ಉತ್ತರಾಖಂಡದಲ್ಲಿ ಭಾರಿ ಮಳೆ – ಪವಿತ್ರ ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ!

ಉತ್ತರಾಖಂಡದಲ್ಲಿ ಭಾರಿ ಮಳೆ – ಪವಿತ್ರ ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ!

ಉತ್ತರಾಖಂಡದಲ್ಲಿ ಭಾರಿ ಮಳೆಯಾಗುತ್ತಿದೆ. ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪವಿತ್ರ ಕೇದಾರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ರುದ್ರಪ್ರಯಾಗ ಜಿಲ್ಲಾ ಮ್ಯಾಜಿಸ್ಟ್ರೇಟ್ ಮಯೂರ್ ದೀಕ್ಷಿತ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಉತ್ತರಾಖಂಡದಲ್ಲಿ ಭಾರಿ ಮಳೆಯಾಗುತ್ತಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪವಿತ್ರ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮುಂದಿನ ಆದೇಶದ ವರೆಗೆ ಈ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಲವು ರಾಜ್ಯಗಳಲ್ಲಿ ಮುಂದುವರಿದ ಪ್ರವಾಹ ಸ್ಥಿತಿ – ರಾಂಬಾನ್ ಜಿಲ್ಲೆಯಲ್ಲಿ 1ರಿಂದ 10ನೇ ತರಗತಿವರೆಗೆ ರಜೆ ಘೋಷಣೆ

ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಸಚಿವಾಲಯದಲ್ಲಿರುವ ರಾಜ್ಯ ವಿಪತ್ತು ನಿರ್ವಹಣಾ ನಿಯಂತ್ರಣ ಕೊಠಡಿಯನ್ನು ದಿಢೀರ್ ಪರಿಶೀಲನೆ ನಡೆಸಿದ್ದಾರೆ.  ಮಳೆ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅತಿವೃಷ್ಟಿ ವರದಿಯಾಗಿರುವ ಜಿಲ್ಲೆಗಳಲ್ಲಿ ಯಾವುದೇ ತುರ್ತು ಪರಿಸ್ಥಿತಿ ಎದುರಿಸಲು ಸಿದ್ಧರಾಗಿರುವಂತೆ ಸಿಎಂ ಧಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಹರಿದ್ವಾರದಲ್ಲಿ 78 ಮಿಮೀ ಮಳೆಯಾಗಿದ್ದು, ಡೆಹ್ರಾಡೂನ್ (33.2) ಮತ್ತು ಉತ್ತರಕಾಶಿ (27.7) ನಂತರದ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಕೆಲವು ದಿನಗಳ ಕಾಲ ಈ ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ನಿರೀಕ್ಷೆಯಿದೆ.

suddiyaana