ಇಂದಿನಿಂದ ಕರುನಾಡಿನಲ್ಲಿ SIR ಶುರು – ಹೇಗೆ ನಡೆಯುತ್ತೆ? ನಿಮ್ಮ ಹತ್ತಿರ ಯಾವ ದಾಖಲೆ ಇರಬೇಕು?

ಇಂದಿನಿಂದ ಕರುನಾಡಿನಲ್ಲಿ SIR  ಶುರು – ಹೇಗೆ ನಡೆಯುತ್ತೆ? ನಿಮ್ಮ ಹತ್ತಿರ ಯಾವ ದಾಖಲೆ ಇರಬೇಕು?

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯವು ಇಂದಿನಿಂದ ( ಜೂನ್ 30ರಿಂದ ಃ ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು (BLO) ನಿಮ್ಮ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ.

ಇದನ್ನೂ ಓದಿ: ಬ್ರೆಝಿಲ್ ಭರ್ಜರಿ ಕಂಬ್ಯಾಕ್ – ಜಪಾನ್ ವಿರುದ್ಧ ಕೊನೇ ಕ್ಷಣದಲ್ಲಿ ರೋಚಕ ಜಯ

ನಿಮ್ಮ ವೋಟರ್ ಐಡಿಯಲ್ಲಿ ಹೆಸರು, ವಿಳಾಸ ತಪ್ಪುಗಳಿದ್ದರೆ ಸೂಕ್ತ ತಿದ್ದುಪಡಿ ಮಾಡಲು, 18 ವರ್ಷ ತುಂಬಿದ ಹೊಸ ಮತದಾರರ ಹೆಸರು ಸೇರಿಸಲು ಹಾಗೂ ವಲಸೆ ಹೋದವರು ಅಥವಾ ಮೃತಪಟ್ಟವರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲು ಬಿಎಲ್‌ಒಗಳು ಮನೆಗೆ ಬಂದಾಗ ಎಸ್‌ಐಆರ್ ಅರ್ಜಿಯನ್ನು ನೀಡಲಿದ್ದಾರೆ. ಸಾರ್ವಜನಿಕರು ಈ ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ, ಸಹಿ ಹಾಕಿ, ಅಗತ್ಯ ದಾಖಲೆಗಳಾದ ಕುಟುಂಬ ಸದಸ್ಯರ ಗುರುತಿನ ಚೀಟಿ, ವೋಟರ್ ಐಡಿ, ಆಧಾರ್ ಕಾರ್ಡ್, ವಾಸ ಸ್ಥಳ ದೃಢೀಕರಣ ಪತ್ರ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಸ್ಥಳದಲ್ಲೇ ಅಧಿಕಾರಿಗಳಿಗೆ ನೀಡಬೇಕು. ಒಂದಕ್ಕಿಂತ ಹೆಚ್ಚು ಕಡೆ ನೋಂದಣಿಯಾಗಿದ್ದರೆ ಅಥವಾ ವಂಶಾವಳಿ ಜೋಡಣೆಯಾಗದಿದ್ದರೆ ಅಂತಹ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ.

SIR ವೇಳಾಪಟ್ಟಿ

ಜೂನ್ 30 ರಿಂದ ಜುಲೈ 29: ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಮತ್ತು ದಾಖಲೆ ಸಂಗ್ರಹಣೆ.

ಆಗಸ್ಟ್ 5: ಕರಡು ಮತದಾರರ ಪಟ್ಟಿ ಪ್ರಕಟಣೆ.

ಆಗಸ್ಟ್ 5 ರಿಂದ ಸೆಪ್ಟೆಂಬರ್ 4: ಕರಡು ಪಟ್ಟಿಗೆ ಆಕ್ಷೇಪಣೆ ಮತ್ತು ಸಲಹೆ ಸಲ್ಲಿಸಲು ಅವಕಾಶ.

ಆಗಸ್ಟ್ 5 ರಿಂದ ಅಕ್ಟೋಬರ್ 3: ಹಕ್ಕು ಮತ್ತು ಆಕ್ಷೇಪಣೆಗಳ ವಿಚಾರಣೆ ಹಾಗೂ ವಿಲೇವಾರಿ.

ಅಕ್ಟೋಬರ್ 7: ಪರಿಷ್ಕೃತಗೊಂಡ ಅಂತಿಮ ಮತದಾರರ ಪಟ್ಟಿ ಪ್ರಕಟಣೆ.

Kishor KV

Leave a Reply

Your email address will not be published. Required fields are marked *