ಡಿಸಿಎಂ ಡಿಕೆಶಿ ನಿವಾಸಕ್ಕೆ ಕಿಚ್ಚ ಸುದೀಪ್ ಧಿಡೀರ್ ಭೇಟಿ – ಕಾರಣ ಏನು?
ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) 2025 ಪಂದ್ಯಾವಳಿ ಆರಂಭಕ್ಕೆ ಇನ್ನು 3 ದಿನಗಳು ಬಾಕಿ ಇದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಸಿಎಲ್ ಪಂದ್ಯಾವಳಿಗೆ ಅದ್ದೂರಿ ಚಾಲನೆ ಸಿಗಲಿದೆ. ಇದೀಗ ಕಿಚ್ಚ ಸುದೀಪ್ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಸೀಸನ್- 11ರ ಉದ್ಘಾಟನೆ ಸಮಾರಂಭಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಆಹ್ವಾನಿಸಿದ್ದಾರೆ.
ಇದನ್ನೂ ಓದಿ: ಅಬ್ಬಾ.. 8 ತಿಂಗಳ ಕುರಿಗೆ ಲಕ್ಷ ಲಕ್ಷ – ಸಖತ್ ಟ್ರೆಂಡ್ ಆಯ್ತು ಬಂಡೂರು ತಳಿ
ಫೆಬ್ರುವರಿ 8 ರಂದು ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) ಸೀಸನ್- 11ರ ಉದ್ಘಾಟನೆ ಕಾರ್ಯಕ್ರಮ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಿಚ್ಚ ಸುದೀಪ್ ಅವರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಆಹ್ವಾನಿಸಿದ್ದಾರೆ. ಇನ್ನು ಈ ಬಾರಿ ಸುದೀಪ್ ಅವರ ನೇತೃತ್ವದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡ ಮುನ್ನಡೆಯಲಿದ್ದು ಟ್ರೋಫಿ ಗೆಲ್ಲುವ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.
ಉದ್ಯಮಿ ಅಶೋಕ್ ಖೇಣಿಯವರು ತಂಡದ ಮಾಲೀಕರಾಗಿದ್ದು ಸುದೀಪ್ ಅವರ ನೇತೃತ್ವದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಟೀಮ್ ಮುನ್ನಡೆಯಲಿದೆ. ಕಳೆದ ಬಾರಿ ರನ್ನರ್ ಅಪ್ ಆಗಿದ್ದ ಕರ್ನಾಟಕ ಬುಲ್ಡೋಜರ್ಸ್ ಈ ಬಾರಿ ಟ್ರೋಫಿ ಗೆಲ್ಲುವ ನಿರೀಕ್ಷೆಯಿಂದ ಅಖಾಡಕ್ಕೆ ಎಂಟ್ರಿ ಕೊಡುತ್ತಿದೆ. ಮೊದಲ ಪಂದ್ಯ ಬೆಂಗಳೂರಲ್ಲಿ ಫೆ.8 ರಂದು ನಡೆಯಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ರೈನೋಸ್ ಹಾಗೂ ಬೆಂಗಾಲ್ ಟೈಗರ್ಸ್ ಸೆಣಸಾಡಲಿವೆ. ಇದರ ನಂತರ 2ನೇ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಹಾಗೂ ತೆಲುಗು ವಾರಿಯರ್ಸ್ ಪಂದ್ಯವಾಡಲಿವೆ.