ಏಷ್ಯಾಕಪ್‌ನ ಮೊದಲೆರೆಡು ಪಂದ್ಯಗಳಿಂದ ಕೆ.ಎಲ್ ರಾಹುಲ್ ಔಟ್..!– ವಿಕೆಟ್ ಕೀಪರ್ ವಿಚಾರದಲ್ಲಿ ಶುರುವಾಯ್ತು ತಲೆನೋವು

ಏಷ್ಯಾಕಪ್‌ನ ಮೊದಲೆರೆಡು ಪಂದ್ಯಗಳಿಂದ ಕೆ.ಎಲ್ ರಾಹುಲ್ ಔಟ್..!– ವಿಕೆಟ್ ಕೀಪರ್ ವಿಚಾರದಲ್ಲಿ ಶುರುವಾಯ್ತು ತಲೆನೋವು

ಆಗಸ್ಟ್ 30ರಿಂದ ಏಷ್ಯಾಕಪ್ ಶುರುವಾಗಲಿದ್ದು, ಟೀಮ್ ಇಂಡಿಯಾ ಹುಮ್ಮಸ್ಸಿನಲ್ಲಿಯೇ ಕಣಕ್ಕಿಳಿಯಲಿದೆ. ಆದರೆ, ಕೆ.ಎಲ್ ರಾಹುಲ್ ಮೊದಲೆರೆಡು ಪಂದ್ಯಗಳಿಂದ ಹೊರಗುಳಿದಿರುವುದು ಸ್ವಲ್ಪ ಮಟ್ಟಿಗೆ ಟೀಮ್ ಇಂಡಿಯಾಕ್ಕೆ ಸ್ವಲ್ಪ ಮಟ್ಟಿಗೆ ತಲೆನೋವಾಗಿ ಪರಿಣಮಿಸಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಸೆಪ್ಟೆಂಬರ್ 2 ರಂದು ಪಾಕಿಸ್ತಾನ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ಹಾಗೆಯೇ ಫೈನಲ್ ಪಂದ್ಯ ಸೆಪ್ಟೆಂಬರ್ 17 ರಂದು ನಡೆಯಲಿದೆ.

ಇದನ್ನೂ ಓದಿ: ಚುನಾವಣಾ ಆಯೋಗದ “ನ್ಯಾಷನಲ್‌ ಐಕಾನ್” ಆಗಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಆಯ್ಕೆ

ಏಷ್ಯಾಕಪ್ ಆಡುವ ಟೀಮ್ ಇಂಡಿಯಾ ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಆಗಿ ಕೇವಲ ಇಬ್ಬರು ಆಟಗಾರರು ಮಾತ್ರ ಸ್ಥಾನ ಪಡೆದಿದ್ದಾರೆ. ಇದೀಗ ಫಿಟ್ನೆಸ್ ಸಮಸ್ಯೆಯ ಕಾರಣ ರಾಹುಲ್ ಮೊದಲೆರಡು ಪಂದ್ಯಗಳಲ್ಲಿ ಕಣಕ್ಕಿಳಿಯುತ್ತಿಲ್ಲ. ಹೀಗಾಗಿ ಬದಲಿ ವಿಕೆಟ್ ಕೀಪರ್ ಅನ್ನು ಕಣಕ್ಕಿಳಿಸಬೇಕಾಗಿದೆ. ಆದರೆ 17 ಸದಸ್ಯರ ಬಳಗದಲ್ಲಿ ಬದಲಿ ವಿಕೆಟ್ ಕೀಪರ್ ಆಗಿ ಇರುವುದು ಇಶಾನ್ ಕಿಶನ್ ಮಾತ್ರ. ಒಂದು ವೇಳೆ ಯುವ ಎಡಗೈ ದಾಂಡಿಗನನ್ನು ಕೀಪರ್ ಆಗಿ ಕಣಕ್ಕಿಳಿಸಿದರೆ ಟೀಮ್ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕ ಕೂಡ ಬದಲಾಗಬಹುದು. ಏಕೆಂದರೆ ಇಶಾನ್ ಕಿಶನ್ ಆರಂಭಿಕ ಆಟಗಾರ. ಆದರೆ ಪ್ಲೇಯಿಂಗ್ ಇಲೆವೆನ್ನಿಂದ ಹೊರಗುಳಿದಿರುವ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದ ಬ್ಯಾಟರ್. ಇಲ್ಲಿ ಕಿಶನ್ ಅವರನ್ನು 3ನೇ ಕ್ರಮಾಂಕದಲ್ಲಿ ಆಡಿಸಿದರೆ ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬೇಕಾಗುತ್ತದೆ. ಅಂದರೆ ವಿಕೆಟ್ ಕೀಪರ್ ಬ್ಯಾಟರ್ ಆಗಿ ಇಲ್ಲಿ ಟೀಮ್ ಇಂಡಿಯಾ ಮುಂದೆ ಇಶಾನ್ ಕಿಶನ್ ಎಂಬ ಆಯ್ಕೆಯಿದ್ದರೂ, ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಲಿದೆ. ಪಾಕಿಸ್ತಾನ ವಿರುದ್ಧದ ಪಂದ್ಯದ ಮೂಲಕ ಶ್ರೇಯಸ್ ಅಯ್ಯರ್ ಕಂಬ್ಯಾಕ್ ಮಾಡುವುದು ಖಚಿತವಾಗಿದೆ. ಎಲ್ಲಾ ರೀತಿಯ ಫಿಟ್ನೆಸ್ ಟೆಸ್ಟ್ನಲ್ಲೂ ಅಯ್ಯರ್ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ ಎಂದು ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ತಿಳಿಸಿದ್ದಾರೆ. ಆದರೀಗ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಕಾಣಿಸಿಕೊಂಡರೆ, ಶ್ರೇಯಸ್ ಅಯ್ಯರ್ ಅವರ ಬ್ಯಾಟಿಂಗ್ ಕ್ರಮಾಂಕದಲ್ಲೂ ಬದಲಾವಣೆ ಕಂಡು ಬರಬಹುದು.

ಏಷ್ಯಾಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

suddiyaana