ಕೇರಳಂನಲ್ಲಿ ಮಳೆರಾಯನ ಆರ್ಭಟ- ಮನೆಗಳು ಜಲಾವೃತ, ಭೂಕುಸಿತಕ್ಕೆ ಮೂವರು ಬಲಿ!

ಕೇರಳಂನಲ್ಲಿ ಮಳೆರಾಯನ ಆರ್ಭಟ- ಮನೆಗಳು ಜಲಾವೃತ,  ಭೂಕುಸಿತಕ್ಕೆ ಮೂವರು ಬಲಿ!

ಕೇರಳದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಇಡುಕ್ಕಿ ಜಿಲ್ಲೆಯಲ್ಲಿ ಹಲವು ಕಡೆ ಭೂಕುಸಿತ ಸಂಭವಿಸಿದೆ. ವಾಗಮನ್, ಅಡೂರ್ಮಲ ಹಾಗೂ ಆದಿಮಾಲಿ ಪ್ರದೇಶಗಳಲ್ಲಿ ಮಳೆಯ ಅಬ್ಬರದಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಒಂದೇ ದಿನ ಸಂಭವಿಸಿದ ಭೂಕುಸಿತಗಳಲ್ಲಿ ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ವಾಗಮನ್ ಪ್ರದೇಶದಲ್ಲಿ ಬೆಟ್ಟ ಕುಸಿದು ಮನೆ ಮೇಲೆ ಬಿದ್ದ ಪರಿಣಾಮ ವೈಕೋಂ ಮೂಲದ ಪ್ರಭಾಕರನ್ ನಾಯರ್ ಮೃತಪಟ್ಟಿದ್ದಾರೆ. ಅಧಿಕಾರಿಗಳು ಸಾವನ್ನು ದೃಢಪಡಿಸಿದರೂ, ನಿರಂತರ ಮಳೆ ಹಾಗೂ ದುರ್ಗಮ ಪರಿಸ್ಥಿತಿಯಿಂದಾಗಿ ಮೃತದೇಹವನ್ನು ಇನ್ನೂ ಹೊರತೆಗೆಯಲು ಸಾಧ್ಯವಾಗಿಲ್ಲ. ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಗೆದ್ದ ನೀರಜ್ ಚೋಪ್ರಾ – 76 ವರ್ಷದಲ್ಲಿ ಮೊದಲ ಚಿನ್ನ ಗೆದ್ದ ಲಂಕಾ

ಕೊಟ್ಟಾಯಂ ಜಿಲ್ಲೆಯ ಪೂಂಜಾರ್‌ನ ಪಯ್ಯನಿತೊಟ್ಟಂನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಜೋಹ್ನಿ ಅವರ ಪುತ್ರ ಜೋಸೆಫ್ ಮೃತಪಟ್ಟಿದ್ದಾರೆ. ಭೂಕುಸಿತದ ಅವಶೇಷಗಳಡಿ ಅವರ ತಾಯಿ ಸಿಲುಕಿರುವ ಶಂಕೆಯಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ. ಜೋಸೆಫ್ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಗಾಯಗಳಿಂದ ಮೃತಪಟ್ಟಿದ್ದಾರೆ.

ಇಡುಕ್ಕಿಯ ಹಲವು ಪ್ರದೇಶಗಳಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ. ಉಪ್ಪುತಾರದಲ್ಲಿ ನಿಲ್ಲಿಸಿದ್ದ ಪೊಲೀಸ್ ಜೀಪ್ ಭೂಕುಸಿತಕ್ಕೆ ಸಿಲುಕಿ ಹಾನಿಯಾಗಿದೆ. ಪುಲ್ಲಕಯಾರ್ ನದಿ ಉಕ್ಕಿ ಹರಿದ ಪರಿಣಾಮ ಕೊಕ್ಕಯಾರ್‌ನ ತಗ್ಗು ಸೇತುವೆ ಮುಳುಗಿದ್ದು, ಸುತ್ತಮುತ್ತಲಿನ ಸುಮಾರು ಆರು ಮನೆಗಳಿಗೆ ನೀರು ನುಗ್ಗಿದೆ. ಅಲ್ಲಿನ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

Kishor KV

Leave a Reply

Your email address will not be published. Required fields are marked *