ಅಭ್ಯಾಸದ ವೇಳೆ ಕೆ.ಎಲ್ ರಾಹುಲ್ ಕೈಗೆ ಗಾಯ – ಎರಡನೇ ಟೆಸ್ಟ್ ಪಂದ್ಯ ಆಡುವುದು ಅನುಮಾನ?
ಬಾಂಗ್ಲಾದೇಶ ಮತ್ತು ಟೀಮ್ ಇಂಡಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಹೀಗಿರುವಾಗಲೇ ಮೀರ್‌ಪುರ್‌ನಲ್ಲಿ ನೆಟ್ ನಲ್ಲಿ ಅಭ್ಯಾಸ ಮಾಡುವ ವೇಳೆ ಕೆ.ಎಲ್ ರಾಹುಲ್ ಅವರ ಕೈಗೆ ಗಾಯವಾಗಿದೆ. ಆದರೆ ಈ ಬಗ್ಗೆ ಬಿಸಿಸಿಐ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ರಾಹುಲ್ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಡುತ್ತಾರೋ, ಇಲ್ಲವೋ ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ರಾಹುಲ್ ಇಂಜುರಿ ಬಗ್ಗೆ ಟೀಂ ಇಂಡಿಯಾದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಹೇಳಿಕೆ ನೀಡಿದ್ದು, ಕೆಎಲ್ ರಾಹುಲ್ ಗಾಯ ಗಂಭೀರವಾಗಿಲ್ಲ. ಆದರೆ ಎರಡನೇ ಟೆಸ್ಟ್‌ಗೆ ರಾಹುಲ್ ಫಿಟ್ ಆಗುತ್ತಾರೋ ಇಲ್ಲವೋ ಎಂಬ ಬಗ್ಗೆ ಖಚಿತತೆ ಇಲ್ಲ ಎಂದಿದ್ದಾರೆ.
ಇದನ್ನೂ ಓದಿ : ‘ಮುಂದೊಂದು ದಿನ ಭಾರತದಲ್ಲಿಯೇ ಫಿಫಾ ವಿಶ್ವಕಪ್ ಆಯೋಜನೆ’ – ಪ್ರಧಾನಿ ನರೇಂದ್ರ ಮೋದಿ
ಒಂದು ವೇಳೆ ರಾಹುಲ್ ಗಾಯದ ಸಮಸ್ಯೆಯಿಂದ ಎರಡನೇ ಟೆಸ್ಟ್‌ನಲ್ಲಿ ಆಡದೇ ಇದ್ದರೆ ಭಾರತ ತಂಡಕ್ಕೆ ನಾಯಕತ್ವ ಮತ್ತು ಓಪನಿಂಗ್ ಎರಡೂ ಕೂಡ ಸಮಸ್ಯೆಯಾಗಲಿದೆ. “ಸದ್ಯಕ್ಕೆ ರಾಹುಲ್ ಆರೋಗ್ಯವಾಗಿದ್ದಾರೆ. ಎಲ್ಲ ಸರಿಯಾಗಿದೆ ಎಂದು ಭಾವಿಸುವೆ. ಪ್ರಸ್ತುತ, ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ಅಲ್ಲದೆ ಎರಡನೇ ಟೆಸ್ಟ್ ಆರಂಭಕ್ಕೂ ಮುನ್ನ ಅವರು ಚೇತರಿಸಿಕೊಳ್ಳಲಿ ಎಂದು ಹಾರೈಸುವೆ” ಎಂದು ಟೀಂ ಇಂಡಿಯಾದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಸ್ಪಷ್ಟಪಡಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ನಲ್ಲಿ ಕೆಎಲ್ ರಾಹುಲ್ ಆಡಲಬೇಕಿದೆ. ಒಂದು ವೇಳೆ ರಾಹುಲ್ ಅಲಭ್ಯರಾದರೆ, ಅವರ ಸ್ಥಾನದಲ್ಲಿ ಶುಭಮನ್ ಗಿಲ್ ಜೊತೆ ಯಾರು ಇನ್ನಿಂಗ್ಸ್ ಆರಂಭಿಸುತ್ತಾರೆ ಎಂಬ ಪ್ರಶ್ನೆ ಉದ್ಭವಿಸಲಿದೆ. ಅಲ್ಲದೆ ರೋಹಿತ್ ಹಾಗೂ ಪಾಂಡ್ಯ ಅನುಪಸ್ಥಿತಿಯಲ್ಲಿ ಯಾರು ತಂಡವನ್ನು ಮುನ್ನಡೆಸಲಿದ್ದಾರೆ ಎಂಬುದು ಕೂಡ ದೊಡ್ಡ ಪ್ರಶ್ನೆಯಾಗಿದೆ.