ಕಿಚ್ಚ ಸುದೀಪ್‌ಗೆ ಕಾನೂನು ಸಂಕಷ್ಟ! – ನಟನ ವಿರುದ್ಧ ದೂರು ದಾಖಲು!

ಕಿಚ್ಚ ಸುದೀಪ್‌ಗೆ ಕಾನೂನು ಸಂಕಷ್ಟ! – ನಟನ ವಿರುದ್ಧ ದೂರು ದಾಖಲು!

ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್​ ಬಾಸ್​ ಕನ್ನಡ ಸೀಸನ್​ 12 ಪದೇ ಪದೇ ವಿವಾದಕ್ಕೆ ಗುರಿಯಾಗುತ್ತಲೇ ಇದೆ. ಇದೀಗ ಶೋ ಹಾಗೂ ಕಿಚ್ಚ ಸುದೀಪ್‌ ಮೇಲೆ ಕೇಸ್‌ ದಾಖಲಾಗಿದೆ. ನಿರೂಪಣೆ ವೇಳೆ ರಣಹದ್ದು ಬಗ್ಗೆ ತಪ್ಪಾದ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ನಟ ಕಿಚ್ಚ ಸುದೀಪ್ ಹಾಗೂ ಬಿಗ್ ಬಾಸ್ ವಿರುದ್ಧ ಪರಿಸರ ಪ್ರಿಯರು ದೂರು ನೀಡಿದ್ದಾರೆ.

ಇದನ್ನೂ ಓದಿ: ಬಿಗ್‌ಬಾಸ್‌ನಲ್ಲಿ ಮಿಡ್‌ವೀಕ್‌ ಎಲಿಮಿನೇಷನ್!‌ – ಈ ವಾರ ಎರಡು ಬಾರಿ ವೋಟಿಂಗ್‌!

ಬಿಗ್‌ಬಾಸ್‌ ಕನ್ನಡ ಸೀಸನ್‌ 12 ಪದೇ ಪದೇ ವಿವಾದಕ್ಕೆ ಗುರಿಯಾಗುತ್ತಲೇ ಇದೆ. ಇದೀಗ ಬಿಗ್‌ಬಾಸ್‌ ಮಾತ್ರವಲ್ಲ ಕಿಚ್ಚ ಸುದೀಪ್‌ಗೂ ಕಾನೂನು ಸಂಕಷ್ಟ ಎದುರಾಗಿದೆ. ಬಿಗ್‌ಬಾಸ್‌ ಶೋ ಹಾಗೂ ಸುದೀಪ್‌ ವಿರುದ್ಧ ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ರಾಮನಗರದ ಅರಣ್ಯಾಧಿಕಾರಿಗಳಿಗೆ ದೂರು ನೀಡಿದೆ. ವಾರದ ಕಥೆ ಕಿಚ್ಚನ ಜೊತೆ ಕಾರ್ಯಕ್ರಮದಲ್ಲಿ ರಣಹದ್ದು ಬಗ್ಗೆ ಕಿಚ್ಚ ಸುದೀಪ್ ತಪ್ಪಾದ ಮಾಹಿತಿ ಹರಡಿದ್ದಾರೆ ಎಂದು ಆರೋಪಿಸಲಾಗಿದೆ.

ಶೋ ವೇಳೆ ವಿವಿಧ ಪ್ರಾಣಿಗಳ ಫೋಟೋವನ್ನು ನೀಡಿ ಸ್ಪರ್ಧಿಗಳು ಸಹ ಸ್ಪರ್ಧಿಗಳ ಮನಸ್ಥಿತಿಯನ್ನು ಬಿಂಬಿಸಿ ಫೋಟೋ ಹಾಕಬೇಕು ಎಂದು ಹೇಳಲಾಗುತ್ತದೆ. ಆಗ ಸ್ಪರ್ಧಿಯೊಬ್ಬರ ಕುತ್ತಿಗೆಗೆ ರಣಹದ್ದು ಫೋಟೋವೊಂದನ್ನ ಹಾಕಿಸಿ ಹೊಂಚುಹಾಕಿ ಸಂಚು ಮಾಡಿ ಕರೆಕ್ಟ್ ಟೈಂ ಲಬಕ್ ಅಂತ ಹಿಡಿಯುವವರು ಯಾರು? ಎಂದು ಕೇಳಿದ್ದರು‌. ಈ ಪ್ರಶ್ನೆ ಇದೀಗ ವಿವಾದಕ್ಕೆ ಕಾರಣವಾಗಿದೆ.

ರಣಹದ್ದು ಯಾವುದೇ ಜೀವಿಗೆ ಹಾನಿ‌ ಮಾಡುವ ಪಕ್ಷಿ ಅಲ್ಲ. ಅದು ಸತ್ತ ಪ್ರಾಣಿಗಳನ್ನ ಮಾತ್ರ ತಿಂದು ಪರಿಸರದ ಸಮತೋಲನ ಕಾಪಾಡುವ ಪಕ್ಷಿ. ಇದು ಯಾವುದೇ ಪ್ರಾಣಿಗಳಿಗೆ ಹಾನಿ ಮಾಡುವುದಿಲ್ಲ. ಇಂತಹ ಪಕ್ಷಿ ಬಗ್ಗೆ ಜನಪ್ರಿಯ ನಟ ಸುದೀಪ್ ಅವರು ತಪ್ಪು ಮಾಹಿತಿ ನೀಡಿರುವುದು ಸರಿಯಲ್ಲ ಎಂದು ಪರಿಸರ ಪ್ರಿಯರು ವಾದವಾಗಿದೆ.

ಅಳಿವಿನಂಚಿನಲ್ಲಿರೋ ರಣಹದ್ದು ಬಗ್ಗೆ ತಪ್ಪಾದ ಮಾಹಿತಿ ಹರಡಿರುವ ಬಿಗ್ ಬಾಸ್ ಸಂಸ್ಥೆ ಹಾಗೂ ನಟ ಸುದೀಪ್ ಅವರಿಗೆ ಸೂಕ್ತ ರೀತಿಯಲ್ಲಿ ತಿಳುವಳಿಕೆ ನೀಡುವಂತೆ ರಾಮನಗರ ಡಿಸಿಎಫ್ ಹಾಗೂ ಆರ್‌ಎಫ್‌ಓ ಮನ್ಸೂರ್‌ ಅವರಿಗೆ ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ದೂರು ನೀಡಿದೆ.

Shwetha M