ಮಗುವಿಗೆ ಜನ್ಮ ನೀಡಿದ ನಟಿ ಕಿಯಾರಾ ಅಡ್ವಾಣಿ – ಸಿದ್ದಾರ್ಥ್‌ ಮನೆಗೆ ಬಂದ ಮಹಾಲಕ್ಷ್ಮೀ!

ಮಗುವಿಗೆ ಜನ್ಮ ನೀಡಿದ ನಟಿ ಕಿಯಾರಾ ಅಡ್ವಾಣಿ – ಸಿದ್ದಾರ್ಥ್‌ ಮನೆಗೆ ಬಂದ ಮಹಾಲಕ್ಷ್ಮೀ!

ಬಾಲಿವುಡ್‌ನ ಸ್ಟಾರ್‌ ಕಪಲ್‌ ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್‌ ಮಲ್ಹೋತ್ರಾ ಮನೆಗೆ ಮಹಾಲಕ್ಷ್ಮೀ ಆಗಮನವಾಗಿದೆ. ಕಿಯಾರಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಖುಷಿಯ ವಿಚಾರವನ್ನ ಈ ದಂಪತಿ   ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಚೀನಾದಲ್ಲಿ ಭಯೋತ್ಪಾದನೆ ವಿರುದ್ಧ ಗುಡುಗಿದ ಜೈ ಶಂಕರ್ – ರಾಜಿ ಮಾಡಿಕೊಳ್ಳದೆ ಕಠಿಣ ನಿರ್ಧಾರ ತೆಗೆದುಕೊಳ್ಳುವ ಎಚ್ಚರಿಕೆ

ಫೆಬ್ರವರಿ 28 ರಂದು, ಸಿದ್ಧಾರ್ಥ್ ಮತ್ತು ಕಿಯಾರಾ ಇನ್ಸ್ಟಾಗ್ರಾಮ್‌ನಲ್ಲಿ ‘ನಮ್ಮ ಜೀವನದ ಶ್ರೇಷ್ಠ ಉಡುಗೊರೆ ಶೀಘ್ರದಲ್ಲೇ ಬರಲಿದೆ ಎಂದು ಪೋಸ್ಟ್‌ ಮಾಡಿದ್ರು. ನಟಿಗೆ ಆಗಸ್ಟ್‌ನಲ್ಲಿ ಮಗು ಜನಿಸಬೇಕಿತ್ತು. ಆದರೆ ಮಗು ಬೇಗನೆ ಜನಿಸಿದೆ. ಕಿಯಾರಾಳನ್ನು ಹೆರಿಗೆಗಾಗಿ ಮುಂಬೈನ ಗಿರ್ಗಾಂವ್ ಪ್ರದೇಶದ ಹೆಚ್‌ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಕಿಯಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಸಿದ್ಧಾರ್ಥ್ ಅವರ ತಾಯಿ ರಿಮ್ಮಾ ಮಲ್ಹೋತ್ರಾ ಮತ್ತು ಕಿಯಾರಾ ಅವರ ಪೋಷಕರು ಜೆನೆವೀವ್ ಮತ್ತು ಜಗದೀಪ್ ಅಡ್ವಾಣಿ ಅವರೊಂದಿಗೆ ಆಸ್ಪತ್ರೆಯಲ್ಲಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ .

ಸಿದ್ಧಾರ್ಥ್ ಮತ್ತು ಕಿಯಾರಾ ಮುಂಬೈನ ಕ್ಲಿನಿಕ್ ಒಂದರಲ್ಲಿ ಕಳೆದ ಕೆಲ ದಿನಗಳ ಹಿಂದಷ್ಟೇ  ಕಾಣಿಸಿಕೊಂಡಿದ್ದರು. ಕಿಯಾರಾ ಪ್ರೆಗ್ನೆನ್ಸಿ ಘೋಷಿಸಿದಾಗಿನಿಂದ, ಕಿಯಾರಾ ಮತ್ತು ಸಿದ್ಧಾರ್ಥ್‌ ಸೋಷಿಯಲ್‌ ಮೀಡಿಯಾದಲ್ಲಿ ಅಷ್ಟೇನು ಆಕ್ಟೀವ್‌ ಆಗಿರಲಿಲ್ಲ.

Shwetha M