2023ರ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಪ್ರಕಟ – ಕೆ.ಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಗೆ ಸ್ಥಾನ

2023ರ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಪ್ರಕಟ – ಕೆ.ಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಗೆ ಸ್ಥಾನ

2023ರ ಏಷ್ಯಾಕಪ್ ಟೂರ್ನಿಗೆ ಕೆಲವೇ ದಿನಗಳು ಬಾಕಿ ಇದ್ದು ಇವತ್ತು ಟೀಂ ಇಂಡಿಯಾ ಆಟಗಾರರನ್ನ ಪ್ರಕಟ ಮಾಡಲಾಗಿದೆ. ಆಗಸ್ಟ್ 30 ರಿಂದ ಆರಂಭವಾಗಲಿರುವ ಏಕದಿನ ಏಷ್ಯಾಕಪ್‌ಗೆ 17 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ.

ಇದನ್ನೂ ಓದಿ: ಅಬ್ಬಬ್ಬಾ.. ಧೋನಿ ಮಗಳ ಶಾಲಾ ಶುಲ್ಕ ಇಷ್ಟೊಂದಾ? – ಝಿವಾ ಓದುತ್ತಿರುವ ಸ್ಕೂಲ್‌ ಯಾವುದು ಗೊತ್ತಾ?

ದೆಹಲಿಯಲ್ಲಿ ಅಜಿತ್ ಅಗರ್ಕರ್ ನೇತೃತ್ವದಲ್ಲಿ ನಡೆದ ​​ಸಭೆಯಲ್ಲಿ ಆಯ್ಕೆ ಮಾಡಲಾಗಿದ್ದು, ಟೀಂ ಇಂಡಿಯಾ ನಾಯಕತ್ವ ರೋಹಿತ್ ಶರ್ಮಾ ಕೈಯಲ್ಲಿದೆ. ಹಾಗೇ ಉಪನಾಯಕರಾಗಿ ಹಾರ್ದಿಕ್ ಪಾಂಡ್ಯ ಮುಂದುವರೆಯಲ್ಲಿದ್ದಾರೆ. ಕ್ಯಾಪ್ಟನ್ ರೋಹಿತ್ ಶರ್ಮಾ ಟೀಮ್​ನಲ್ಲಿ ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್ , ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್​ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣಗೆ ಸ್ಥಾನ ನೀಡಲಾಗಿದೆ.

ಇನ್ನು ನಿರೀಕ್ಷೆಯಂತೆ ಸಂಜು ಸ್ಯಾಮ್ಸನ್​ ಅವರಿಗೆ ಮೀಸಲು ಆಟಗಾರನಾಗಿ ಅವಕಾಶ ನೀಡಲಾಗಿದೆ. ಇನ್ನು ಬಹಳ ದಿನಗಳ ನಂತರ ಕೆ.ಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಏಷ್ಯಾಕಪ್ ಮೂಲಕ ಟೀಂ ಇಂಡಿಯಾಕ್ಕೆ ಮರಳಿದ್ದಾರೆ. ಆದರೆ ವಿಕೆಟ್ ಕೀಪರ್, ಬ್ಯಾಟರ್ ಸಂಜು ಸ್ಯಾಮ್ಸನ್ ಅವರನ್ನು ಏಕದಿನ ಏಷ್ಯಾಕಪ್ ತಂಡದಿಂದ ಕೈಬಿಡಲಾಗಿದೆ. ಅಲ್ಲದೆ ತಿಲಕ್ ವರ್ಮಾ ಆಯ್ಕೆ ಕೂಡ ಅಚ್ಚರಿ ಮೂಡಿಸಿದೆ.

suddiyaana