ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾದ ಖುಷ್ಬೂ – ಅಭಿಮಾನಿಗಳಿಗೆ ಆರೋಗ್ಯದ ಬಗ್ಗೆ ಅಪ್‌ಡೇಟ್ ಕೊಟ್ಟ ನಟಿ

ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾದ ಖುಷ್ಬೂ – ಅಭಿಮಾನಿಗಳಿಗೆ ಆರೋಗ್ಯದ ಬಗ್ಗೆ ಅಪ್‌ಡೇಟ್ ಕೊಟ್ಟ ನಟಿ

ದಕ್ಷಿಣಭಾರತ ಚಿತ್ರರಂಗದ ಖ್ಯಾತ ಚಿತ್ರನಟಿ ಖುಷ್ಬೂ ಸುಂದರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗಷ್ಟೇ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ಖುಷ್ಬೂ ಸುಂದರ್ ನೇಮಕಗೊಂಡಿದ್ದರು. ತೀವ್ರ ಜ್ವರದಿಂದ ಖುಷ್ಬೂ ಸುಂದರ್ ಬಳಲುತ್ತಿದ್ದಾರೆ. ತಮ್ಮ ಆರೋಗ್ಯ ಸ್ಥಿತಿಯ ಬಗ್ಗೆ ಖುಷ್ಬೂ ಸುಂದರ್ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ತಾವು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋಗಳನ್ನು ಖುಷ್ಬೂ ಸುಂದರ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಪಠಾಣ್ ಹೀರೋ ‘ನಂಬರ್ 1’ – 100 ಪ್ರಭಾವಿ ವ್ಯಕ್ತಿಗಳಲ್ಲಿ ‘ಶಾರುಖ್ ಖಾನ್’ ಬೆಸ್ಟ್..!

ಆರೋಗ್ಯದ ಬಗ್ಗೆ ಅಪ್‌ಡೇಟ್ ನೀಡುತ್ತಿರುವ ಖುಷ್ಬೂ ಸುಂದರ್, ಅಭಿಮಾನಿಗಳಿಗಾಗಿ ಟ್ವೀಟ್ ಮಾಡಿದ್ದಾರೆ. ‘ಈ ಜ್ವರ ಮಾರಕವಾಗಿದೆ. ಇದು ನನ್ನ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಹೈ ಫೀವರ್, ಕೊಲ್ಲುವಂತಹ ದೇಹ ನೋವು ಮತ್ತು ದೌರ್ಬಲ್ಯದಿಂದ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ನಿಧಾನಗೊಳಿಸು.. ಎಂದು ನಿಮ್ಮ ದೇಹ ಸೂಚನೆ ಕೊಟ್ಟಾಗ ದಯವಿಟ್ಟು ನಿರ್ಲಕ್ಷ್ಯ ಮಾಡಬೇಡಿ. ನಾನೀಗ ಚೇತರಿಕೆಯ ಹಾದಿಯಲ್ಲಿ ಇದ್ದೇನೆ’ ಎಂದು ನಟಿ ಖುಷ್ಬೂ ಸುಂದರ್ ಟ್ವೀಟ್ ಮಾಡಿದ್ದಾರೆ.

ಅಭಿಮಾನಿಗಳು ತಮ್ಮ ನೆಚ್ಚಿನ ನಟಿ ಖುಷ್ಬೂ ಹೇಗಿದ್ದಾರೆ ಎನ್ನುವ ಆತಂಕದಲ್ಲಿದ್ದರು. ನಿನ್ನೆಯಿಂದಲೇ ಹೈದರಾಬಾದ್ ಆಸ್ಪತ್ರೆಯ ಮುಂದೆ ಅಭಿಮಾನಿಗಳು ಜಮಾಯಿಸಿ, ನಟಿಯ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ. ಅಭಿಮಾನಿಗಳ ಆತಂಕವನ್ನು ಗಮನಿಸಿದ ಖುಷ್ಬೂ ತಮ್ಮ ಆರೋಗ್ಯದ ಅಪ್ ಡೇಟ್ ಕೊಟ್ಟಿದ್ದಾರೆ ವಿಪರೀತ ಜ್ವರದಿಂದ ಬಳಲಿ ಹೋಗಿದ್ದೆ. ಅಸಾಧರಣ ನೋವಿತ್ತು. ನನ್ನಿಂದ ತಡೆದುಕೊಳ್ಳಲು ಆಗದೇ ಆಸ್ಪತ್ರೆಗೆ ದಾಖಲಾದೆ. ಈಗ ಜ್ವರ ಕಡಿಮೆ ಆಗಿದೆ. ಆರೋಗ್ಯ ಸುಧಾರಿಸುತ್ತಿದೆ. ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ. ನನಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ ಖುಷ್ಬೂ.

suddiyaana