ಸ್ಕಾಲರ್‌ಶಿಪ್ ಕಡಿತ – ಕೇಂದ್ರ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆರೋಪ

ಸ್ಕಾಲರ್‌ಶಿಪ್ ಕಡಿತ – ಕೇಂದ್ರ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆರೋಪ

ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಯುವ ಜನಾಂಗದ ವಿದ್ಯಾರ್ಥಿ ವೇತನವನ್ನು ಕೇಂದ್ರ ಸರ್ಕಾರ ಕಿತ್ತುಕೊಂಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರದ “ಸಬ್ಕಾ ಸಾಥ್, ಸಬ್ಕಾ ವಿಕಾಸ್” ಘೋಷಣೆಯು ದುರ್ಬಲ ವರ್ಗಗಳ ಆಶೋತ್ತರಗಳನ್ನು ಅಣಕಿಸುತ್ತದೆ ಅಂತ ವಾಗ್ದಾಳಿ ನಡೆಸಿದ್ದಾರೆ. ದೇಶದ ದುರ್ಬಲ ವರ್ಗಗಳ ವಿದ್ಯಾರ್ಥಿಗಳಿಗೆ ಅವಕಾಶಗಳು ಸಿಗುವವರೆಗೆ ಮತ್ತು ಅವರ ಕೌಶಲ್ಯಗಳನ್ನು ಪ್ರೋತ್ಸಾಹಿಸುವವರೆಗೆ ಯುವಕರಿಗೆ ಉದ್ಯೋಗಗಳನ್ನು ಹೇಗೆ ಹೆಚ್ಚಿಸಲಾಗುತ್ತದೆ ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ:

“ನರೇಂದ್ರ ಮೋದಿ ಅವರೇ, ನಿಮ್ಮ ಸರ್ಕಾರ ದೇಶದ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ವರ್ಗಗಳ ಯುವಕರ ವಿದ್ಯಾರ್ಥಿವೇತನವನ್ನು ಕಿತ್ತುಕೊಂಡಿದೆ ಎಂದು ಖರ್ಗೆ ಹಿಂದಿಯಲ್ಲಿ ಬರೆದು  ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ನಾಚಿಕೆಗೇಡಿನ ಸರ್ಕಾರಿ ಅಂಕಿಅಂಶಗಳು ಮೋದಿ ಸರ್ಕಾರ ಎಲ್ಲಾ ಸ್ಕಾಲರ್ ಶಿಪ್ ಗಳಲ್ಲಿ ಫಲಾನುಭವಿಗಳನ್ನು ಗಮನಾರ್ಹವಾಗಿ ಇಳಿಕೆ ಮಾಡಿರುವುದು ಮಾತ್ರವಲ್ಲದೇ ವರ್ಷದಿಂದ ವರ್ಷಕ್ಕೆ ಸರಾಸರಿ ಶೇ. 25 ರಷ್ಟು ಕಡಿಮೆ ಹಣವನ್ನು ಖರ್ಚು ಮಾಡಿದೆ ಎಂದು ಆರೋಪಿಸಿದ್ದಾರೆ. SC, ST, OBC ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕಡಿಮೆಯಾಗಿರುವ ವಿದ್ಯಾರ್ಥಿ ವೇತನದ ಮಾಹಿತಿಯನ್ನು ಅವರು ಹಂಚಿಕೊಂಡಿದ್ದಾರೆ.

 

Kishor KV

Leave a Reply

Your email address will not be published. Required fields are marked *