52ನೇ ವಸಂತಕ್ಕೆ ಕಾಲಿಟ್ಟ ಅಭಿನಯ ಚಕ್ರವರ್ತಿ! – ಕೇಕ್ ಕತ್ತರಿಸಿ ಅಭಿಮಾನಿಗಳ ಜೊತೆ ಸಂಭ್ರಮಿಸಿದ ಕಿಚ್ಚ ಸುದೀಪ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಸ್ಯಾಂಡಲ್‌ವುಡ್ ಬಾದ್‌ಷಾ ಸುದೀಪ್ 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಬಾರಿ ಕಿಚ್ಚ ಸುದೀಪ್ ತಮ್ಮ ಹುಟ್ಟುಹಬ್ಬವನ್ನ ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಆಚರಿಸಿದ್ದಾರೆ.
ಇದನ್ನೂ ಓದಿ: ABD ಟಾಪ್ ಆಟಗಾರರ ಪಟ್ಟಿಯಲ್ಲಿ ಕೊಹ್ಲಿಗಿಲ್ಲ ಜಾಗ – ಪಾಕ್ ಮಾಜಿ ವೇಗಿಯೇ ವಿಲಿಯರ್ಸ್ ಅಚ್ಚುಮೆಚ್ಚು
1973, ಸೆಪ್ಟೆಂಬರ್ 2ರಂದು ಶಿವಮೊಗ್ಗದಲ್ಲಿ ಜನಿಸಿದ ಸುದೀಪ್ ಇಂದು ಭಾರತ ಚಿತ್ರರಂಗದಲ್ಲಿ ತಮ್ಮದೇ ಛಾಪನ್ನು ಮೂಡಿಸಿದ್ದಾರೆ. ಅದರಲ್ಲಿಯೂ ಕನ್ನಡ ಸಿನಿ ದುನಿಯಾದದಲ್ಲಿ ಚಕ್ರವರ್ತಿಯಾಗಿ ಮಿಂಚುತ್ತಿದ್ದಾರೆ. ಇಂದು ಕಿಚ್ಚ ಸುದೀಪ್ ತಮ್ಮ 52ನೇ ಹುಟ್ಟುಹಬ್ಬವನ್ನ ಅದ್ಧೂರಿಯಾಗಿ ಬೆಂಗಳೂರಿನ ನಂದಿಲಿಂಕ್ ಗ್ರೌಂಡ್ ನಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಸೆಲಬ್ರೇಟ್ ಮಾಡಿಕೊಂಡಿದ್ದಾರೆ.
ಸುದೀಪ್ ಅವರಿಗೆ ಒತ್ತಡದ ಕೆಲಸವಿದ್ದ ಕಾರಣ ರಾತ್ರಿಯೇ ಅಭಿಮಾನಿಗಳೊಟ್ಟಿಗೆ ಕೇಕ್ ಕತ್ತರಿಸಿ ಬರ್ತ್ ಡೇ ಸೆಲಬ್ರೇಷನ್ ಮಾಡಿದ್ದಾರೆ. ಕಿಚ್ಚ ಸುದೀಪ್ ಭೇಟಿಗಾಗಿ, ಅವರ ಹುಟ್ಟುಹಬ್ಬ ಆಚರಣೆಗಾಗಿ ಕಾದ ಅಭಿಮಾನಿಗಳನ್ನ ನಿರಾಸೆಗೊಳಿಸದೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕಿಚ್ಚ ಸುದೀಪ್ ರಾತ್ರಿ ಕೇಕ್ ಕತ್ತರಿಸಿದ ಬಳಿಕ ಅಭಿಮಾನಿಗಳ ಮುಂದೆ ಮನಬಿಚ್ಚಿ ಮಾತಾಡಿದ್ದಾರೆ. ಇದೇ ವೇಳೆ ಬಿಗ್ ಸ್ಕ್ರೀನ್‌ನಲ್ಲಿ ಅಭಿಮಾನಿಗಳಿಗಾಗಿ ಮಾರ್ಕ್ ಟೈಟಲ್ ಟೀಸರ್ ಅನ್ನೂ ಸಹ ಪ್ರಸಾರ ಮಾಡಲಾಯಿತು.
ಇನ್ನು ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಮಾರ್ಕ್ ಸಿನಿಮಾದ ಟೈಟಲ್ ಟೀಸರ್ ಸಹ ರಿಲೀಸ್ ಆಗಿದೆ. ಕಿಚ್ಚನ ಲುಕ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಸಿನಿಮಾ ಇದೇ ವರ್ಷ ಕ್ರಿಸ್‌ಮಸ್‌ಗೆ ಬರಲಿದೆ. ಸುದೀಪ್ ಬರ್ತ್ ಡೇ ದಿನ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ಕೊಟ್ಟಿದ್ದಾರೆ. ಇನ್ನು ಇದೇ ತಿಂಗಳಾಂತ್ಯಕ್ಕೆ ಬಿಗ್ ಬಾಸ್ ಕೂಡಾ ಶುರುವಾಗಲಿದ್ದು, ಅಷ್ಟರಲ್ಲಿ ಮಾರ್ಕ್ ಸಿನಿಮಾದ ಕೆಲಸಗಳನ್ನ ಪೂರ್ಣಗೊಳಿಸುವತ್ತ ಗಮನಹರಿಸಿದ್ದಾರೆ ಸುದೀಪ್.

ನೋಡಿರಿ

