ಜ್ಞಾನವಾಪಿ ಮಸೀದಿ ವಿವಾದ: ಶಿವಲಿಂಗ ಪತ್ತೆಯಾದ ಸ್ಥಳದ ರಕ್ಷಣೆಗೆ ಸುಪ್ರೀಂ ಆದೇಶ

ನವದೆಹಲಿ: ವಾರಾಣಸಿಯ ಜ್ಞಾನವಾಪಿ- ಶೃಂಗಾರ್ ಗೌರಿ ಸಂಕೀರ್ಣ ಆವರಣದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಪ್ರದೇಶವನ್ನು ರಕ್ಷಿಸುವ ತನ್ನ ಮಧ್ಯಂತರ ಆದೇಶವನ್ನು ಮೇ 17ರವರೆಗೆ ಮುಂದುವರಿಯುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಇದನ್ನೂ ಓದಿ:ಮೀಸಲಾತಿ ಪ್ರಮಾಣ ಶೇ.77 ಕ್ಕೆ ಹೆಚ್ಚಿಸುವ ಮಸೂದೆ ಅಂಗೀಕಾರ ಮಾಡಿದ ಜಾರ್ಖಾಂಡ್ ವಿಧಾಸಭೆ
ಮಸೀದಿ ಸಂಕೀರ್ಣದ ಹೊರಗೋಡೆಯ ಮೇಲಿರುವ ಮಾ ಶೃಂಗಾರ್ ಗೌರಿ ಸ್ಥಳಕ್ಕೆ ಪೂಜೆ ಸಲ್ಲಿಸುವ ಹಕ್ಕು ಕೋರಿ ಐವರು ಹಿಂದೂ ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ವಾರಣಾಸಿ ನ್ಯಾಯಾಲಯವು ಏಪ್ರಿಲ್ 8ರಂದು ಆ ಸ್ಥಳದ ಪರಿಶೀಲನೆಗೆ ಅಡ್ವೊಕೇಟ್ ಕಮಿಷನರ್ ಅವರನ್ನು ನೇಮಿಸಿ, ವೀಡಿಯೋ ಸಮೀಕ್ಷೆಯನ್ನು ಸಿದ್ಧಪಡಿಸಲು ಸೂಚಿಸಿತ್ತು. ಮಸೀದಿ ಸಮಿತಿಯು ಇದನ್ನು ಅಲಹಾಬಾದ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು, ಅಲಹಾಬಾದ್ ಹೈಕೋರ್ಟ್ ಏಪ್ರಿಲ್ 21 ರಂದು ಮೇಲ್ಮನವಿಯನ್ನು ವಜಾಗೊಳಿಸಿ, ಸಮಿತಿಯು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠವು ವಾರಣಾಸಿ ಜಿಲ್ಲಾ ನ್ಯಾಯಾಧೀಶರ ಮುಂದೆ ಜ್ಞಾನವಾಪಿ ಸಾಲಿನಲ್ಲಿ ಸಲ್ಲಿಸಲಾದ ಎಲ್ಲಾ ಮೊಕದ್ದಮೆಗಳ ಕ್ರೋಢೀಕರಣಕ್ಕಾಗಿ ಅರ್ಜಿಯನ್ನು ಸಲ್ಲಿಸಲು ಹಿಂದೂ ಸಮಿತಿಗಳಿಗೆ ಅನುಮತಿ ನೀಡಿದೆ.
ಸರ್ವೆ ಕಮಿಷನರ್ ನೇಮಕಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿಯ ಆಡಳಿತ ಸಮಿತಿಯು ಸಲ್ಲಿಸಿದ ಮೇಲ್ಮನವಿಯ ಬಗ್ಗೆ ಮೂರು ವಾರಗಳಲ್ಲಿ ಉತ್ತರವನ್ನು ಸಲ್ಲಿಸುವಂತೆ ನ್ಯಾಯಾಲಯವು ಹಿಂದೂ ಸಮಿತಿಗಳಿಗೆ ಸೂಚಿಸಿದೆ.