ಕರ್ನಾಟಕದಲ್ಲಿ ಗೆದ್ದ ಕಾಟೇರ –  ವೀಕೆಂಡ್‌ನಲ್ಲಿ ಬಾಕ್ಸ್‌ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್

ಕರ್ನಾಟಕದಲ್ಲಿ ಗೆದ್ದ ಕಾಟೇರ –  ವೀಕೆಂಡ್‌ನಲ್ಲಿ ಬಾಕ್ಸ್‌ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್

ನಟ ದರ್ಶನ್ ಅಭಿನಯದ ಕಾಟೇರ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡ್ತಿದೆ. ದರ್ಶನ್ ಅವರ ಸಿನಿಮಾ ಜೀವನದಲ್ಲಿ ಅತ್ಯಂತ ಯಶಸ್ವಿ ಸಿನಿಮಾಗಳಲ್ಲಿ ಒಂದು ಎನ್ನುವ ಖ್ಯಾತಿ ಕಾಟೇರ ಚಿತ್ರಕ್ಕೆ ಸಿಕ್ಕಿದೆ. ನಿರ್ದೇಶಕ ತರುಣ್ ಸುಧೀರ್ ಹಾಗೂ ದರ್ಶನ್ ಅವರದ್ದು ಹಿಟ್ ಕಾಂಬಿನೇಷನ್ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ.

ಇದನ್ನೂ ಓದಿ: ‘2024ಕ್ಕೆ ನಾನು ಅಮ್ಮನಾಗುವೆ’ – ಫೋಟೋ ಸಮೇತ ತಾಯಿಯಾಗುವ ಖುಷಿ ಹಂಚಿಕೊಂಡ ನಟಿ ಅದಿತಿ ಪ್ರಭುದೇವ

ಕಾಟೇರ ಸಿನಿಮಾ ರಿಲೀಸ್ ಆಗಿ ಒಂದೇ ದಿನಕ್ಕೆ ಕೋಟಿ ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ ಹರಿದು ಬಂದಿತ್ತು. ಕಾಟೇರ ಸಿನಿಮಾದ ಮೊದಲ ದಿನದ ಗಳಿಕೆ ಅಂದಾಜು 19.79 ಕೋಟಿ ರೂಪಾಯಿ ಎಂದು ಹೇಳಲಾಗಿತ್ತು. ಹಾಗಾಗಿ ಸಹಜವಾಗಿಯೇ ಚಿತ್ರತಂಡ ಮತ್ತು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

ದರ್ಶನ್ ಅಭಿನಯಕ್ಕೆ ಅಭಿಮಾನಿಗಳಿಂದ ಬಹುಪರಾಕ್ ಸಿಕ್ಕಿದೆ. ಡಿಬಾಸ್ ಡಿಬಾಸ್ ಎಂದು ಜಯಘೋಷ ಜೋರಾಗಿಯೇ ಸಾಗಿದೆ. ದರ್ಶನ್ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಕಾಟೇರ ದರ್ಬಾರ್ ಗುರುವಾರ ಮಧ್ಯರಾತ್ರಿಯಿಂದಲೇ ಶುರುವಾಗಿದೆ.

ಮೂರನೇ ದಿನದ ಕಲೆಕ್ಷನ್ ಬರೋಬ್ಬರಿ 20.94 ಕೋಟಿ ಎಂದು ಅಂದಾಜಿಸಲಾಗಿದೆ.  ವೀಕೆಂಡ್ ನಲ್ಲಿ ಕಾಟೇರ ದಾಖಲೆ ರೀತಿಯಲ್ಲಿ ಹಣ ಮಾಡಿದೆ. ಎರಡನೇ ದಿನದ ಕಲೆಕ್ಷನ್ 17.35 ಕೋಟಿ ರೂಪಾಯಿ ಆಗಿದ್ದರೆ. ಮೊದಲ ದಿನ ಮತ್ತು ಎರಡನೇ ದಿನ ಹಾಗೂ ಮೂರನೇ ದಿನದ ಸೇರಿ ಒಟ್ಟು ಮೂರು ದಿನಕ್ಕೆ 58.08 ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ ಹರಿದು ಬಂದಿದೆ.

ಅನೇಕ ಸಿನಿಮಾಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿವೆ. ಆದರೆ, ‘ಕಾಟೇರ’ ಸಿನಿಮಾ ಮಾತ್ರ ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿ ಒಳ್ಳೆಯ ಗಳಿಕೆ ಮಾಡುತ್ತಿದೆ. ಈ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಿದ್ದರೆ ಮತ್ತಷ್ಟು ಕಲೆಕ್ಷನ್ ಆಗುತ್ತಿತ್ತು. ‘ಕಾಟೇರ’ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಲು ಹಲವು ಕಾರಣಗಳಿದ್ದವು. ಈ ಸಿನಿಮಾದ ಟ್ರೇಲರ್ ನೋಡಿ ಜನರು ಮೆಚ್ಚಿಕೊಂಡಿದ್ದರು. ಈ ಚಿತ್ರದಲ್ಲಿ ದರ್ಶನ್ ಅವರು ಎರಡು ಶೇಡ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಳ್ಳಿ ಜೀವನ, ಜಾತಿ ಪದ್ಧತಿ ಮತ್ತಿತ್ಯಾದಿ ವಿಚಾರಗಳ ಬಗ್ಗೆ ಹೇಳಲಾಗಿದೆ. ರಾಕ್ಲೈನ್ ವೆಂಕಟೇಶ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ದರ್ಶನ್ಗೆ ಜೊತೆಯಾಗಿ ಆರಾಧನಾ ರಾಮ್ ನಟಿಸಿದ್ದಾರೆ.

Shwetha M