.
ಪರೀಕ್ಷಾ ಕೇಂದ್ರದಲ್ಲಿ ಯಾವೆಲ್ಲಾ ವಸ್ತುಗಳಿಗೆ ಅನುಮತಿ?
- ಎಸ್ಎಸ್ಎಲ್ಸಿ ಹಾಲ್ ಟಿಕೆಟ್
- ನೀಲಿ ಅಥವಾ ಕಪ್ಪು ಬಣ್ಣದ ಬಾಲ್ಪಾಯಿಂಟ್ ಪೆನ್ಗಳು
- ಜಾಮಿಟರ್ ಬಾಕ್ಸ್ (ಗಣಿತ ಪರೀಕ್ಷೆಗೆ)
- ಪಾರದರ್ಶಕ ನೀರಿನ ಬಾಟಲ್
- ಪರೀಕ್ಷೆಗೆ ಅಗತ್ಯವಿರುವ ವಸ್ತುಗಳು
- ಮುಖ್ಯವಾಗಿ ಹಾಲ್ ಟಿಕೆಟ್ ಇಲ್ಲದಿದ್ದರೆ, ವಿದ್ಯಾರ್ಥಿಗಳಿಗೆ ಪರೀಕ್ಷಾ ಹಾಲ್ಗೆ ಪ್ರವೇಶ ನೀಡಲಾಗುವುದಿಲ್ಲ ಎಂಬುದನ್ನು ಗಮನದಲ್ಲಿರಿಸಿಕೊಳ್ಳಬೇಕು.
ಯಾವೆಲ್ಲಾ ವಸ್ತುಗಳಿಗೆ ನಿಷೇಧ?
- ಮೊಬೈಲ್ ಫೋನ್ಗಳು
- ಸ್ಮಾರ್ಟ್ ವಾಚ್ಗಳು
- ಬ್ಲೂಟೂತ್ ಸಾಧನಗಳು, ಇಯರ್ಫೋನ್ಗಳು
- ಕ್ಯಾಲ್ಕ್ಯುಲೇಟರ್ಗಳು (ವಿಶೇಷವಾಗಿ ಅನುಮತಿ ನೀಡಿದಲ್ಲಿ ಮಾತ್ರ)
- ನೋಟ್ಸ್ ಅಥವಾ ಚೀಟಿಗಳು * ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳು
- ಈ ಮೇಲಿನ ನಿಯಮಗಳನ್ನು ಉಲ್ಲಂಘಿಸಿದರೆ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ಡ್ರೆಸ್ಕೋಡ್ ಮತ್ತು ನಿಯಮಗಳು
- ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳು ಶಾಲಾ ಸಮವಸ್ತ್ರ ಧರಿಸುವುದು ಕಡ್ಡಾಯ.
- ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಸುಲಭವಾಗಿ ಗುರುತಿಸಲು ಸಾಧ್ಯವಾಗುವಂತೆ ಸರಳ ಹಾಗೂ ಸರಿಯಾದ ಶಾಲೆಯ ಯೂನಿಫಾರ್ಮ್ ಧರಿಸಿ ಬರಬೇಕು.
ವಿದ್ಯಾರ್ಥಿಗಳಿಗೆ ಪ್ರಮುಖ ಸೂಚನೆಗಳು
- ಪರೀಕ್ಷಾ ಕೇಂದ್ರಕ್ಕೆ ಕನಿಷ್ಠ 30 ನಿಮಿಷ ಮುಂಚಿತವಾಗಿ ತಲುಪಬೇಕು.
- ನಿಗದಿಪಡಿಸಿದ ಆಸನದಲ್ಲಿ ಕುಳಿತುಕೊಳ್ಳಬೇಕು.
- ಉತ್ತರ ಪತ್ರಿಕೆಯ ಮೇಲೆ ನೋಂದಣಿ ಸಂಖ್ಯೆ ಮತ್ತು ವಿಷಯದ ಕೋಡ್ ಅನ್ನು ಎಚ್ಚರಿಕೆಯಿಂದ ಬರೆಯಬೇಕು.
- ಪರೀಕ್ಷಾ ಕೊಠಡಿಯಲ್ಲಿ ನಿಶ್ಶಬ್ದ ಮತ್ತು ಶಿಸ್ತು ಕಾಯ್ದುಕೊಳ್ಳಬೇಕು.
- ಪರೀಕ್ಷಾ ಅಧಿಕಾರಿಗಳು ನೀಡುವ ಎಲ್ಲ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
- ಜೊತೆಗೆ, ಪರೀಕ್ಷೆಗೆ ಮುನ್ನವೇ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ನಲ್ಲಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಪರಿಶೀಲಿಸಿಕೊಳ್ಳಬೇಕು, ಇದರಿಂದ ಕೊನೆಯ ಕ್ಷಣದಲ್ಲಿ ಯಾವುದೇ ಗೊಂದಲ ಉಂಟಾಗುವುದನ್ನು ತಪ್ಪಿಸಬಹುದು.
ಎಸ್ಎಸ್ಎಲ್ಸಿ ಪರೀಕ್ಷೆ ವೇಳಾಪಟ್ಟಿ
- ಮಾರ್ಚ್ 18 – ಪ್ರಥಮ ಭಾಷೆ
- ಮಾರ್ಚ್ 23 – ವಿಜ್ಞಾನ
- ಮಾರ್ಚ್ 25 – ದ್ವಿತೀಯ ಭಾಷೆ
- ಮಾರ್ಚ್ 28 – ಗಣಿತ
- ಮಾರ್ಚ್ 30 – ತೃತೀಯ ಭಾಷೆ
- ಏಪ್ರಿಲ್ 2 – ಸಮಾಜ ವಿಜ್ಞಾನ

ನೋಡಿರಿ

