ಮತ್ತೆ ಜೋರಾದ ಕಾವೇರಿ ಕಿಚ್ಚು – ಕರ್ನಾಟಕ ಬಂದ್ ಎಚ್ಚೆರಿಕೆ, ಸರ್ಕಾರದಿಂದ ತುರ್ತು ಸಭೆ

ಕಾವೇರಿ ನೀರು ವಿವಾದ ಮತ್ತೆ ಜೋರಾಗುವಂತೆ ಕಾಣ್ತಿದೆ. ಒಂದ್ಕಡೆ ಸರ್ಕಾರ ಸಭೆ ಮೇಲೆ ಸಭೆ ನಡೆಸಿದ್ರೆ, ಮತ್ತೊಂದ್ಕಡೆ ಕನ್ನಡ ಪರ ಸಂಘಟನೆಗಳು ತಮಿಳುನಾಡಿಗೆ ನೀರು ಬಿಟ್ರೆ ಕರ್ನಾಟಕ ಬಂದ್ ಮಾಡುವ ಎಚ್ಚೆರಿಕೆ ನೀಡಿದ್ದಾರೆ.
15 ದಿನಗಳಲ್ಲಿ ಸುಮಾರು 4 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ CWRC ಸೂಚನೆ ನೀಡಿದೆ. ಈ ಹಿನ್ನೆಲೆ ನಮಗೆ ಕುಡಿಯಲು ನೀರಿಲ್ಲ, ಅವರಿಗೆ ಹೇಗೆ ಬಿಡುವುದು ಸಾಧ್ಯ ಎಂದು ಕನ್ನಡ ಪರ ಸಂಘಟನೆಗಳು ರೊಚ್ಚಿಗೆದ್ದಿದೆ. ಜೊತೆಗೆ ಬಂದ್ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ:ಕ್ರಿಕೆಟ್ ಗ್ರೌಂಡ್‌ನಲ್ಲಿ ತಲೆ ಕ*ತ್ತರಿಸಿ ಚೆಂಡಾಡಿದ ಪಾಪಿಗಳು – ಬೆಂಗಳೂರಿನಲ್ಲಿ ಡೆಡ್ಲಿ ಮ*ರ್ಡರ್
ಕರ್ನಾಟಕ ತಮಿಳುನಾಡಿಗೆ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವ ಕುರಿತು ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ನಿರ್ದೇಶನವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಬೇಕೇ ಎಂಬುದರ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿತ ಹಾಗೂ ಕುಡಿಯುವ ನೀರಿನ ಅಗತ್ಯವನ್ನು ಉಲ್ಲೇಖಿಸಿ ಅವರು ಈ ಹೇಳಿಕೆ ನೀಡಿದ್ದಾರೆ.
ಕಾವೇರಿ ನೀರು ಹಂಚಿಕೆ ವಿವಾದ ತೀವ್ರಗೊಂಡಿದ್ದು, ರೈತರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಅವರು ತುರ್ತು ಸಭೆ ಕರೆದಿದ್ದಾರೆ. ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸಲಿರುವ ಸಚಿವರು, ಕಾವೇರಿ ವಿಚಾರದಲ್ಲಿ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಚರ್ಚಿಸಲಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕಾವೇರಿ ಕಾನೂನು ಹೋರಾಟದ ಸಂಬಂಧ ದೆಹಲಿಯಲ್ಲಿ ವಕೀಲರೊಂದಿಗೆ ಸಭೆ ನಡೆಸಲಿದ್ದಾರೆ. ಹಿರಿಯ ನ್ಯಾಯವಾದಿ ಮೋಹನ್ ಕಾತರಕಿ ಸೇರಿದಂತೆ ತಜ್ಞರೊಂದಿಗೆ ಅವರು ಮಾತುಕತೆ ನಡೆಸುವ ಸಾಧ್ಯತೆ ಇದೆ.

ನೋಡಿರಿ

