ಶಾಲಾ ಮಕ್ಕಳಿಗೆ ಏ. 11 ರಿಂದ ಮೇ 29 ರವರೆಗೆ ಬೇಸಿಗೆ ರಜೆ- ರಜೆಯಲ್ಲಿ ಶಾಲಾ ಮಕ್ಕಳಿಗೆ ಆಹಾರ ಧಾನ್ಯ ವಿತರಿಸಲಾಗುತ್ತಾ?

ಶಾಲಾ ಮಕ್ಕಳಿಗೆ ಏ. 11 ರಿಂದ ಮೇ 29 ರವರೆಗೆ ಬೇಸಿಗೆ ರಜೆ- ರಜೆಯಲ್ಲಿ ಶಾಲಾ ಮಕ್ಕಳಿಗೆ ಆಹಾರ ಧಾನ್ಯ ವಿತರಿಸಲಾಗುತ್ತಾ?

ಒಂದ್ಕಡೆ ರಣ ಬಿಸಿಲು, ಇನ್ನೊಂದು ಕಡೆ ಕುಡಿಯುವ ನೀರಿಗೂ ಹಾಹಾಕಾರ. ಶಾಲೆ ಕಾಲೇಜುಗಳಲ್ಲೂ ನೀರಿಲ್ಲ. ಶಾಲಾ ಮಕ್ಕಳಿಗೆ (1ನೇ ತರಗತಿ ಇಂದ 9 ನೇ ತರಗತಿ ವರೆಗೆ) ಈಗಾಗಲೇ ಪರೀಕ್ಷೆ ಮುಗಿದಿದೆ. ಯಾವಾಗಿನಿಂದ ರಜೆ ಸಿಗುತ್ತೆ ಅಂತಾ ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರು, ಪೋಷಕರು ಕಾಯುತ್ತಿದ್ದರು. ಇದೀಗ ಕಡೆಗೂ ಗುಡ್‌ನ್ಯೂಸ್‌ ಸಿಕ್ಕಿದೆ.

ಇದನ್ನೂ ಓದಿ:ಯುವಕರಿಗೆ ಉದ್ಯೋಗದ ಜೊತೆ 1 ಲಕ್ಷ ವೇತನ, ಬಡ ಕುಟುಂಬಕ್ಕೆ ವಾರ್ಷಿಕ 1 ಲಕ್ಷ ರೂ. – ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆ ಬಿಡುಗಡೆ 

ಇನ್ನು, ಈಗಾಗಲೇ 1-9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಎಲ್ಲ ಪರೀಕ್ಷೆಗಳು ಮುಗಿದಿದೆ. ಸದ್ಯದಲ್ಲೇ ಈ ಪರೀಕ್ಷೆ ಫಲಿತಾಂಶ ಕೂಡ ಪ್ರಕಟವಾಗಲಿದೆ. ಈ ಮಧ್ಯೆ ಏಪ್ರಿಲ್‌ 11 ರಿಂದ ಬೇಸಿಗೆ ರಜೆ ಆರಂಭವಾಗಲಿದೆ. ಮೇ 29 ರವರೆಗೆ ಬೇಸಿಗೆ ರಜೆ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಜತೆಗೆ ಇಷ್ಟು ದಿನ ಬೇಸಿಗೆ ರಜೆಯಲ್ಲಿ ಮಕ್ಕಳಿಗೆ ಆರೋಗ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಆಹಾರ ಧಾನ್ಯಗಳು ವಿತರಣೆ ಮಾಡುತ್ತಿತ್ತು. ಆದರೆ ಈ ಬಾರಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಶಾಲೆಗಳಲ್ಲೇ ನೀಡಲಿದ್ದೇವೆ ಎಂದು ಶಿಕ್ಷಣ ಇಲಾಖೆ ಬಂದಿದೆ.

Shwetha M