ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಕೆ.ಎಲ್ ರಾಹುಲ್ – ಕುಟುಂಬ ಸಮೇತ ಸಿದ್ದಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದ ಕ್ರಿಕೆಟಿಗ

ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಕೆ.ಎಲ್ ರಾಹುಲ್ – ಕುಟುಂಬ ಸಮೇತ ಸಿದ್ದಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದ ಕ್ರಿಕೆಟಿಗ

ಟೀಂ ಇಂಡಿಯಾದ ಸ್ಟಾರ್ ಆಟಗಾರ ಕೆ.ಎಲ್.ರಾಹುಲ್ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ.

ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಸಿದ್ದಗಂಗಾ ಭೇಟಿ ನೀಡಿದ ಕೆ.ಎಲ್.ರಾಹುಲ್ ಶ್ರೀಗಳ ಗದ್ದುಗೆ ದರ್ಶನ ಪಡೆದು ಪೂಜೆಯಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಡಬಲ್ ಸೆಂಚುರಿ ಹೊಡೆದರು ಸಿಗಲಿಲ್ಲ ಪಂದ್ಯಶ್ರೇಷ್ಠ ಪ್ರಶಸ್ತಿ – ಅಭಿಮಾನಿಗಳ ಹೃದಯ ಗೆದ್ದ ಯಶಸ್ವಿ ಜೈಸ್ವಾಲ್

ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಸಿದ್ದಗಂಗಾ ಮಠಕ್ಕೆ ಟೀಮ್ ಇಂಡಿಯಾ ಆಟಗಾರ ಕೆ.ಎಲ್‌ರಾಹುಲ್ ಕುಟುಂಬ ಸಮೇತ ಭೇಟಿ ನೀಡಿದರು. ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಕೆ.ಎಲ್.ರಾಹುಲ್ ಶ್ರೀಗಳ ಗದ್ದುಗೆ ದರ್ಶನ ಪಡೆದು ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಗದ್ದುಗೆ ದರ್ಶನದ ಬಳಿಕ ಕ್ರಿಕೆಟಿಗ ಕೆ.ಎಲ್.ರಾಹುಲ್ ಸಿದ್ದಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದುಕೊಂಡಿದ್ದಾರೆ. ಕೆ.ಎಲ್. ರಾಹುಲ್ ಅವರೊಂದಿಗೆ ತಂದೆ ಲೋಕೇಶ್, ತಾಯಿ ಲೋಕೇಶ್ವರಿ ಕೂಡ ಬಂದಿದ್ದರು. ವಿಷಯ ತಿಳಿದು ಸಾವಿರಾರು ಮಕ್ಕಳು ಸೇರಿದಂತೆ ಅಪಾರ ಸಂಖ್ಯೆಯ ಜನರು ಶ್ರೀಮಠಕ್ಕೆ ಆಗಮಿಸಿದ್ದರು. ಮಠಕ್ಕೆ ಆಗಮಿಸಿದ್ದ ರಾಹುಲ್ ಅವರನ್ನು ಕಣ್ತುಂಬಿಕೊಂಡರು. ಈ ವೇಳೆ, ಮುಗಿಬಿದ್ದ ಜನರನ್ನು ನಿಯಂತ್ರಿಸಲು ಮಠದ ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ರಾಹುಲ್ ತಂದೆ ಲೋಕೇಶ್ ರಾಮನಗರ ಜಿಲ್ಲೆ ಮಾಗಡಿ ತಾಲೂಕು ಕಣ್ಣೂರು ಮೂಲದವರಾಗಿದ್ದಾರೆ. ಅವರು ಸಿದ್ಧಗಂಗಾ ಮಠದ ಭಕ್ತರಾಗಿದ್ದಾರೆ. ಸಿದ್ಧಲಿಂಗ ಸ್ವಾಮೀಜಿ ಅವರ ಪೂರ್ವಾಶ್ರಮದ ಊರು ಕೂಡ ರಾಮನಗರ ಜಿಲ್ಲೆಯೇ ಆಗಿದ್ದು, ಈ ಸಮಯದಲ್ಲಿ ಪರಸ್ಪರ ಮಾತುಕತೆಯಲ್ಲಿ ತೊಡಗಿದರು. ಅಲ್ಲದೇ ರಾಹುಲ್ ಅವರ ಚಿಕ್ಕಪ್ಪ ಸಿದ್ಧಗಂಗಾ ಮಠದಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ. ಇದೇ ವೇಳೆ ಮಠದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದ ಕೆ. ಎಲ್. ರಾಹುಲ್ ಅವರು ವಿದ್ಯಾರ್ಥಿಗಳನ್ನು ಉದ್ಧೇಶಿಸಿ ಮಾತನಾಡಿದರು.

ಇಂಗ್ಲೆಂಡ್​ ವಿರುದ್ಧದ 3ನೇ ಟೆಸ್ಟ್​ ಪಂದ್ಯದಿಂದ ಕನ್ನಡಿಗ ಕೆಎಲ್ ರಾಹುಲ್​ ಹೊರಬಿದ್ದಿದ್ದಾರೆ. ಮಂಡಿ ಗಾಯದಿಂದ ಸಂಪೂರ್ಣ ಚೇತರಿಸಿಕೊಳ್ಳದ ಕಾರಣ 3ನೇ ಟೆಸ್ಟ್​ನಿಂದ ಹೊರಗುಳಿದಿದ್ದಾರೆ.

 

Sulekha