ನಂದಿನಿ ಗ್ರಾಹಕರಿಗೆ ಗುಡ್ನ್ಯೂಸ್ ಕೊಟ್ಟ ಕೆಎಂಎಫ್! – ಹಾಲು, ಮೊಸರು ದರ ಇಳಿಕೆಯಾಗುತ್ತಾ?

ಬೆಲೆ ಏರಿಕೆಯಿಂದಾಗಿ ರಾಜ್ಯದ ಜನರು ಕಂಗೆಟ್ಟು ಹೋಗಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಕೂಡ ಏರಿಕೆಯಾಗಿದೆ. ಇದೀಗ ಕೆಎಂಎಫ್ ರಾಜ್ಯದ ಜನರಿಗೆ ಗುಡ್ನ್ಯೂಸ್ ಕೊಟ್ಟಿದೆ. ಜಿಎಸ್ಟಿ ಪರಿಷ್ಕರಣೆಯಾದ ಬೆನ್ನಲ್ಲೇ ನಂದಿನಿಯ ಕೆಲ ಉತ್ಪನ್ನಗಳ ದರ ಇಳಿಕೆಯಾಗಲಿದೆ.
ಇದನ್ನೂ ಓದಿ: ಮದುವೆ ಆದ್ಮೇಲೆ ಹೀಗೆ ಮಾಡ್ತಿದ್ದಾರೆ.. ಸಹೋದರಿ ಮೇಲೆ ಆರೋಪ ಮಾಡಿದ ಬಿಗ್ ಬಾಸ್ ರಂಜಿತ್!
ಕೆಎಂಎಫ್ ಕೆಲ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸುತ್ತಿತ್ತು. ಬೆಣ್ಣೆ, ತುಪ್ಪ, ಚೀಸ್ ಮೇಲೆ ಮೊದಲು 12% ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಈ ತೆರಿಗೆಯನ್ನು 5%ಕ್ಕೆ ಇಳಿಸಿದ್ದರಿಂದ ಈ ಉತ್ಪನ್ನಗಳ ಬೆಲೆ ಇಳಿಕೆಯಾಗಲಿದೆ. ಪನ್ನಿರ್ ಮತ್ತು ಯುಹೆಚ್ಟಿ ಹಾಲಿಗೆ(ಗುಡ್ ಲೈಫ್) ಮೊದಲು 5% ರಷ್ಟು ಜಿಎಸ್ಟಿ ವಿಧಿಸಲಾಗುತ್ತಿತ್ತು. ಆದರೆ ಈಗ ಈ ಉತ್ಪನ್ನಗಳ ಮೇಲೆ ಶೂನ್ಯ ತೆರಿಗೆ ಹಾಕಲಾಗುತ್ತದೆ. ಹೀಗಾಗಿ ಈ ವಸ್ತುಗಳ ಬೆಲೆ ಇಳಿಕೆಯಾಗುತ್ತಿದೆ. ಸೋಮವಾರದಿಂದಲೇ (ಸೆ.22) ಕೆಲ ಉತ್ಪನ್ನಗಳ ಬೆಲೆ ಇಳಿಕೆಯಾಗಲಿದೆ.
ಹಾಲು, ಮೊಸರು ಬೆಲೆ ಇಳಿಕೆ ಇಲ್ಲ!
ಹಾಲು, ಮೊಸರು ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಹಾಲಿಗೆ ಜಿಎಸ್ಟಿ ಇಲ್ಲ, ಮೊಸರಿಗೆ 5% ರಷ್ಟು ಜಿಎಸ್ಟಿ ವಿಧಿಸಲಾಗುತ್ತಿದೆ. ಹೀಗಾಗಿ ಈ ಎರಡೂ ಉತ್ಪನ್ನಗಳ ಬೆಲೆ ಈಗಿನಂತೆ ಮುಂದುವರಿಯಲಿದೆ. ಈಗಾಗಲೇ ಜಿಎಸ್ಟಿ ಕಡಿಮೆಯಾಗಿರುವ ಉತ್ಪನ್ನಗಳ ದರ ನಿಗಧಿ ಸಂಬಂಧ ಕೆಎಂಎಫ್ ಕೆಲಸ ಶುರು ಮಾಡಿದ್ದು ಶೀಘ್ರವೇ ಅಧಿಕೃತ ಪ್ರಕಟಣೆ ಹೊರಡಿಸಲಿದೆ.
ಸೆ.22 ರಿಂದ ಇಳಿಕೆ ಯಾಕೆ?
ಸೆಪ್ಟೆಂಬರ್ ಮೊದಲ ವಾರದಲ್ಲಿ ದೆಹಲಿಯಲ್ಲಿ ನಡೆದ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ತೆರಿಗೆ ಪರಿಷ್ಕರಣೆ ಮಾಡುವ ಮಹತ್ವದ ನಿರ್ಧಾರ ಕೈಗೊಂಡಿದ್ದವು. 2017ರಲ್ಲಿ ಜಾರಿಯಾದ ಜಿಎಸ್ಟಿಯಲ್ಲಿ 0, 5%, 12%, 18%, 28% ಅಡಿಯಲ್ಲಿ ವಸ್ತುಗಳ ಮೇಲೆ ತೆರಿಗೆ ಹಾಕಲಾಗುತ್ತಿತ್ತು. ಆದರೆ ಈಗ 12% ಮತ್ತು 28% ಸ್ಲ್ಯಾಬ್ ಅನ್ನು ತೆಗೆಯಲಾಗಿದ್ದು ಈ ಪಟ್ಟಿಯಲ್ಲಿದ್ದ ಬಹುತೇಕ ವಸ್ತುಗಳನ್ನು 5% ಮತ್ತು 18% ಶಿಫ್ಟ್ ಮಾಡಲಾಗಿದೆ. ಇದರ ಜೊತೆ ಐಷಾರಾಮಿ ವಸ್ತುಗಳು (ತಂಬಾಕು, ಐಷಾರಾಮಿ ಕಾರುಗಳು ಇತ್ಯಾದಿ) ಮೇಲೆ 40% ತೆರಿಗೆ ಹಾಕಲಾಗುತ್ತದೆ. ತೆರಿಗೆ ಪರಿಷ್ಕರಣೆಯಾದ ದರಗಳು ಸೆ.22 ರಿಂದ ಜಾರಿಗೆ ಬರಬೇಕು ಎಂಬ ನಿರ್ಧಾರವನ್ನು ಜಿಎಸ್ಟಿ ಕೌನ್ಸಿಲ್ ತೆಗೆದುಕೊಂಡ ಹಿನ್ನೆಲೆಯಲ್ಲಿ ಸೋಮವಾರದಿಂದ ದೇಶಾದ್ಯಂತ 99% ರಷ್ಟು ವಸ್ತುಗಳ ಬೆಲೆ ಇಳಿಕೆಯಾಗಲಿದೆ.

ನೋಡಿರಿ

