ಖಾದಿ ಉಡುಪಿನ ಜೊತೆಗೆ ನೌಕರರಿಗೆ ಮತ್ತೊಂದು ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ. ಎಂಎಸ್ಐಎಲ್. (MSIL) ಮೂಲಕ ಸೇನಾ ಕ್ಯಾಂಟೀನ್ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗಾಗಿ ‘ಸರ್ಕಾರಿ ನೌಕರರ ಕ್ಯಾಂಟೀನ್’ ಆರಂಭಿಸಲು ಚಿಂತನೆ ನಡೆಸಲಾಗಿದೆ. 2026-27ನೇ ಸಾಲಿನ ಬಜೆಟ್‌ನಲ್ಲಿ ಈ ಯೋಜನೆಯನ್ನು ಘೋಷಿಸಿ, ದಿನಬಳಕೆ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಪೂರೈಸಲು ಉದ್ದೇಶಿಸಲಾಗಿದೆ.