ಕಾಟೇರ ಸಿನಿಮಾ ನೋಡೇ ಬಿಟ್ರಾ ಸುದೀಪ್‌? – ಫ್ಯಾನ್ಸ್ ಪ್ರಶ್ನೆಗೆ ಕಿಚ್ಚ ಕೊಟ್ಟ ಉತ್ತರ ಏನು?

ಕಾಟೇರ ಸಿನಿಮಾ ನೋಡೇ ಬಿಟ್ರಾ ಸುದೀಪ್‌? – ಫ್ಯಾನ್ಸ್ ಪ್ರಶ್ನೆಗೆ ಕಿಚ್ಚ ಕೊಟ್ಟ ಉತ್ತರ ಏನು?

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ರಿಲೀಸ್‌ ಆಗಿ 18 ದಿನ ಕಳೆದ್ರೂ ಕೂಡ ಹೌಸ್‌ ಫುಲ್‌ ಪ್ರದರ್ಶನ ಕಾಣ್ತಾ ಇದೆ. ಹಲವು ಸಿನಿಮಾಗಳ ಅಬ್ಬರದ ನಡುವೆಯೂ ಈ ಚಿತ್ರ ಸಕ್ಸಸ್‌ ಕಂಡಿದೆ. ಬಾಕ್ಸ್‌ ಆಫೀಸ್‌ನಲ್ಲೂ ಭರ್ಜರಿ ಗಳಿಕೆ ಮಾಡುತ್ತಿದೆ. ಅನೇಕ ಸೆಲೆಬ್ರಿಟಿಗಳು ಕೂಡ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ‘ಕಾಟೇರ’ ಚಿತ್ರವನ್ನು ಸುದೀಪ್ ನೋಡಿದರೇ ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ಸ್ವತಃ ಸುದೀಪ್ ಅವರೇ ಉತ್ತರ ನೀಡಿದ್ದಾರೆ. ಅವರು ಮಾಡಿರೋ ಟ್ವೀಟ್ ವೈರಲ್ ಆಗಿದೆ.

ಇದನ್ನೂ ಓದಿ :  ‘ಅನಿಮಲ್’ನಿರ್ಮಾಣ ಸಂಸ್ಥೆಯಿಂದಲೇ ಚಿತ್ರ ತಂಡದ ಮೇಲೆ ಕೇಸ್! – ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲ್ಲ?

ಹೌದು, ಕೆಲವು ದಿನಗಳಿಂದ ಕಾಟೇರ  ಸಿನಿಮಾವನ್ನು ಕಿಚ್ಚ ಸುದೀಪ್ ನೋಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಜೊತೆ ಸುದೀಪ್ ಮಾತನಾಡಿ, ಅತೀ ಶೀಘ್ರದಲ್ಲೇ ಸಿನಿಮಾ ನೋಡುತ್ತೇನೆ ಎಂದು ಹೇಳಿದ್ದರು ಎಂದು ಹೇಳಲಾಗಿತ್ತು. ಇದೀಗ ಈ ಮಾತನ್ನ ಕಿಚ್ಚ ಉಳಿಸಿಕೊಂಡಿದ್ದಾರೆ. ಸುದೀಪ್ ಕಾಟೇರ ಸಿನಿಮಾವನ್ನು ವೀಕ್ಷಿಸಿದ್ದಾರೆ. ಈ ಮಾಹಿತಿಯನ್ನು ಸ್ವತಃ ಸುದೀಪ್ ಅವರೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

ಈ ಹಿಂದೆ ನಡೆದ ಸೆಲೆಬ್ರಿಟಿ ಶೋಗೆ ಬರುವಂತೆ ಸುದೀಪ್ ಅವರಿಗೆ ಕಾಟೇರ ತಂಡದಿಂದ ಕರೆ ಹೋಗಿತ್ತು. ಕಿಚ್ಚ ಶೂಟಿಂಗ್ ನಲ್ಲಿ ಇರುವ ಕಾರಣದಿಂದಾಗಿ ಬರುವುದಕ್ಕೆ ಆಗಿರಲಿಲ್ಲ. ಆದರೆ ಅತೀ ಶೀಘ್ರದಲ್ಲೇ ಸಿನಿಮಾ ನೋಡುವುದಾಗಿ ಸುದೀಪ್ ಹೇಳಿದ್ದರು. ಇದೀಗ ಕೊಟ್ಟ ಮಾತಿನಂತೆ ಸಿನಿಮಾ ವೀಕ್ಷಣೆ ಮಾಡಿದ್ದಾರೆ.

Shwetha M