ಉತ್ತರ ಕನ್ನಡದಲ್ಲಿ ಹೆಚ್ಚಾಗುತ್ತಿದೆ ಮಂಗನ ಕಾಯಿಲೆ – ಕೆಎಫ್​ಡಿಗೆ ಮತ್ತೊಂದು ಬಲಿ

ಉತ್ತರ ಕನ್ನಡದಲ್ಲಿ ಹೆಚ್ಚಾಗುತ್ತಿದೆ ಮಂಗನ ಕಾಯಿಲೆ – ಕೆಎಫ್​ಡಿಗೆ ಮತ್ತೊಂದು ಬಲಿ

ಬೇಸಿಗೆ ಆರಂಭದ ಹಂತದಲ್ಲಿಯೇ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮಂಗನಕಾಯಿಲೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಮಂಗನ ಕಾಯಿಲೆಗೆ ಮತ್ತೊಂದು ಬಲಿಯಾಗಿದೆ.

ಇದನ್ನೂ ಓದಿ: ತಮಿಳುನಾಡಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ – ಪ್ರಧಾನಿ ಮೋದಿ ಆಗಮನಕ್ಕೂ ಮುನ್ನ ಹೈ ಅಲರ್ಟ್‌ ಆದ ಪೊಲೀಸರು!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದೀಗ ಸಿದ್ದಾಪುರ ತಾಲೂಕಿನಲ್ಲಿ 65 ವರ್ಷದ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಇದು ಇಡೀ ಜಿಲ್ಲೆಯಲ್ಲೇ ಮಂಗನ ಕಾಯಿಲೆಗೆ 4ನೇ ಬಲಿಯಾದರೆ, ಸಿದ್ದಾಪುರ ತಾಲೂಕಿನಲ್ಲಿ 3ನೇ ಸಾವಾಗಿದೆ. ವೃದ್ಧನಿಗೆ ಜ್ವರ ಕಾಣಿಸಿದ್ದರಿಂದ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಆಸ್ಪತ್ರೆಯಲ್ಲಿ ಪರಿಶೀಲನೆ ವೇಳೆ ಕೆಎಫ್​ಡಿ ಇರುವು ದೃಢಪಟ್ಟಿತ್ತು. ಸೋಮವಾರ ಈ ವೃದ್ಧ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಕೆಎಫ್​ಡಿ (ಕ್ಯಾಸನೂರು ಫಾರೆಸ್ಟ್​ ಡಿಸೀಸ್) ಲಸಿಕೆ ಇಲ್ಲದ ಕಾರಣ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದೆ. ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಇನ್ನೂ ಸೌಜನ್ಯಕ್ಕೂ ಕೂಡ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡುತ್ತಿಲ್ಲ. ಸರ್ಕಾರದ ಈ ಮೌನಕ್ಕೆ ಸಾರ್ವಜನಿಕರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

Shwetha M